Bengaluru Property: ಬೆಂಗಳೂರಿಗೆ ಹೊಸ ಪ್ರದೇಶ ಸೇರ್ಪಡೆ: ಈ ಭಾಗದಲ್ಲಿ ಭೂಮಿಗೆ ಬಂಪರ್, ಡಿಕೆಶಿ ಅಪ್ಡೇಟ್ಸ್
Bengaluru Property: ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಬೂಸ್ಟ್ ಆಗುವಂತಹ ಮತ್ತೊಂದು ಸುದ್ದಿಯನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಮೇಲೆ ವಿವಿಧ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಕಾರಣವಾಗಿದೆ. ಇದೀಗ ಬೆಂಗಳೂರಿನ ಆಡಳಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ / ಬೆಂಗಳೂರು ವ್ಯಾಪ್ತಿಗೆ 329.99 ಹೆಕ್ಟೇರ್‌ನಷ್ಟು ಹೊಸ ಪ್ರದೇಶ ಸೇರ್ಪಡೆಯ ಬಗ್ಗೆ ಅಪ್ಡೇಟ್ಸ್ ಕೊಟ್ಟಿದ್ದಾರೆ.
ಬೆಂಗಳೂರು ಅಭಿವೃದ್ಧಿಯಲ್ಲಿ ವೇಗವಾಗಿದೆ. ಅಲ್ಲದೇ ಹೊಸ ಹೊಸ ಯೋಜನೆಗಳಿಂದ ಬೆಂಗಳೂರಿನ ಭೂಮಿಯ ಬೆಲೆಯು ದೇಶದಲ್ಲೇ ಎರಡನೇ ಸ್ಥಾನಕ್ಕೆ ಜಿಗಿತ ಕಂಡಿದೆ. ದೆಹಲಿಯ ನಂತರ ಬೆಂಗಳೂರಿನಲ್ಲಿ ಭೂಮಿಯ ಬೆಲೆ ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೂ ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಬದಲಾಗಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾದ ಸಂದರ್ಭದಲ್ಲಿಯೇ ಇನ್ನಷ್ಟು ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡುವ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ರಾಜ್ಯ ಸರ್ಕಾರವು ಅಪ್ಡೇಟ್ಸ್ ನೀಡಿತ್ತು. ಇದೀಗ ಯಾವ ಪ್ರದೇಶಗಳು ಸೇರ್ಪಡೆ ಆಗಲಿದೆ ಎನ್ನುವ ಬಗ್ಗೆ ಅಪ್ಡೇಟ್ಸ್ ನೀಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದೇನು ?
ಇನ್ನು ಬೆಂಗಳೂರು ನಗರ ಪ್ರದೇಶಕ್ಕೆ ಹೊಸ ಪ್ರದೇಶಗಳ ಸೇರ್ಪಡೆಯ ಬಗ್ಗೆ ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧೀನದಲ್ಲಿರುವ ಗ್ರೇಟರ್ ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶಕ್ಕೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ತಾಲ್ಲೂಕಿನ ಮಲ್ಲಸಂದ್ರ, ಲಕ್ಷ್ಮೀಪುರ ಸೇರಿದಂತೆ 329.99 ಹೆಕ್ಟೇರ್‌ನಷ್ಟು ಹೊಸ ಪ್ರದೇಶಗಳನ್ನು ಸೇರ್ಪಡೆ ಮಾಡಲಾಗಿದೆ. ಸ್ಥಳೀಯ ಆಡಳಿತವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗಿದೆ ಎಂದು ಹೇಳಿದ್ದಾರೆ. ಈ ಕ್ರಮದಿಂದಾಗಿ ಬೆಂಗಳೂರಿನ ಹೊರ ವಲಯಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುವ ನಿರೀಕ್ಷೆ ಮೂಡಿದೆ.
ಬೆಂಗಳೂರು ಪ್ರದೇಶ ವಿಸ್ತೀರ್ಣ ಹೆಚ್ಚಳ
ಇನ್ನು ಬೆಂಗಳೂರಿಗೆ ಹೊಸ ಪ್ರದೇಶಗಳ ಸೇರ್ಪಡೆಯಿಂದಾಗಿ ಬೆಂಗಳೂರು ಆಡಳಿತದ ಒಟ್ಟಾರೆ ವಿಸ್ತೀರ್ಣ ವ್ಯಾಪ್ತಿ ಹೆಚ್ಚಳವಾಗಿದೆ. ಸುಲಭ ಆಡಳಿತವೇ ಜಿಬಿಎ ಉದ್ದೇಶ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
1. ಗ್ರೇಟರ್ ಬೆಂಗಳೂರು ಪ್ರಾಧಿಕಾರ ನಗರ ಯೋಜನೆಗೆ ಮತ್ತಷ್ಟು ಪ್ರದೇಶ ಸೇರ್ಪಡೆ
2. ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿಯ ಮಲ್ಲಸಂದ್ರ, ಮನವರ್ತೆ ಕಾವಲ್, ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಲಕ್ಷ್ಮೀಪುರ, ಕಾನ್ಶಿರಾಮನಗರ, ಲಕ್ಷ್ಮೀಪುರ ಗ್ರಾಮದ ಎಲ್ಲಾ ಬಡಾವಣೆಗಳು ಸೇರಿದಂತೆ 329.99 ಹೆಕ್ಟೇರ್ ಪ್ರದೇಶ ಸೇರ್ಪಡೆ.
3. ಗ್ರೇಟರ್ ಬೆಂಗಳೂರು ಸ್ಥಳೀಯ ಯೋಜನಾ ಪ್ರದೇಶದ 303 ಗ್ರಾಮಗಳ 683.51 ಚದರ ಕಿ.ಮೀ ವ್ಯಾಪ್ತಿ ಇದೀಗ 686.81 ಚದರ ಕಿ.ಮೀಗೆ ವಿಸ್ತಾರವಾಗಿದೆ.
ಬೆಂಗಳೂರಿಗೆ ಇನ್ನಷ್ಟು ಪ್ರದೇಶಗಳ ಸೇರ್ಪಡೆ ಸಾಧ್ಯತೆ: ಇನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಇನ್ನಷ್ಟು ಹೊಸ ಪ್ರದೇಶಗಳು ಸೇರ್ಪಡೆ ಆಗುವ ಸಾಧ್ಯತೆ ಇದೆ. ಬೆಂಗಳೂರಿಗೆ ಐದು ಮಹಾನಗರ ಪಾಲಿಕೆಗಳನ್ನು ರಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರದೇಶಗಳನ್ನು ಸೇರ್ಪಡೆ ಮಾಡಿಕೊಳ್ಳುವ ನಿರೀಕ್ಷೆ ಇದೆ.












Click it and Unblock the Notifications