Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ
Bengaluru property: ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳನ್ನು ಖರೀದಿ ಮಾಡುವುದಕ್ಕೆ ಮುಂದಾಗಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳನ್ನು ಈ ಹಿಂದೆ ಹರಾಜು ಪ್ರಕ್ರಿಯೆಯ ಮೂಲಕ ಹರಾಜು ಹಾಕಲಾಗುತ್ತಿತ್ತು. ಆದರೆ ಹರಾಜು ಪ್ರಕ್ರಿಯೆಗೆ ಸಕಾರಾತ್ಮಕ ಸ್ಪಂದನೆ ಸಿಗದೆ ಇರುವುದು ಸೇರಿದಂತೆ ಹಲವು ಕಾರಣಗಳಿಗೆ ಇದೀಗ ಪಾಲಿಕೆಯಿಂದಲೇ ಆಸ್ತಿಗಳನ್ನು ಖರೀದಿ ಮಾಡುವುದಕ್ಕೆ ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಇನ್ಮುಂದೆ ನಗರ ಪಾಲಿಕೆಗಳು - ದೀರ್ಘಕಾಲದ ಆಸ್ತಿ ತೆರಿಗೆ ಬಾಕಿದಾರರ ಆಸ್ತಿಗಳನ್ನು ಕೊನೆಯ ಕ್ರಮವಾಗಿ ಸ್ವಾಧೀನಪಡಿಸಿಕೊಳ್ಳಲು ಮುಂದಾಗಿವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರ ಪ್ರದೇಶದಲ್ಲಿ ದೀರ್ಘಕಾಲದಿಂದ ಬಾಕಿಯಿರುವ ಆಸ್ತಿ ತೆರಿಗೆ ವಸೂಲಾತಿಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವುದಕ್ಕೆ ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ. ನಗರ ಪಾಲಿಕೆಗಳು ದೀರ್ಘಕಾಲದ ಬಾಕಿದಾರರ ವಿರುದ್ಧ ಕೊನೆಯ ಹಂತದ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಹೇಳಲಾಗಿದೆ.

Bengaluru property: ಬೆಂಗಳೂರಿನಲ್ಲಿ ಆಸ್ತಿ ಹರಾಜು ಪ್ರಕ್ರಿಯೆ
ಇನ್ನು ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಆಸ್ತಿಗಳ ಹರಾಜು ಪ್ರಕ್ರಿಯೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಹೊಸದೊಂದು ಶಾಕ್ ನೀಡುವುದಕ್ಕೆ ಮುಂದಾಗಿದೆ. ಕಳೆದ ಎರಡು ವರ್ಷಗಳಿಂದಲೂ ಬೆಂಗಳೂರಿನಲ್ಲಿ ಆಸ್ತಿಗಳ ಹರಾಜು ಪ್ರಕ್ರಿಯೆ ನಡೆದಿತ್ತು. ಆದರೆ ಆಸ್ತಿಗಳನ್ನು ಹರಾಜು ಹಾಕುವುದರಿಂದ ಜನರಿಗೆ ಪ್ರಾಪರ್ಟಿ ಟ್ಯಾಕ್ಸ್ ಬಾಕಿ ಕಟ್ಟುವುದಕ್ಕೆ ಅವಕಾಶ ಸಿಗುತ್ತಿತ್ತು. ಆದರೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವೇ ಆಸ್ತಿಗಳನ್ನು ಖರೀದಿ ಮಾಡುವುದಕ್ಕೆ ಮುಂದಾಗಿದೆ. ಇದರಿಂದ ಆಸ್ತಿದಾರರಿಗೆ ಡಬಲ್ ಶಾಕ್ ಎದುರಾಗಿದೆ.
ಇನ್ನು ಬೇಡಿಕೆ ನೋಟಿಸ್ ಜಾರಿ, ಆಸ್ತಿ ಅಟಾಚ್ಮೆಂಟ್ ಹಾಗೂ ಸಾರ್ವಜನಿಕ ಹರಾಜು ಮೂಲಕ ವಸೂಲಾತಿ ಸೇರಿದಂತೆ ಕಾನೂನುಬದ್ಧ ಕ್ರಮಗಳನ್ನು ಹಲವು ಬಾರಿ ತೆಗೆದುಕೊಂಡಿದ್ದರೂ, ಕೆಲವು ಪ್ರಕರಣಗಳಲ್ಲಿ ಬಾಕಿ ಪಾವತಿ ಆಗದೇ ಇರುವುದರಿಂದ ಹಾಗೂ ಹರಾಜು ಪ್ರಕ್ರಿಯೆಯಲ್ಲಿ ಯಾರೂ ಭಾಗವಹಿಸದಿರುವುದರಿಂದ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಇಂತಹ ಅಪರೂಪದ ಸಂದರ್ಭಗಳಲ್ಲಿ, ಕಾನೂನುಬದ್ಧ ಎಲ್ಲಾ ವಸೂಲಾತಿ ಕ್ರಮಗಳು ಪೂರ್ಣಗೊಂಡು ಹರಾಜು ಪ್ರಕ್ರಿಯೆಗಳು ವಿಫಲವಾದಲ್ಲಿ, ನಗರ ಪಾಲಿಕೆಗಳು ಈಗ ಸೂಚಿಸಲಾದ ಅಧಿಸೂಚಿತ ಬೆಲೆಗೆ ಆಸ್ತಿಗಳನ್ನು ಸ್ವತಃ ಖರೀದಿಸುವ ಕ್ರಮ ಕೈಗೊಳ್ಳಲಿವೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಆಸ್ತಿದಾರರಿಗೆ ಹೊಸ ಶಾಕ್
ಇನ್ನು ಬೆಂಗಳೂರಿನ ಆಸ್ತಿದಾರರರಿಗೆ ಇದೀಗ ಹೊಸದೊಂದು ಶಾಕ್ ಎದುರಾಗಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಈಗಾಗಲೇ ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ / ಆಸ್ತಿ ತೆರಿಗೆ ಬಾಕಿ ಇರುವ ಆಸ್ತಿಗಳ ಪಟ್ಟಿ ಮಾಡಲಾಗಿದ್ದು, ಇನ್ಮುಂದಿನ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳೇ ಆಸ್ತಿ ಖರೀದಿ ಮಾಡಲಿವೆ. ಇದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಆಸ್ತಿದಾರರಿಗೆ ಆತಂಕ ಶುರುವಾಗಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications