Bengaluru Property: ಆಸ್ತಿ ತೆರಿಗೆ ಬಾಕಿ: ಮಾರ್ಚ್ 13ಕ್ಕೆ ಬೆಂಗಳೂರಿನ 81 ಆಸ್ತಿಗಳ ಹರಾಜು ಪ್ರಕ್ರಿಯೆ, ನೀವು ಭಾಗವಹಿಸಬಹುದು
Bengaluru Property: ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರಿಗೆ ಶಾಕ್ ಕೊಡುವುದನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದುವರಿಸಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಲಯ-1 ರಲ್ಲಿ 47 ಆಸ್ತಿಗಳಿಂದ 1,32,18,421 ರೂ. ಹಾಗೂ ವಲಯ-2 ರಲ್ಲಿ 34 ಆಸ್ತಿಗಳಿಂದ 62,18,279 ರೂ. ಒಟ್ಟಾರೆಯಾಗಿ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 87 ಆಸ್ತಿಗಳಿಂದ 1,94,36,700 ರೂ. ಕಂದಾಯ ಬಾಕಿ ಇದೆ. ಮಾರ್ಚ್ 13ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳ ಮಾಲೀಕರು ಪ್ರತಿ ಆರ್ಥಿಕ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ. ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳಲ್ಲಿ, ಆಸ್ತಿ ತೆರಿಗೆ ನಿರ್ಧಾರ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು-2024ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ.

ಸಂಬಂಧಿತ ಕಾಯ್ದೆ ಹಾಗೂ ನಿಯಮಗಳಂತೆ, ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳುವ ನೋಟಿಸ್ ಹಾಗೂ ಬೇಡಿಕೆ ಪತ್ರಗಳನ್ನು ಜಾರಿಗೊಳಿಸಲಾಗಿದೆ. ಸುಸ್ತಿದಾರರ ವಿವರಗಳನ್ನು ಪಾಲಿಕೆಯ ಅಧಿಕೃತ ಜಾಲತಾಣ (https://bbmp.gov.in](https://bbmp.gov.in) ನಲ್ಲಿ ವೀಕ್ಷಿಸಬಹುದಾಗಿದೆ ಹಾಗೂ ಆಸ್ತಿ ತೆರಿಗೆ ಪಾವತಿಸಬಹುದಾಗಿದೆ. ಸಾಕಷ್ಟು ಅವಕಾಶಗಳನ್ನು ನೀಡಿದ ಬಳಿಕವೂ ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರಿಗೆ ನಿಯಮಾನುಸಾರ ಮೊಬೈಲ್ ಸಂದೇಶಗಳ ಮೂಲಕ, ಖುದ್ದಾಗಿ ಹಾಗೂ ಸ್ವತ್ತಿನ ಸ್ಥಳದಲ್ಲಿಯೇ ಪಟ್ಟಿ ಅಂಟಿಸುವ ಮೂಲಕ ನೋಟಿಸ್ ಜಾರಿಗೊಳಿಸಲಾಗಿದೆ. ಸಾಕಷ್ಟು ಅವಕಾಶಗಳಿದ್ದರೂ ಆಸ್ತಿ ತೆರಿಗೆ ಪಾವತಿಸದ ಸ್ವತ್ತುಗಳನ್ನು ಕಾಯ್ದೆ ಮತ್ತು ನಿಯಮಗಳ ಅನ್ವಯ ಹರಾಜು ಪ್ರಕ್ರಿಯೆಗೆ (Distress Sale) ಒಳಪಡಿಸಲು ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈಗಾಗಲೇ ದಿನಾಂಕ: 06/03/2026 ರಂದು ಈ ಸ್ವತುಗಳನ್ನು ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿದ್ದು, ಹರಾಜು ಪ್ರಕ್ರಿಯೆಯಲ್ಲಿ ಹಾಜರಿದ್ದ ಬಿಡ್ದಾರರು ಯಾರೂ ಹರಾಜು ಕೂಗಲು ಮುಂದೆ ಬರದೆ ಇರುವುದರಿಂದ ಈ ಸ್ವತುಗಳನ್ನು ಪಾಲಿಕೆಯ ವಶದಲ್ಲಿರಿಸಲಾಗಿತ್ತು. ಹರಾಜು ಮಾಡಲು ಉದ್ದೇಶಿಸಿರುವ ಸ್ವತ್ತುಗಳನ್ನು ಇದೇ ಶುಕ್ರವಾರ 13/03/2026 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು 560064, ಎನ್.ಇ.ಎಸ್. ಬಳಿ ಇರುವ ಯಲಹಂಕ ಮಿನಿ ವಿಧಾನಸೌಧದ 3ನೇ ಮಹಡಿಯ ಸಭಾಂಗಣದಲ್ಲಿ ವಲಯ-1 ಮತ್ತು ವಲಯ-2ರ ಜಂಟಿ ಆಯುಕ್ತರುಗಳ ಸಮ್ಮುಖದಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಗುವುದು. ಸಾರ್ವಜನಿಕರು/ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಬೆಂಗಳೂರು ಉತ್ತರ ನಗರ ಪಾಲಿಕೆ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹರಾಜು ಪ್ರಕ್ರಿಯೆಗೆ ಮುನ್ನ ಪಟ್ಟಿಯಲ್ಲಿನ ಸ್ವತ್ತಿನ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ ಆ ಸ್ವತ್ತನ್ನು ಹರಾಜಿನಿಂದ ಕೈ ಬಿಡಲಾಗುತ್ತದೆ. ಅಲ್ಲದೇ ಸ್ವತ್ತಿನ ಮಾಲೀಕರು ಹರಾಜು ಪ್ರಕ್ರಿಯೆಗೆ ಮುನ್ನ ತಮ್ಮ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಜಂಟಿ ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications