Bengaluru Property: ಮಾ.6ರಂದು ಜಿಬಿಎ ವ್ಯಾಪ್ತಿಯ ಆಸ್ತಿಗಳ ಹರಾಜು, ಮಾಲೀಕರೇ ಗಮನಿಸಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಂದ ಬಾಕಿ ಆಸ್ತಿ ತೆರಿಗೆ ವಸೂಲಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕೋಟ್ಯಾಂತರ ರೂಪಾಯಿ ಆಸ್ತಿ ತೆರಿಗೆ ಬಾಕಿ ಇದ್ದರೂ, ನೋಟಿಸ್‌ಗೆ ಸ್ಪಂದಿಸದ ಆಸ್ತಿ ಮಾಲೀಕರ ಕಟ್ಟಡಗಳನ್ನು ಹರಾಜು ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಈ ಪೈಕಿ ಹರಾಜು ಪ್ರಕ್ರಿಯೆಗಳು ಆಯಾ ನಗರ ಪಾಲಿಕೆಗಳಿಂದ ನಡೆದಿದೆ. ಯಲಹಂಕದಲ್ಲಿ ಮಾರ್ಚ್ 6ರಂದು ಸಹ ಹಲವು ಆಸ್ತಿಗಳು ಹರಾಜು ಪ್ರಕ್ರಿಯೆ ನಡೆಯಲಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ವಲಯ-1 ರಲ್ಲಿ 47 ಆಸ್ತಿಗಳಿಂದ 1,32,18,421 ರೂಪಾಯಿ ಹಾಗೂ ವಲಯ-2 ರಲ್ಲಿ 34 ಆಸ್ತಿಗಳಿಂದ 62,18,279 ರೂಪಾಯಿ ಒಟ್ಟಾರೆಯಾಗಿ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 87 ಆಸ್ತಿಗಳಿಂದ 1,94,36,700 ರೂಪಾಯಿ ಕಂದಾಯ ಪಾವತಿ ಬಾಕಿ ಇರುವುದರಿಂದ, ಮಾರ್ಚ್ 6 ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಹರಾಜು ಪ್ರಕ್ರಿಯೆ ನಡೆಸಲಾಗುವುದು ಎಂದು ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.

ನಗರ ಪಾಲಿಕೆಯ ವ್ಯಾಪ್ತಿಯಲ್ಲಿನ ಸ್ವತ್ತುಗಳಿಂದ ವಸೂಲಿಯಾಗುವ ಆಸ್ತಿ ತೆರಿಗೆಯನ್ನು ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಬಳಸಲಾಗುತ್ತದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025 ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳ ಮಾಲೀಕರು ಪ್ರತಿ ಆರ್ಥಿಕ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿಸಬೇಕಾಗುತ್ತದೆ.
ತೆರಿಗೆ ಪಾವತಿಸಲು ಅವಕಾಶ
ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳಲ್ಲಿ, ಆಸ್ತಿ ತೆರಿಗೆ ನಿರ್ಧಾರ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು-2024ರ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಿತ ಕಾಯ್ದೆ ಹಾಗೂ ನಿಯಮಗಳಂತೆ, ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳುವ ನೋಟಿಸ್ ಹಾಗೂ ಬೇಡಿಕೆ ಪತ್ರಗಳನ್ನು ಜಾರಿಗೊಳಿಸಲಾಗಿದೆ. ಸುಸ್ತಿದಾರರ ವಿವರಗಳನ್ನು ಪಾಲಿಕೆಯ ಅಧಿಕೃತ ಜಾಲತಾಣ https://bbmp.gov.in ನಲ್ಲಿ ವೀಕ್ಷಿಸಬಹುದು ಮತ್ತು ಆಸ್ತಿ ತೆರಿಗೆ ಪಾವತಿಸಬಹುದಾಗಿದೆ.
ಸಾಕಷ್ಟು ಅವಕಾಶಗಳನ್ನು ನೀಡಿದ ಬಳಿಕವೂ ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರಿಗೆ ನಿಯಮಾನುಸಾರ ಮೊಬೈಲ್ ಸಂದೇಶಗಳ ಮೂಲಕ, ಖುದ್ದಾಗಿ ಹಾಗೂ ಸ್ವತ್ತಿನ ಸ್ಥಳದಲ್ಲಿಯೇ ಪಟ್ಟಿ ಅಂಟಿಸುವ ಮೂಲಕ ನೋಟಿಸ್ ಜಾರಿಗೊಳಿಸಲಾಗಿದೆ.
ಸಾಕಷ್ಟು ಅವಕಾಶಗಳಿದ್ದರೂ ಆಸ್ತಿ ತೆರಿಗೆ ಪಾವತಿಸದ ಸ್ವತ್ತುಗಳನ್ನು ಕಾಯ್ದೆ ಮತ್ತು ನಿಯಮಗಳ ಅನ್ವಯ ಹರಾಜು ಪ್ರಕ್ರಿಯೆಗೆ ಒಳಪಡಿಸಲು ತೀರ್ಮಾನಿಸಲಾಗಿದೆ.
ಹರಾಜು ನಡೆಯುವ ಸ್ಥಳದ ವಿವರ
ಹರಾಜು ಮಾಡಲು ಉದ್ದೇಶಿಸಿರುವ ಸ್ವತ್ತುಗಳನ್ನು ಮಾರ್ಚ್ 06 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಯಲಹಂಕದ, ಎನ್.ಇ.ಎಸ್. ಬಳಿಯ ಮಿನಿ ವಿಧಾನಸೌಧದ 3ನೇ ಮಹಡಿಯ ಸಭಾಂಗಣದಲ್ಲಿ ವಲಯ-1 ಮತ್ತು ವಲಯ-2ರ ಜಂಟಿ ಆಯುಕ್ತರುಗಳ ಸಮ್ಮುಖದಲ್ಲಿ ಹರಾಜು ಪ್ರಕ್ರಿಯೆ ನಡೆಸಲಾಗುವುದು. ಆಸಕ್ತ ಸಾರ್ವಜನಿಕರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಪಾಲಿಕೆ ಕೋರಿದೆ.
ಹರಾಜು ಪ್ರಕ್ರಿಯೆಗೆ ಮುನ್ನ ಪಟ್ಟಿಯಲ್ಲಿನ ಸ್ವತ್ತಿನ ಆಸ್ತಿ ತೆರಿಗೆಯನ್ನು ಪಾವತಿಸಿದಲ್ಲಿ ಆ ಸ್ವತ್ತನ್ನು ಹರಾಜಿನಿಂದ ಕೈ ಬಿಡಲಾಗುತ್ತದೆ. ಅಲ್ಲದೇ ಸ್ವತ್ತಿನ ಮಾಲೀಕರು ಹರಾಜು ಪ್ರಕ್ರಿಯೆಗೆ ಮುನ್ನ ತಮ್ಮ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಜಂಟಿ ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಪಾಲಿಕೆ ಪ್ರಕಟಣೆ ತಿಳಿಸಿದೆ.
-
GBA ದಾಳಿ: ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ವಿರುದ್ಧ ₹2 ಲಕ್ಷ ದಂಡ, ನಾಗರಿಕ ಅಹವಾಲಿಗೆ ಫೋನ್-ಇನ್ ಆರಂಭ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications