Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್
Bengaluru Property: ಬೆಂಗಳೂರಿನಲ್ಲಿ ಆಸ್ತಿ ನಿಯಮ ಉಲ್ಲಂಘನೆ ಮಾಡುತ್ತಿರುವವರು ಹಾಗೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ ಮಾಡುತ್ತಿರುವ ಆಸ್ತಿದಾರರಿಗೆ ಶಾಕ್ ಎದುರಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಪ್ರತ್ಯೇಕವಾಗಿ ಕಾರ್ಯಾಚರಣೆ ಶುರು ಮಾಡಲಾಗಿದೆ. ಬೆಂಗಳೂರಿನಲ್ಲಿ ದೀರ್ಘಕಾಲದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರ ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಇದೇ ಸಂದರ್ಭದಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವ ಅಥವಾ ಕಟ್ಟಡಗಳ ವ್ಯತಿರಿಕ್ತ ಭಾಗವನ್ನು ತೆರವು ಮಾಡುವ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಾರಂಭಿಸಿದೆ.
ಕಟ್ಟಡ ನಕ್ಷೆ ಉಲ್ಲಂಘನೆ, ಸೆಟ್‌ಬ್ಯಾಕ್ ಮತ್ತು ಯುಟಿಲಿಟಿ ಡಕ್ಟ್ ಒತ್ತುವರಿ ಮಾಡುವ ಮನೆ ಮಾಲೀಕರ ವಿರುದ್ಧ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ಪ್ರಾರಂಭಿಸಿದೆ. ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಬಿಡಿಎ ನಡೆಸಿದ ಕಾರ್ಯಾಚರಣೆಯಲ್ಲಿ ಮನೆಯ ಮಾಲೀಕರು ಒತ್ತುವರಿ ಮಾಡಿ ಯುಟಿಲಿಟಿ ಡಕ್ಟ್‌ನಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಹೆಚ್ಚುವರಿ ಸ್ಲ್ಯಾಬನ್ನು ತೆರವುಗೊಳಿಸಲಾಗಿದೆ.

ಮುಂದುವರಿದು ಯುಟಿಲಿಟಿ ಡಕ್ಟ್‌ಗಳ ಮೇಲೆ ಮನೆ ಮಾಲೀಕರು ಅಕ್ರಮವಾಗಿ ಹೆಚ್ಚುವರಿ ಸ್ಲ್ಯಾಬ್ ನಿರ್ಮಿಸಿದಲ್ಲಿ, ಭವಿಷ್ಯದಲ್ಲಿ ಡಕ್ಟ್‌ಗಳ ದುರಸ್ತಿ, ನಿರ್ವಹಣೆ ಹಾಗೂ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಲು ಗಂಭೀರ ಅಡಚಣೆ ಉಂಟಾಗುತ್ತದೆ. ಇದರಿಂದ ಸಾರ್ವಜನಿಕ ಉಪಯೋಗಕ್ಕೆ ಸಂಬಂಧಿಸಿದ ಮೂಲಸೌಕರ್ಯಗಳ ನಿರ್ವಹಣೆಗೆ ತೊಂದರೆ ಆಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನಾಡಪ್ರಭು ಕೆಂಪೇಗೌಡ ಲೇಔಟ್ ಸೇರಿದಂತೆ ಎಲ್ಲಾ ಬಿಡಿಎ ಲೇಔಟ್‌ಗಳ ಮನೆಯ ಮುಂದೆ ಅಕ್ರಮವಾಗಿ ಹೆಚ್ಚುವರಿ ಸ್ಲ್ಯಾಬ್ ಹಾಕದಂತೆ ನೊಟೀಸ್ ನೀಡಲಾಗಿದ್ದು, ಅಂತಹ ಅತಿಕ್ರಮ ಸ್ಲ್ಯಾಬ್‌ಗಳನ್ನು ತೆರವುಗೊಳಿಸಲಾಗುವುದು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Bengaluru Property: ಜಿಬಿಎಯಿಂದಲೂ ಶಾಕ್
ಇನ್ನು ಬೆಂಗಳೂರಿನಲ್ಲಿ ತಪ್ಪು ಆಸ್ತಿ ವಿವರಣೆ ನೀಡಿರುವ ಹಾಗೂ ಆಸ್ತಿ ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರಿಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಶಾಕ್ ಕೊಡುವುದಕ್ಕೆ ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐಟಿ ವಿಭಾಗವು National Informatics Centre(NIC) ಸಹಯೋಗದೊಂದಿಗೆ, ನಗರ ಪಾಲಿಕೆಗಳಡಿ ಕಾರ್ಯನಿರ್ವಹಿಸುವ ಜಿಪಿಎಸ್ ತಂಡದ ವಿಶೇಷ ಮನೆ-ಮನೆ ಭೇಟಿ ಮೂಲಕ ಆಸ್ತಿ ತೆರಿಗೆ ಮರುಪರಿಶೀಲನೆ ಪ್ರಕ್ರಿಯೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರ ಆಸ್ತಿಗಳನ್ನು ಹರಾಜು ಹಾಕಲಾಗುತ್ತಿದೆ.
13,600 ಆಸ್ತಿಗಳ ಮಾಲೀಕರು ಕಳೆದ ಸರಾಸರಿ 5 ವರ್ಷಗಳಿಂದ ಕಡಿಮೆ ತೆರಿಗೆ ಪಾವತಿಸಿರುವುದು ಪತ್ತೆಯಾಗಿದೆ. ಪ್ರತಿ ವರ್ಷಕ್ಕೆ ಪ್ರತ್ಯೇಕವಾಗಿ ನೀಡಲಾದ ನೋಟಿಸ್‌ಗಳನ್ನು ಒಳಗೊಂಡಂತೆ ಒಟ್ಟು ಸುಮಾರು 67,000 ನೋಟಿಸ್‌ಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್‌ನಲ್ಲಿ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಡಿಎ ನಡೆಸಿದೆ. ಬಿಡಿಎ ನಡೆಸಿದ ಕಾರ್ಯಾಚರಣೆಯಲ್ಲಿ ಚಲ್ಲಘಟ್ಟದ ನಿವೇಶನ ಸಂಖ್ಯೆ 46/4 ಮತ್ತು 35ರಲ್ಲಿ ಅಕ್ರಮವಾಗಿ ಕಟ್ಟಲಾಗಿದ್ದ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ. ಈ ಭಾಗದಲ್ಲಿ ಅಕ್ರಮ ಒತ್ತುವರಿ ಆಗಿರುವ ಹಿನ್ನೆಲೆಯಲ್ಲಿ ಲೇಔಟ್ ಅಭಿವೃದ್ಧಿ, ರಸ್ತೆ ನಿರ್ಮಾಣಕ್ಕೆ ತೀವ್ರ ಅಡಚಣೆ ಆಗುತ್ತಿತ್ತು. ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಡಿಎ ತೀವ್ರಗೊಳಿಸಿರುವುದು ನಾಡಪ್ರಭು ಕೆಂಪೇಗೌಡ ಲೇಔಟ್‌ನ ರಸ್ತೆ ನಿರ್ಮಾಣ ತ್ವರಿತ ಗತಿಯಲ್ಲಿ ನಡೆಯಲು ಸಹಾಯವಾಗಿದೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications