Bengaluru property: ಬೆಂಗಳೂರಿನಲ್ಲಿ ಭೂಸ್ವಾಧೀನ, ಟಿಡಿಆರ್ ಪ್ರಕ್ರಿಯೆಗಳಿಗೆ ವೇಗ ಕೊಟ್ಟ ಜಿಬಿಎ

Bengaluru property: ಬೆಂಗಳೂರಿನಲ್ಲಿ ಭೂಸ್ವಾಧೀನ ಮತ್ತು ಟಿಡಿಆರ್ ಪ್ರಕ್ರಿಯೆಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ವೇಗ ನೀಡಿದೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗುತ್ತಿರುವ ಪ್ರಸ್ತಾಪಿತ ಪ್ರಮುಖ ರಸ್ತೆಗಳ ಅಗಲೀಕರಣ, ರಸ್ತೆ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್. ರಮೇಶ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ವೈಟ್‌ಫೀಲ್ಡ್‌ನ ಅಥಶ್ರಿ ಅಪಾರ್ಟ್‌ಮೆಂಟ್ ಬಳಿ ಪ್ರಸ್ತಾಪಿತ ಸಿ.ಡಿ.ಪಿ. 24 ಮೀಟರ್ ಅಗಲದ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ಪ್ರಸ್ತಾಪಿತ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗ, ಭೂಸ್ವಾಧೀನ ಹಾಗೂ ಇತರ ಆಡಳಿತಾತ್ಮಕ ಮತ್ತು ತಾಂತ್ರಿಕ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು. ಪ್ರಸ್ತಾಪಿಸಿರುವ ರಸ್ತೆ ಜಾಗದಲ್ಲಿ ಯಾವುದೇ ಅನಧಿಕೃತ ಕಟ್ಟಡ ಅಥವಾ ನಿರ್ಮಾಣ ಚಟುವಟಿಕೆ ನಡೆಯದಂತೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು. ರಸ್ತೆ ಅಭಿವೃದ್ಧಿಗೆ ಮೀಸಲಾದ ಜಾಗವನ್ನು ಸಂರಕ್ಷಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Bengaluru property

ನಲ್ಲೂರಹಳ್ಳಿ ಮುಖ್ಯರಸ್ತೆಗೆ ಸಂಬಂಧಿಸಿದಂತೆ ಪ್ರಸ್ತಾಪಿತ 18 ಮೀಟರ್ ಸಿಡಿಪಿ ರಸ್ತೆ ಅಭಿವೃದ್ಧಿ ಹಾಗೂ ಅಗಲೀಕರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ, ಭೂಸ್ವಾಧೀನ ಸೇರಿದಂತೆ ಅಗತ್ಯ ಪ್ರಕ್ರಿಯೆಗಳ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದ್ದಾರೆ. ಇದೇ ಸಂದರ್ಭದಲ್ಲಿ ನಲ್ಲೂರಹಳ್ಳಿ ಮುಖ್ಯರಸ್ತೆಯಲ್ಲಿ ಕಸ ಸಂಗ್ರಹವಾಗಿರುವ ಬ್ಲ್ಯಾಕ್ ಸ್ಪಾಟ್ ತ್ಯಾಜ್ಯವನ್ನು ತಕ್ಷಣ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮುಂದಿನ ದಿನಗಳಲ್ಲಿ ಈ ಸ್ಥಳದಲ್ಲಿ ಪುನಃ ತ್ಯಾಜ್ಯ ಸಂಗ್ರಹವಾಗದಂತೆ ನಿಯಮಿತ ಮೇಲ್ವಿಚಾರಣೆ ನಡೆಸಬೇಕು. ಅಗತ್ಯವಿರುವ ಕಡೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ, ನಿಯಮ ಉಲ್ಲಂಘಿಸುವವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಗುಂಜೂರು ಟಿ ಜಂಕ್ಷನ್ - ಟಿಡಿಆರ್ ಮೂಲಕ ಜಾಗ ಪಡೆಯಿರಿ

ಗುಂಜೂರು ಟಿ ಜಂಕ್ಷನ್‌ನಲ್ಲಿ ರಸ್ತೆ ಅಭಿವೃದ್ಧಿ ಹಾಗೂ ರಸ್ತೆ ಅಗಲೀಕರಣಕ್ಕೆ ಅಗತ್ಯವಿರುವ ಜಾಗ ಪಡೆಯುವ ಸಲುವಾಗಿ ಸ್ವತ್ತಿನ ಮಾಲೀಕರೊಂದಿಗೆ ಸಮಾಲೋಚನೆ ನಡೆಸಿ, ಸಮನ್ವಯ ಸಾಧಿಸುವ ಮೂಲಕ ನಿಯಮಾನುಸಾರ ಟಿಡಿಆರ್ ಮೂಲಕ ಅಗತ್ಯ ಜಾಗವನ್ನು ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗುವ ಮರಗಳಿದ್ದಲ್ಲಿ ಪರಿಸರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಾಧ್ಯವಾದಲ್ಲಿ ಅವುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸುವಂತೆ ತಿಳಿಸಿದರು.

ಚಿಕ್ಕ ಬೆಳ್ಳಂದೂರು - ಪ್ರಸ್ತಾಪಿತ ರಸ್ತೆ ಅಭಿವೃದ್ಧಿ ಪರಿಶೀಲನೆ

ಚಿಕ್ಕ ಬೆಳ್ಳಂದೂರಿನಲ್ಲಿ ಪ್ರಸ್ತಾಪಿತ 25 ಮೀಟರ್ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗ, ಭೂಸ್ವಾಧೀನ, ಟಿಡಿಆರ್ ಹಾಗೂ ಇತರ ಸಂಬಂಧಿತ ಪ್ರಕ್ರಿಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಾಕಿ ಇರುವ ಎಲ್ಲಾ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮುಳ್ಳೂರು - ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತುಗಳ ಪರಿಶೀಲನೆ

ಮುಳ್ಳೂರು ಪ್ರದೇಶದಲ್ಲಿ, ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯ ಹೊರಭಾಗದಲ್ಲಿರುವ ಮುಳ್ಳೂರು ಗ್ರಾಮ ಪಂಚಾಯಿತಿ ಪ್ರದೇಶಗಳಿಗೆ ಸಂಬಂಧಿಸಿದಂತೆ ಆಯುಕ್ತರು ಸ್ಥಳ ಪರಿಶೀಲನೆ ನಡೆಸಿದರು. ರಸ್ತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯ ಭಾಗವಾಗಿ ಭೂಸ್ವಾಧೀನಕ್ಕೆ ಒಳಪಡುವ ಸ್ವತ್ತುಗಳನ್ನು ಸ್ಥಳದಲ್ಲಿಯೇ ಪರಿಶೀಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆದುಕೊಂಡರು. ಭೂಸ್ವಾಧೀನ, ಟಿಡಿಆರ್, ಕಂದಾಯ ದಾಖಲೆಗಳು ಹಾಗೂ ಸಂಬಂಧಪಟ್ಟ ಇಲಾಖೆಗಳ ಅನುಮೋದನೆಗೆ ಸಂಬಂಧಿಸಿದ ಪ್ರಕ್ರಿಯೆಗಳಲ್ಲಿ ಯಾವುದೇ ವಿಳಂಬವಾಗದಂತೆ ಸಮನ್ವಯ ಸಾಧಿಸಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Bengaluru property: ಭೂಸ್ವಾಧೀನ - ಟಿಡಿಆರ್ ಪ್ರಕ್ರಿಯೆಗಳಿಗೆ ವೇಗ

ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಭೂಸ್ವಾಧೀನ ಹಾಗೂ ಟಿಡಿಆರ್ ಪ್ರಕ್ರಿಯೆಗಳಿಂದ ವಿಳಂಬವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ವಿಶೇಷ ಆದ್ಯತೆ ನೀಡಿ ಕಾರ್ಯನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದರು. ಸ್ವತ್ತಿನ ಮಾಲೀಕರೊಂದಿಗೆ ಅಗತ್ಯ ಸಮಾಲೋಚನೆ ನಡೆಸಿ, ನಿಯಮಾನುಸಾರ ಟಿಡಿಆರ್ ಅಥವಾ ಭೂಸ್ವಾಧೀನದ ಮೂಲಕ ಜಾಗ ಪಡೆಯುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು. ಕಂದಾಯ, ಟಿಡಿಆರ್ ಹಾಗೂ ಇತರೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಬಾಕಿ ಇರುವ ಕಡತಗಳು ಹಾಗೂ ಅನುಮೋದನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+