ಬೆಂಗಳೂರಿನ ಈ ಆಸ್ತಿಗಳಿಗೆ ಎದುರಾಯ್ತು ಸಂಕಷ್ಟ: ಶಿಥಿಲಗೊಂಡ ಗೋಡೆ - ಕಟ್ಟಡಗಳ ಪಟ್ಟಿ ಮಾಡಿ, ತೆರವಿಗೆ ಮುಂದಾದ ಜಿಬಿಎ

Bengaluru Property: ಬೆಂಗಳೂರಿನಲ್ಲಿ ಈಚೆಗೆ ಸಂಭವಿಸಿದ ಮಳೆ ಅನಾಹುತದ ನಂತರ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಎಚ್ಚೆತ್ತುಕೊಂಡಿದೆ. ಹೀಗಾಗಿ ಕೆಲವೊಂದು ಆಸ್ತಿಗಳಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಮೇ 11ರ ಸೋಮವಾರ ಎಂಜಿನಿಯರಿಂಗ್ ಹಾಗೂ ಕಂದಾಯ ವಿಭಾಗದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ವೇಳೆ ಮಾತನಾಡಿದ ಅವರು ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಿಥಿಲಗೊಂಡ, ಅಪಾಯಕಾರಿ ಸ್ಥಿತಿಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಸ್ವತ್ತುಗಳ ಕಂಪೌಂಡ್ ಗೋಡೆಗಳು ಹಾಗೂ ಕಟ್ಟಡಗಳನ್ನು ಪಟ್ಟಿಮಾಡಿ, ಸಾರ್ವಜನಿಕ ಸುರಕ್ಷಾ ದೃಷ್ಟಿಯಿಂದ ತುರ್ತಾಗಿ ತೆರವು ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bengaluru Properties

ಇನ್ನು ಇದೇ ಸಂದರ್ಭದಲ್ಲಿ ಮಳೆಗಾಲದಲ್ಲಿ ತಗ್ಗು ಪ್ರದೇಶ ಹಾಗೂ ಪ್ರವಾಹ ಪೀಡಿತಗೊಳ್ಳುವ, ನೀರು ನಿಲ್ಲುವ ಸ್ಥಳಗಳ ಪಟ್ಟಿ ಮಾಡಿ ಅಂತಹ ಸ್ಥಳಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ವಹಿಸಲು ಹಾಗೂ ಇಂತಹ ಸ್ಥಳದಲ್ಲಿ ನೀರು ನಿಲ್ಲದಂತೆ ಕ್ರಮ ವಹಿಸಲು ಶಾಶ್ವತ ಪರಿಹಾರ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

Bengaluru Properties: ರಸ್ತೆ ಪಕ್ಕದಲ್ಲಿ ಚರಂಡಿ ಹೂಳೆತ್ತುವ ಬೇಗ ಮುಕ್ತಾಯಗೊಳಿಸಿ

ಈಗಾಗಲೇ ಪೂರ್ವ ಮುಂಗಾರು ಪ್ರಾರಂಭವಾಗಿದ್ದು, ಮುಂಗಾರು ಮಳೆಗಾಲಕ್ಕೂ ಮುಂಚಿತವಾಗಿ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಪಕ್ಕದಲ್ಲಿ ಚರಂಡಿಗಳಲ್ಲಿ ಹೂಳು ತೆಗೆಯುವ ಕಾಮಗಾರಿಯನ್ನು ಆದಷ್ಟು ಬೇಗ ಮುಕ್ತಾಯಗೊಳಿಸಿ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವ ಹಾಗೆ ಕ್ರಮ ವಹಿಸಲು ಸೂಚನೆ ನೀಡಿದರು.

ಪ್ರಗತಿಯಲ್ಲಿರುವ ಡಾಂಬರೀಕರಣ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ ಸಾರ್ವಜನಿಕ ಸಂಚಾರಕ್ಕೆ ಗುಣಮಟ್ಟದ ರಸ್ತೆ ಒದಗಿಸಲು ಸೂಚನೆ ನೀಡಿದರು. ಹಾಗೂ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲು ಇರುವ ಎಲ್ಲಾ ಸಮಸ್ಯೆ ಬಗೆಹರಿಸಲು ಸೂಚಿಸಿದರು. ಹಾಗೂ ರಸ್ತೆ ಗುಂಡಿಗಳು ಉಂಟಾಗದಂತೆ ನೋಡಿಕೊಳ್ಳಲು ಹಾಗೂ ಉಂಟಾಗಿರುವ ರಸ್ತೆ ಗುಂಡಿಗಳನ್ನು ತುರ್ತಾಗಿ ಮುಚ್ಚಲು ಸೂಚನೆ ನೀದ್ದಾರೆ.

ಸಭೆಯಲ್ಲಿ ಮುಖ್ಯ ಎಂಜಿನಿಯರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಎಂಜಿನಿಯರರು, ಕಾರ್ಯಪಾಲಕ ಎಂಜಿನಿಯರರು, ಕಂದಾಯ ಅಧಿಕಾರಿಗಳು ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+