Bengaluru Property: ಬೆಂಗಳೂರಿನ ಈ ಭಾಗದ ಆಸ್ತಿದಾರರಿಗೆ ಬಿಗ್‌ ಶಾಕ್‌ ಕೊಟ್ಟ ಬಿಬಿಎಂಪಿ!

Bengaluru Property: ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಶಾಕ್‌ವೊಂದನ್ನು ಕೊಟ್ಟಿದೆ. ಬೆಂಗಳೂರಿನಲ್ಲಿ ಆಸ್ತಿದಾರರು ಶಾಕ್‌ ಆಗುವಂತಹ ಆದೇಶವೊಂದನ್ನು ಮಾಡಿದೆ. ಆದರೆ ಈ ಶಾಕ್‌ ಎಲ್ಲಾ ಆಸ್ತಿದಾರರಿಗೂ ಅಲ್ಲ. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಸಂಬಂಧಿಸಿದೆ. ಬೆಂಗಳೂರಿನಲ್ಲಿ ಆಸ್ತಿದಾರರು ಅವರ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಹೌದು ಆಸ್ತಿ ತೆರಿಗೆಗೆ ಸಂಬಂಧಿಸಿದಂತೆ ಬಿಬಿಎಂಪಿಯು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೀಗ ಬೆಂಗಳೂರಿನ ಈ ಭಾಗದಲ್ಲಿ ಆಸ್ತಿದಾರರ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಮುಂದಾಗಿದೆ. ವಲಯವಾರು ಈಗಾಗಲೇ ನಿಗದಿ ಮಾಡಲಾಗಿದೆ. ಇದೀಗ ಬೆಂಗಳೂರಿನ ನಿರ್ದಿಷ್ಟ ಭಾಗದ ಜನರಿಗೆ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ ಎದುರಾಗಿದೆ ಅದೇನು ಎನ್ನುವ ವಿವರ ಇಲ್ಲಿದೆ.

ಆಸ್ತಿ ತೆರಿಗೆ ಸಂಗ್ರಹ ವಿಚಾರದಲ್ಲಿ ಹಲವು ಕಠಿಣ ಕಾನೂನು ಕ್ರಮಗಳನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ತೆಗೆದುಕೊಳ್ಳುತ್ತಿದೆ. ಇದೀಗ ಬೆಂಗಳೂರಿನ ಮಹದೇವಪುರ ವಲಯದಲ್ಲಿ 60 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡುವುದಕ್ಕೆ ನಿರ್ಧರಿಸಲಾಗಿದೆ ಎಂದು ಬಿಬಿಎಂಪಿಯ ಮಹದೇವಪುರ ವಲಯದ ಜಂಟಿ ಆಯುಕ್ತರಾದ ದಾಕ್ಷಾಯಿಣಿ ಅವರು ತಿಳಿಸಿದ್ದಾರೆ.

Bengaluru Property BBMP Gave Big Shock to Property Owners in This Part of Bengaluru

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹಿಸುವ ವಿಚಾರವಾಗಿ ಕಾರಣ ಕೇಳಿ ನೋಟಿಸ್, ಬೇಡಿಕೆ ನೋಟೀಸ್, ಆಸ್ತಿಗಳ ಮುಟ್ಟೊಗೋಲು, ವಸತಿಯೇತರ ಆಸ್ತಿಗಳಿಗೆ ಬೀಗಮುದ್ರೆ ಸೇರಿದಂತೆ ಇನ್ನಿತರೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆದರೂ ಸಹ ಸಾಕಷ್ಟು ಆಸ್ತಿ ಮಾಲೀಕರು ಹಲವು ತಿಂಗಳು ಹಾಗೂ ವರ್ಷಗಳಿಂದ ಪಾಲಿಕೆಗೆ ಆಸ್ತಿ ತೆರಿಗೆ ಪಾವತಿಸುತ್ತಿಲ್ಲ. ಈ ಸಂಬಂಧ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡುವ ಸಲುವಾಗಿ ಆಸ್ತಿ ತೆರಿಗೆ ಪಾವತಿಸದ ಸುಸ್ತಿದಾರರ ಸ್ಥಿರ ಆಸ್ತಿಗಳನ್ನು ತುರ್ತು ಮಾರಾಟ ಮಾಡಲು ಹರಾಜು ಪ್ರಕ್ರಿಯೆಯನ್ನು ಆರಂಭಿಸಲಾಗುತ್ತಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಹರಾಜು ಪ್ರಕ್ರಿಯೆಯನ್ನು ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್ 156 ಉಪಪ್ರಕರಣ 5ರ ಅಡಿಯಲ್ಲಿ ಮಾಡಲಾಗುತ್ತದೆ. ಹರಾಜಿನಲ್ಲಿ ಸ್ವೀಕರಿಸಿದ ಯಾವುದೇ ಹೆಚ್ಚುವರಿ ಹಣವನ್ನು ಪಾಲಿಕೆಗೆ ಸಂದಾಯವಾಗಬೇಕಿರುವ ಪೂರ್ಣ ಬಾಕಿ ವಸೂಲಿ ಮಾಡಿದ ನಂತರ ಮಾಲೀಕರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ.

ಅದರಂತೆ, ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ವಲಯ ಆಯುಕ್ತರಾದ ರಮೇಶ್ ರವರ ನಿರ್ದೇಶನದಂತೆ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉಪ ವಿಭಾಗಗಳಲ್ಲಿ ಬರುವ ಆಸ್ತಿ ಸ್ವತ್ತುಗಳಿಗೆ ಕಂದಾಯ ಪರಿಷ್ಕರಣೆ/ಬಾಕಿ ಉಳಿಸಿಕೊಂಡಿರುವ ಅಥವಾ ಇದುವರೆಗೂ ಆಸ್ತಿ ತೆರಿಗೆಯನ್ನು ಪಾವತಿಸದಿರುವ ಸ್ವತ್ತುಗಳನ್ನು ಗುರುತಿಸಿ ನಿಯಮಾನುಸಾರವಾಗಿ ಪರಿಶೀಲಿಸಿ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

60 ಆಸ್ತಿಗಳ ಹರಾಜು: ಇನ್ನು ಬೆಂಗಳೂರಿನ ಮಹದೇವಪುರ ವಲಯ ವ್ಯಾಪ್ತಿಗೆ ಬರುವ ಹೊರಮಾವು, ಹೆಚ್.ಎ.ಎಲ್, ಕೆ.ಆರ್ ಪುರಂ, ಮಾರತಹಳ್ಳಿ, ಹೂಡಿ ಹಾಗೂ ವೈಟ್ ಫೀಲ್ಡ್ ಉಪವಿಭಾಗ ಸೇರಿದಂತೆ ಪ್ರತಿ ಉಪ ವಿಭಾಗದಲ್ಲಿಯೂ ತುಂಬಾ ದಿನಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರಿಂದ ತೆರಿಗೆ ವಸೂಲಿಗಾಗಿ ತಲಾ 10 ಆಸ್ತಿಗಳಂತೆ ಒಟ್ಟು 60 ಆಸ್ತಿಗಳನ್ನು 13ನೇ ಫೆಬ್ರವರಿ 2025 ರಂದು ಹರಾಜು ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಬಿಎಂಪಿಯ ನಿರ್ಧಾರದಿಂದ ಜನ ಇದೀಗ ತಮ್ಮ ಆಸ್ತಿಯನ್ನು ಸಂಪೂರ್ಣವಾಗಿ ಕಳೆದುಕೊಳ್ಳುವ ಆತಂಕದಲ್ಲಿ ಇದ್ದಾರೆ. ಜನ ಅವರ ಆಸ್ತಿಯನ್ನು ಉಳಿಸಿಕೊಳ್ಳಬೇಕು ಎಂದಾದರೆ ಆಸ್ತಿ ತೆರಿಗೆಯನ್ನು ಪಾವತಿ ಮಾಡುವುದೊಂದೇ ಉಳಿದಿರುವ ಮಾರ್ಗವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+