Bengaluru Property: ಆಸ್ತಿ ತೆರಿಗೆ ಬಾಕಿದಾರರಿಗೆ ಜಿಬಿಎ ಶಾಕ್: 61 ಆಸ್ತಿಗಳ ಹರಾಜು ಮಾರ್ಚ್ 6ಕ್ಕೆ ಘೋಷಣೆ
Bengaluru Property: ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್ ಕೊಡುವುದನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದುವರಿಸಿದೆ. ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಲಯ-2ರ ವ್ಯಾಪ್ತಿಯಲ್ಲಿ 61 ಆಸ್ತಿಗಳಿಂದ ಒಟ್ಟು 94.9 ಲಕ್ಷ ರೂ. ಕಂದಾಯ ಬಾಕಿ ಇದೆ. ಇದನ್ನು ಈ ಆಸ್ತಿಗಳ ಹರಾಜು ಪ್ರಕ್ರಿಯೆಯನ್ನು ಮಾರ್ಚ್ 6 ರಂದು ನಡೆಸಲಾಗುವುದು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಜಂಟಿ ಆಯುಕ್ತರಾದ ಸಂಗಪ್ಪ ಅವರು ತಿಳಿಸಿದ್ದಾರೆ.
ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಮಲ್ಲೇಶ್ವರಂ ವಲಯ-2 ವ್ಯಾಪ್ತಿಯಲ್ಲಿ ಬರುವ ಸ್ವತ್ತುಗಳಿಂದ ಸ್ವೀಕರಿಸಲಾಗುವ ಆಸ್ತಿ ತೆರಿಗೆಯು ಪಾಲಿಕೆಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ನಿರ್ವಹಿಸಲು ಉಪಯೋಗಿಸಲಾಗುತ್ತದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ-2025 ರ ಅಡಿಯಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲಾ ಸ್ವತ್ತುಗಳ ಮಾಲೀಕರು ಪ್ರತಿಯೊಂದು ಆರ್ಥಿಕ ಸಾಲಿನಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬೇಕಾಗಿರುತ್ತದೆ. ಆಸ್ತಿ ತೆರಿಗೆ ಪಾವತಿಸದ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಕಾರ್ಯ ವಿಧಾನವನ್ನು ಆಸ್ತಿ ತೆರಿಗೆ ನಿರ್ಧರಣೆ ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು-2024 ರ ಅಡಿಯಲ್ಲಿ ಅಧಿಸೂಚಿಸಲಾಗಿರುತ್ತದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru Property ಆಸ್ತಿದಾರರಿಗೆ ನೋಟಿಸ್ ಯಾಕೆ
ಈ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಸುಸ್ತಿದಾರರಿಗೆ ಕಾರಣ ಕೇಳಿ ಪತ್ರ, ಆಸ್ತಿ ತೆರಿಗೆ ಬೇಡಿಕೆ ಪತ್ರ ಜಾರಿ ಮಾಡಲಾಗಿತ್ತು. ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿವರಗಳನ್ನು ನಗರ ಪಾಲಿಕೆಯ ಆಸ್ತಿ ತೆರಿಗೆ ತಂತ್ರಾಂಶದಲ್ಲಿ ನೀಡಲಾಗಿದೆ (https://bbmptax.karnataka.gov.in ಅಂತರ್ಜಾಲದಲ್ಲಿ ಆಸ್ತಿ ಬಾಕಿ ಉಳಿಸಿಕೊಂಡಿರುವವರ ವಿವರಗಳನ್ನು ವೀಕ್ಷಿಸಬಹುದು / ಆಸ್ತಿ ತೆರಿಗೆ ಪಾವತಿಸಬಹುದು). ಸಾಕಷ್ಟು ಅವಕಾಶಗಳನ್ನು ನೀಡಲಾದ ನಂತರವೂ ಬೇಬಾಕಿ / ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣಗಳ ಮಾಲೀಕರಿಗೆ ನಿಯತಕಾಲಿಕವಾಗಿ ಮೊಬೈಲ್ ಸಂದೇಶಗಳ ಮೂಲಕ ಹಾಗೂ ಸ್ವತ್ತಿನ ಸ್ಥಳದಲ್ಲಿ Proclamation ನೋಟಿಸ್‌ಗಳನ್ನು ನಿಯಮಾನುಸಾರ ಜಾರಿಮಾಡಲಾಗಿದ್ದು, ತಮ್ಮ ಸ್ವತ್ತಿನ ಆಸ್ತಿ ತೆರಿಗೆಯನ್ನು ಪಾವತಿಸಲು ತಿಳಿಸಲಾಗಿದೆ.
ಸ್ವತ್ತಿನ ಮಾಲೀಕರು, ಸಾಕಷ್ಟು ಅವಕಾಶಗಳನ್ನು ನೀಡಿದ ನಂತರವೂ ಆಸ್ತಿತೆರಿಗೆಯನ್ನು ಪಾವತಿಸದ ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ವಯ ಹರಾಜು ಪ್ರಕ್ರಿಯೆಗೆ (Distress sale) ಒಳಪಡಿಸಲು ತೀರ್ಮಾನಿಸಲಾಗಿರುತ್ತದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Bengaluru Property ಆಸ್ತಿ ಹರಾಜು ಪ್ರಕ್ರಿಯೆ ಯಾವಾಗ
ದಿನಾಂಕ: 17-02-2026 & 21-02-2026 ರಂದು ಹರಾಜು ಪ್ರಕ್ರಿಯೆಗೆ ಒಳಪಡಿಸಲಾಗಿತ್ತು, ಹರಾಜು ಪ್ರಕ್ರಿಯೆಯಲ್ಲಿ ಹರಾಜಾಗದೆ ಉಳಿದ ಸ್ವತ್ತುಗಳನ್ನು ಮತ್ತು ದಿನಾಂಕ: 06-03-2026 ರಂದು ಹರಾಜು ಮಾಡಲು ಉದ್ದೇಶಿಸಿರುವ ಸ್ವತ್ತುಗಳನ್ನು ಸಹ ಮುಂದುವರಿದ ಭಾಗವಾಗಿ ಹರಾಜು ಮಾಡುವ ಪ್ರಕ್ರಿಯೆಯನ್ನು ದಿನಾಂಕ 06-03-2026 ರಂದು ಸಮಯ ಬೆಳಿಗ್ಗೆ 11.00 ಗಂಟೆಗೆ ಜಂಟಿ ಆಯುಕ್ತರ ಕಾರ್ಯಾಲಯ, ಮಲ್ಲೇಶ್ವರಂ ವಲಯ-2, 145 26ನೇ ಅಡ್ಡರಸ್ತೆ, 2ನೇ ಬ್ಲಾಕ್ ರಾಜಾಜಿನಗರ, ಬೆಂಗಳೂರು 560010 ಕಚೇರಿಯ ಸಭಾಂಗಣದಲ್ಲಿ ನಡೆಸಲಾಗುವುದು. ಸಾರ್ವಜನಿಕರು/ಆಸಕ್ತರು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹರಾಜು ಪ್ರಕ್ರಿಯೆಯ ಮುನ್ನ ಪಟ್ಟಿಯಲ್ಲಿನ ಸ್ವತ್ತಿಗೆ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಿದ್ದಲ್ಲಿ ಹರಾಜಿನಿಂದ ಕೈಬಿಡಲಾಗುವುದು ಎಂದು ಈ ಮೂಲಕ ತಿಳಿಸಿದೆ. ಜೊತೆಗೆ ಅಂತಹ ಸಂದರ್ಭದಲ್ಲಿ ಸ್ವತ್ತಿನ ಮಾಲೀಕರು ಹರಾಜು ಪ್ರಕ್ರಿಯೆಗೆ ಮುನ್ನ ಅವಹಾಲುಗಳನ್ನು ಜಂಟಿ ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications