Bengaluru Property Good New: ಬೆಂಗಳೂರಿನ ಆಸ್ತಿದಾರರಿಗೆ ಸರ್ಕಾರದಿಂದ ಗುಡ್‌ನ್ಯೂಸ್
Bengaluru Property: ಬೆಂಗಳೂರಿನಲ್ಲಿ ಆಸ್ತಿದಾರರು ಹಾಗೂ ಆಸ್ತಿ ಖರೀದಿದಾರರಿಗೆ ಗುಡ್‌ನ್ಯೂಸ್ ಕೊಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಇದೆ. ಈ ಆಸ್ತಿಗಳ ವಿಚಾರವಾಗಿ ಹಾಗೂ ಈಗಾಗಲೇ ಆಸ್ತಿ ಖರೀದಿ ಮಾಡಿರುವವರು ಆಸ್ತಿ ತೆರಿಗೆ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಇದೀಗ ಮಹತ್ವದ ಹೆಜ್ಜೆಯನ್ನು ಇರಿಸಿದೆ. ಬೃಹತ್ ಬೆಂಗಳೂರು ನಗರ ಪಾಲಿಕೆ ( ಬಿಬಿಎಂಪಿಯ) 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಈಚೆಗೆ ಅಂಗೀಕಾರ ಮಾಡಲಾಗಿದೆ. ಇದರಿಂದ ಬೆಂಗಳೂರಿನ ಆಸ್ತಿದಾರರಿಗೆ ಯಾವ ರೀತಿ ಲಾಭವಾಗಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಆಸ್ತಿದಾರರು ಖುಷಿಪಡುವ ಸುದ್ದಿಯೊಂದನ್ನು ರಾಜ್ಯ ಸರ್ಕಾರವು ತಂದಿದೆ. ಬೆಂಗಳೂರಿನಲ್ಲಿ ಪ್ರಾಪರ್ಟಿ ಮಾಡುವವರು ಹಾಗೂ ಪ್ರಾಪರ್ಟಿ ಖರೀದಿದಾರರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನು ಇರಿಸಿದೆ. 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಿರುವುದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಆಸ್ತಿ ಹೊಂದಿರುವವರಿಗೆ ಲಾಭವಾಗಲಿದ ಎನ್ನುವ ಲೆಕ್ಕಾಚಾರ ಇದೀಗ ಜೋರಾಗಿದೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ ಈಚೆಗೆ ವಿಧಾನಸಭೆಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿಯ ಈ ವಿಧೇಯಕವನ್ನು ಮಂಡಿಸಿದರು. ಇದರಲ್ಲಿ ಅವರು ಬೆಂಗಳೂರಿನ ಆಸ್ತಿ ತೆರಿಗೆ ಸಂಗ್ರಹದ ವಿಚಾರವಾಗಿ ಮಹತ್ವದ ಹೇಳಿಕೆಯೊಂದನ್ನು ಕೊಟ್ಟಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಒಟಿಎಸ್ ಮೂಲಕ ತೆರಿಗೆ ಬಾಕಿ ಪಾವತಿ ಮಾಡುವುದಕ್ಕೆ ಈ ಹಿಂದೆ ನವೆಂಬರ್ 30ವರೆಗೆ ಕಾಲಾವಕಾಶ ನೀಡಲಾಗಿತ್ತು. ಇದರಿಂದ ಬಿಬಿಎಂಪಿ ಹಾಗೂ ಸರ್ಕಾರಕ್ಕೆ ಬರೋಬ್ಬರಿ 700 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಆಸ್ತಿ ತೆರಿಗೆ ಸಂಗ್ರಹವಾಗಿದೆ. 3 ಲಕ್ಷ ಆಸ್ತಿಗಳಿಂದ 1200 ಕೋಟಿ ಬಾಕಿ ವಸೂಲಿ ಮಾಡಲಾಗಿದೆ ಎಂದಿದ್ದಾರೆ. ಇನ್ನು ಬೆಂಗಳೂರಿನಲ್ಲಿ 2.26 ಲಕ್ಷ ಆಸ್ತಿಗಳು ಇನ್ನೂ ಬಾಕಿ ಉಳಿದಿರುವುದಾಗಿಯೂ ಅವರು ಹೇಳಿದ್ದಾರೆ.
2024ರ ನವೆಂಬರ್ 30ರವರೆಗೆ ಒಟ್ಟು 4284 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ. ಈ ಸಂಬಂಧ ಈಗಾಗಲೇ ಸುಗ್ರೀವಾಜ್ಞೆ ಹೊರಡಿಸಲಾಗಿತ್ತು. ಇದೀಗ 2024ನೇ ಸಾಲಿನ ಬೃಹತ್ ಬೆಂಗಳೂರು ನಗರ ಪಾಲಿಕೆ ಎರಡನೇ ತಿದ್ದುಪಡಿ ವಿಧೇಯಕವನ್ನು ಅಂಗೀಕಾರ ಮಾಡಿಕೊಡಬೇಕು ಎಂದು ಮನವಿ ಮಾಡಿದ್ದರು.
ಈ ವಿಚಾರವಾಗಿ ಶಾಸಕ ಅಶ್ವತ್ಥ್ ನಾರಾಯಣ ಅವರು ಮಾತನಾಡಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಉತ್ತಮ ತಿದ್ದುಪಡಿ ವಿಧೇಯಕ ಮಂಡಿಸಿದ್ದಾರೆ. ಆಸ್ತಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಿದ್ದಾರೆ. ಇದುವರೆಗೂ ತೆರಿಗೆ ಪಾವತಿಸದವರು ಕೂಡ ತೆರಿಗೆ ಪಾವತಿಸುವಂತೆ ಮಾಡಲಾಗಿದೆ. ತೆರಿಗೆ ವಂಚನೆ ಮಾಡುವವರು, ಕಡಿಮೆ ಆಸ್ತಿ ಮೌಲ್ಯ ಘೋಷಣೆ ಮಾಡಿಕೊಳ್ಳುವವರನ್ನು ತೆರಿಗೆ ವ್ಯಾಪ್ತಿಗೆ ತಂದಿರುವುದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.
ಮುಂದುವರಿದು ಮುಂದಿನ ದಿನಗಳಲ್ಲಿ ಆಸ್ತಿ ತೆರಿಗೆ ಹೆಚ್ಚಿಸಬೇಡಿ. ಆಸ್ತಿ ತೆರಿಗೆದಾರರ ಮೇಲೆ ಹೆಚ್ಚಿನ ಭಾರ ಹೊರಿಸಬೇಡಿ. ಪಾಲಿಕೆಯನ್ನು ಆಸ್ತಿ ತೆರಿಗೆ ಹಣದಲ್ಲೇ ನಡೆಸಲು ಮುಂದಾಗಬೇಡಿ. ರಾಜ್ಯದಲ್ಲಿ 65% ತೆರಿಗೆ ಸಂಗ್ರಹವಾಗುತ್ತಿದೆ. ಈ ನಗರಕ್ಕೆ ಬೇರೆ ಇಲಾಖೆಗಳಿಂದ ಯಾವುದೇ ಸೌಲಭ್ಯ ಸಿಗುತ್ತಿಲ್ಲ. ರಾಜ್ಯ ಸರ್ಕಾರದಿಂದ ಬರುವ ಅನುದಾನ ಹೆಚ್ಚಾಗಬೇಕು ಎಂದು ಮನವಿ ಮಾಡಿದ್ದರು.
ಇನ್ನು ಈ ಚರ್ಚೆಯ ನಂತರ ಸಭಾಧ್ಯಕ್ಷ ಯು.ಟಿ ಖಾದರ್ ಅವರು ವಿಧೇಯಕವನ್ನು ಧ್ವನಿ ಮತಕ್ಕೆ ಹಾಕಿದ್ದು. ಸದನದಲ್ಲಿ ಸರ್ವಾನುಮತದಿಂದ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಂಗಳೂರಿನ ಆಸ್ತಿದಾರರಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ಮಾಡುವವರಿಗೆ ಅನುಕೂಲ ಆಗಿದೆ ಎಂದು ಹೇಳಲಾಗಿದೆ.
ಒಟಿಎಸ್ ಲಾಭ ಸಿಗಲಿದೆ: ಈ ವಿಧೇಯಕವು ಇದೀಗ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಇದು ಗೆಜೆಟ್ ರೂಪಕ್ಕೆ ಬರಬೇಕಿದೆ. ಗೆಜೆಟ್ ಅನುಮೋದನೆಯಾದರೆ, ಮುಂದಿನ ದಿನಗಳಲ್ಲಿ ಒಟಿಎಸ್ (ಒಂದು ಬಾರಿ ಪರಿಹಾರ ಯೋಜನೆ) ವಿಸ್ತರಣೆಯಾಗುವ ಸಾಧ್ಯತೆ ಇದೆ. ಒಟಿಎಸ್ ಪದ್ಧತಿಯು ನವೆಂಬರ್ 30ಕ್ಕೆ ಮುಕ್ತಾಯವಾಗಿದೆ. ಇದು ಹೆಚ್ಚು ಆಸ್ತಿ ಬಾಕಿ ಉಳಿಸಿಕೊಂಡಿರುವವರಿಗೆ ಏಕಕಾಲಕ್ಕೆ ಪಾವತಿ ಮಾಡುವುದಕ್ಕೆ ಸಹಕಾರಿಯಾಗಿದೆ. ಅಲ್ಲದೇ ಒಂದು ಬಾರಿ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದೆ ಎನ್ನಲಾಗಿದೆ.












Click it and Unblock the Notifications