Bengaluru property: ಪ್ರಾಪರ್ಟಿದಾರರಿಗೆ ಡಿ.ಕೆ ಶಿವಕುಮಾರ್ ಭರ್ಜರಿ ಗುಡ್‌ನ್ಯೂಸ್: ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗೆ

Bengaluru property: ಬೆಂಗಳೂರಿನ ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಡಿ.ಕೆ ಶಿವಕುಮಾರ್ ಅವರು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ಆಸ್ತಿ ಕೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಮಾಲೀಕರೇ ನೋಡಿಕೊಳ್ಳುವಂತಾಗಬೇಕು. ಮಾಲೀಕರಾದ ಮೇಲೆ ಒಪ್ಪಂದ, ನೋಂದಣಿ, ಒಳಗೆ ಹೋದ ನಂತರ ಬೇರೆ ಬೇರೆ ರೀತಿಯಲ್ಲಿ ತಲೆದೋರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದಿದ್ದಾರೆ.

ವಿಶ್ವವೇ ಬೆಂಗಳೂರಿನತ್ತ ತಿರುಗಿ ನೋಡುತ್ತಿದೆ ಎಂದೂ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಜನರಿಗೆ ಸಹಾಯ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದ್ದು, ಜನರು ಕಷ್ಟಪಟ್ಟು ತಲೆಯ ಮೇಲೆ ಸೂರು ಕಟ್ಟಿಕೊಂಡಿದ್ದಾರೆ. ಅದು ಸುಲಭದ ಮಾತಲ್ಲ. ಕಷ್ಟ ಪಟ್ಟು ಗಳಿಸಿರುವ ಆಸ್ತಿಯನ್ನು ಮಾಲೀಕರು ಸರಿಯಾಗಿ ಅನುಭವಿಸಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಇ ಖಾತಾವನ್ನು ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಕ್ರಾಂತಿಯನ್ನೇ ಉಂಟುಮಾಡಿದೆ ಎಂದರು. ಬೆಂಗಳೂರಿನ 40 ಲಕ್ಷ ಆಸ್ತಿಗಳಲ್ಲಿ 26 ಲಕ್ಷ ಆಸ್ತಿಗಳಿಗೆ ಇ ಖಾತಾ ಮಾಡಿಕೊಡಲಾಗಿದೆ. ಇಡೀ ದೇಶದಲ್ಲಿ ಇಂಥ ಮತ್ತೊಂದು ವ್ಯವಸ್ಥೆ ಇಲ್ಲ ಎಂದು ಹೇಳಿದ್ದಾರೆ.

Bengaluru property

ದಾಖಲಾತಿಗಳ ಸರಾಗ ವರ್ಗಾವಣೆಗೆ ಕ್ರಮ: ಡಿಕೆಶಿ

ಅಪಾರ್ಟ್ ಮೆಂಟ್ ಗಲ್ಲಿ STP, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸರ್ಕಾರ ಸುಧಾರಣೆಗಳನ್ನು ತಂದಿದೆ. ಅಂತರ್ಜಲ ವೃದ್ಧಿ, ಕಾವೇರಿ 5 ನೇ ಹಂತಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೆಲವು ಡೆವೆಲಪರ್ ಗಳು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಅವರೊಂದಿಗೂ ಮಾತನಾಡಿ ದಾಖಲಾತಿಗಳ ವರ್ಗಾವಣೆ ಸರಾಗವಾಗಿ ಆಗಬೇಕೆಂದು ಸೂಚಿಸಲಾಗುವುದು. ಸಮಸ್ಯೆಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಇನ್ನು ಆಗಸ್ಟ್ 6 ರವರೆಗೆ ಸಮಯಾವಕಾಶವಿದ್ದು, ಅಭಿಪ್ರಾಯಗಳನ್ನು, ಸಲಹೆಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರಿಗೆ ಬರೆಯಬಹುದು. ಆಸ್ತಿ ಕೊಂಡವರಿಗೆ ಅನುಕೂಲ ವಾಗುವಂತೆ ಈ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದರು.

ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶ

ಈಸ್ ಆಫ್ ಬಿಸಿನೆಸ್ ಗಾಗಿ ನಗರದಲ್ಲಿ ಐದು ಕಾರ್ಪೊರೇಷನ್ ಗಳನ್ನು ರಚಿಸಲಾಗಿದ್ದು, ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ ಬಳಿ, ಅಕ್ಕಪಕ್ಕದ ಅಪಾರ್ಟ್ ಮೆಂಟ್ ಗಳ ಸಮಸ್ಯೆಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶ. ವ್ಯಾಜ್ಯಗಳಿಗೆ ಹೋಗದೆ ಬಗೆಹರಿಸಿಕೊಳ್ಳಲು ಒತ್ತು ನೀಡಲಾಗುತ್ತಿದೆ ಎಂದರು. ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು. ಟೀಂ ಕರ್ನಾಟಕವಾಗಿ ನಾವೆಲ್ಲ ಕೆಲಸ ಮಾಡಬೇಕೆಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.

ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧ

ಬೆಂಗಳೂರಿನಲ್ಲಿ ಬಹಳ ವರ್ಷಗಳಿಂದ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ನಗರದಲ್ಲಿ 1.35 ಕೋಟಿ ವಾಹನಗಳಿದ್ದು , ಗುಂಡಿಗಳನ್ನು ಮುಚ್ಚಲೆಂದೇ 4000 ಕೋಟಿ ವೆಚ್ಚ ಮಾಡಲಾಗಿದೆ. ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ. ಮರು ಅಭಿವೃದ್ಧಿ ವಿಚಾರದಲ್ಲಿಯೂ ಸಮಸ್ಯೆಗಳಿದ್ದು, ನಿರ್ವಹಣೆ ಮುಂತಾದ ಕೆಲಸಗಳಾಗುತ್ತಿದೆ. ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ದಾಖಲಾತಿಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ.

ಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತು

ನಗರದಲ್ಲಿ ಹೈ ರೈಸ್ ಕಟ್ಟಡಗಳ ಬಗ್ಗೆ ಗಮನಹರಿಸಿ, ರಸ್ತೆಗಳನ್ನು ವಿಸ್ತರಿಸುವ ಬಗ್ಗೆ ಒತ್ತು ನೀಡಲಾಗುತ್ತಿದೆ . ನಗರದಲ್ಲಿ 132 ಕಿಮೀ ಪೆರಿಫೆರಲ್ ವರ್ತುಲ ರಸ್ತೆ,( ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ) ನಿರ್ಮಾಣವಾಗುತ್ತಿದೆ ಎಂದರು. ದೇಶದ ವಿವಿಧ ರಾಜ್ಯಗಳಿಗೆ ಹೋಲಿಸಿದರೆ ಭೂ ಸ್ವಾಧೀನಕ್ಕೆ ರಾಜ್ಯದಲ್ಲಿ ರೈತರಿಗೆ ಗರಿಷ್ಠ ಮೊತ್ತದ ಪರಿಹಾರವನ್ನು ನೀಡಲಾಗುತ್ತಿದೆ. ಯಾವುದೇ ಕಟ್ಟಡ ಕಾನೂನುಬದ್ಧವಾಗಿ ನಿರ್ಮಾಣವಾಗಬೇಕು. ಭೂಮಿಯ ಬೆಲೆ ಕಡಿಮೆಯಾಗಬೇಕೆನ್ನುವುದು ನಮ್ಮ ಆಶಯ. ಮುಂಬೈ ನಲ್ಲಿ ಕಟ್ಟಡಗಳ ಬೆಲೆ ಹೆಚ್ಚಿದ್ದು, ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಕಟ್ಟಡಗಳನ್ನು ಕೊಳ್ಳಬಹುದಾಗಿದೆ. ಅದಕ್ಕಾಗಿಯೇ ವಿಶ್ವದ ನಾಯಕರು ಬೆಂಗಳೂರಿನತ್ತ ನೋಡುತ್ತಿದ್ದಾರೆ ಎಂದರು.

ಮಳೆ ನೀರು ಕೊಯ್ಲು ಕಡ್ಡಾಯ

ಅಪಾರ್ಟ್ ಮೆಂಟ್ ಗಳಲ್ಲಿ ಮಳೆ ನೀರು ಕೊಯ್ಲು ಕಡ್ಡಾಯ ಮಾಡುವ ಬಗ್ಗೆ ಸರ್ಕಾರ ಈಗಾಗಲೇ ಕಾರ್ಯಪ್ರವೃತ್ತವಾಗಿದೆ ಎಂದು ಸಿಎಂ ಸಂವಾದದಲ್ಲಿ ಭಾಗಿಯಾಗಿದ್ದ ಅಪಾರ್ಟ್ ಮೆಂಟ್ ಮಾಲೀಕರ ಪ್ರಶ್ನೆಗೆ ಉತ್ತರಿಸಿದರು. ದಾವೋಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲಾ ಹೂಡಿಕೆದಾರರು ಬೆಂಗಳೂರು ನಗರದಲ್ಲಿ ಹೂಡಿಕೆ ಮಾಡಲು ಆಸಕ್ತಿ ವ್ಯಕ್ತಪಡಿಸಿದ ಬಗ್ಗೆ ತಿಳಿಸಿದ ಮುಖ್ಯಮಂತ್ರಿಗಳು ಮುಂಬೈ ಹಾಗೂ ಇತರೆ ನಗರಗಳಲ್ಲಿ ಹೂಡಿಕೆ ಮಾಡುವುದು ದುಬಾರಿಯಾಗಿರುವುದರಿಂದ ವಿದೇಶಿ ಹೂಡಿಕೆದಾರರು ಬೆಂಗಳೂರಿನತ್ತ ಆಕರ್ಷಿತರಾಗಿದ್ದರು ಎಂದರು. ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣವೂ ಬರಲಿರುವುದರಿಂದ ಬೆಂಗಳೂರು ಹೂಡಿಕೆದಾರರಿಗೆ ಕೇಂದ್ರವಾಗಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+