Bengaluru Property: ಬೆಂಗಳೂರಿನಲ್ಲಿ ₹100 ಕೋಟಿ ಮೌಲ್ಯದ ಆಸ್ತಿ ವಶಕ್ಕೆ ಪಡೆದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ!

Bengaluru Property: ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಬರೋಬ್ಬರಿ 100 ಕೋಟಿ ರೂ. ಮೌಲ್ಯದ ಜಮೀನನ್ನು ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಬನಶಂಕರಿ ದೇವಸ್ಥಾನ ಮುಂಭಾಗದ ಜಿಬಿಎಗೆ ಸೇರಿದ 100 ಕೋಟಿ ಮೌಲ್ಯದ ಜಮೀನಿನಲ್ಲಿದ್ದ ಒತ್ತುವರಿ ತೆರವು ಮಾಡಲಾಗಿದೆ.

ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಾಲಿಕೆ ಕೇಂದ್ರ ಕಚೇರಿ ನಿರ್ಮಾಣಕ್ಕಾಗಿ ಸರ್ಕಾರದಿಂದ ಮಂಜೂರಾತಿಯಾಗಿರುವ ಸಾರಕ್ಕಿ ಗ್ರಾಮದ ಸರ್ವೆ ನಂಬರ್ 73ರಲ್ಲಿ ಅಂದಾಜು 100 ಕೋಟಿ ರೂ. ಮೌಲ್ಯದ 3 ಎಕರೆ 13 ಗುಂಟೆ ಸರ್ಕಾರಿ ಜಮೀನಿನಲ್ಲಿ ಅನಾಮಧೇಯ ವ್ಯಕ್ತಿಗಳಿಂದ ಉಂಟಾಗಿದ್ದ ಒತ್ತುವರಿಯನ್ನು ತೆರವುಗೊಳಿಸಿ ಪಾಲಿಕೆಯ ಸುಪರ್ದಿಗೆ ಪಡೆಯಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Bengaluru Property Greater Bengaluru Authority Reclaims Property Worth 100 Crore Bengaluru

ಬೆಂಗಳೂರಿನ ವಿವಿಧ ಭಾಗದಲ್ಲಿ ಭೂಮಿಗೆ ಬಂಗಾರದ ಬೆಲೆ ಇದೆ. ಆದರೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಪಾರ ಮೌಲ್ಯದ ಆಸ್ತಿಗಳನ್ನು ಕೆಲವರು ಒತ್ತುವರಿ ಮಾಡಿಕೊಳ್ಳುತ್ತಿರುವುದು ಇದೆ. ಇದೀಗ ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪ್ರಾಧಿಕಾರದ ಆಸ್ತಿಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಾಲಿಕೆ ಕೇಂದ್ರ ಕಚೇರಿ ನಿರ್ಮಾಣಕ್ಕೆ ಜಾಗ ಮಂಜೂರು

ಸಾರಕ್ಕಿ ಗ್ರಾಮದ ಸರ್ವೇ ನಂಬರ್ 73ರಲ್ಲಿನ ಜಮೀನನ್ನು ಈ ಹಿಂದೆ ಸರ್ಕಾರವು ಕರ್ನಾಟಕ ಕೃಷಿ ಮಾರುಕಟ್ಟೆ ಇಲಾಖೆಗೆ (ಹಣ್ಣು ಮತ್ತು ತರಕಾರಿಗಳ ವಿಭಾಗ - ಎಪಿಎಂಸಿ) ನೀಡಿದ್ದು, ಮಂಜೂರಾತಿ ಉದ್ದೇಶಕ್ಕೆ ಇದುವರೆಗೂ ಬಳಕೆಯಾಗದ ಹಿನ್ನೆಲೆಯಲ್ಲಿ ಸರ್ಕಾರವು ಈ ಮಂಜೂರಾತಿಯನ್ನು ರದ್ದುಪಡಿಸಿ, ದಿನಾಂಕ 03-09-2026 ರಂದು ಈ ಜಮೀನನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ (GBA) ಬೆಂಗಳೂರು ನಗರ ಪಾಲಿಕೆಯ ಕೇಂದ್ರ ಕಚೇರಿ ನಿರ್ಮಾಣಕ್ಕಾಗಿ ಮಂಜೂರು ಮಾಡಲಾಗಿತ್ತು.

ಸರ್ಕಾರದಿಂದ ಜಮೀನು ಮಂಜೂರಾತಿಯಾದ ಹಿನ್ನೆಲೆಯಲ್ಲಿ ಇಂದು ಪಾಲಿಕೆಯ ಆಯುಕ್ತರ ನಿರ್ದೇಶನದ ಮೇರೆಗೆ ಯೋಜನಾ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಹಾಂತೇಶ್ ಅವರ ನೇತೃತ್ವದ ತಂಡ ಸ್ಥಳ ಪರಿಶೀಲನೆ ನಡೆಸಿ ಪಾಲಿಕೆ ಜಾಗದಲ್ಲಿ ಉಂಟಾಗಿದ್ದ ಅನಧಿಕೃತ ಶೆಡ್ ಹಾಗೂ ಅಕ್ರಮ ಒತ್ತುವರಿಗಳನ್ನು ಜೆಸಿಬಿ ಯಂತ್ರಗಳ ಮೂಲಕ ತೆರವುಗೊಳಿಸಿದರು. ಮುಂದುವರಿದು ಇದೆ ಸರ್ವೇ ನಂಬರ್‌ನ ಮತ್ತೊಂದು ಸ್ಥಳದಲ್ಲಿ ಅಕ್ರಮ ಕಟ್ಟಡ ನಿರ್ಮಿಸಿಕೊಂಡಿದಂತಹ ವ್ಯಕ್ತಿಗಳಿಗೆ ಪಾಲಿಕೆಗೆ ಸೇರಿದ ಜಾಗವನ್ನು ತುರ್ತಾಗಿ ಖಾಲಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಕಾರ್ಯಾಚರಣೆ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸೇರಿದ ಅಂದಾಜು 100 ಕೋಟಿ ರೂ. ಮೌಲ್ಯದ 3 ಎಕರೆ 13 ಗುಂಟೆ ಜಮೀನನ್ನು ಪಾಲಿಕೆ ವಶಕ್ಕೆ ಪಡೆಯಲಾಗಿದ್ದು ಇನ್ನುಮುಂದೆ ಈ ಸ್ಥಳವನ್ನು ಒತ್ತುವರಿ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಆಯುಕ್ತರಾದ ಕೆ.ಎನ್ ರಮೇಶ್ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+