Bengaluru Property: ಬೆಂಗಳೂರು ಆಸ್ತಿದಾರರಿಗೆ ಡಬಲ್ ಅಪ್ಡೇಟ್: ಖಾಲಿ ನಿವೇಶನದಾರರಿಗೆ ಶಾಕ್; ಇ-ಖಾತಾ ಸೇವೆಗೆ ಹೊಸ ಗುರಿ

Bengaluru Property: ಬೆಂಗಳೂರಿನ ಆಸ್ತಿದಾರರಿಗೆ ಏಕಕಾಲಕ್ಕೆ ಗುಡ್ ಹಾಗೂ ಬ್ಯಾಡ್ ನ್ಯೂಸ್ ಅನ್ನು ಕರ್ನಾಟಕ ಸರ್ಕಾರ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ನೀಡಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಖಾಲಿ ನಿವೇಶನಗಳ ಮಾಲೀಕರಿಗೆ ಆಗಸ್ಟ್‌ 15ರ ವರೆಗೆ ಗಡುವು ನೀಡಲಾಗಿದೆ. ಈ ಅವಧಿಯ ಒಳಗೆ ಖಾಲಿ ನಿವೇಶನವನ್ನು ಆಸ್ತಿದಾರರೇ ಸ್ವಚ್ಛಗೊಳಿಸಿಕೊಳ್ಳಬೇಕಾಗಿದೆ. ಇನ್ನು ಬೆಂಗಳೂರಿನ ಆಸ್ತಿದಾರರಿಗೆ ಇ ಖಾತಾದ ವಿಚಾರದಲ್ಲಿ ಗುಡ್‌ನ್ಯೂಸ್ ಕೊಡಲಾಗಿದೆ.

ಬೆಂಗಳೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ವಾಸಯೋಗ್ಯ ನಗರವಾಗಿರಿಸುವ ಉದ್ದೇಶದಿಂದ ಆಗಸ್ಟ್-2026 ಮಾಹೆಯಲ್ಲಿ "ತ್ಯಾಜ್ಯದಿಂದ ಸ್ವಾತಂತ್ರ" ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದ್ದಾರೆ.

Bengaluru Property

ಈ ಅಭಿಯಾನದಡಿಯಲ್ಲಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿಯಲ್ಲಿ ಆಡಳಿತ ಹೊಂದಿರುವ ಎಲ್ಲಾ ನಗರ ಪಾಲಿಕೆಗಳು ಹಾಗೂ ಇತರೇ ಸಂಸ್ಥೆಗಳ ವತಿಯಿಂದ ನಗರದ ರಸ್ತೆಗಳಲ್ಲಿ ಕಪ್ಪುಚುಕ್ಕೆಗಳು, ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ, ಮರದ ಕೊಂಬೆಗಳು, ವಿದ್ಯುತ್ ಕಂಬಗಳು, ಪೈಪುಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು ಉದ್ದೇಶಿಸಲಾಗಿದೆ. ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು-2020ರ ಉಪವಿಧಿ 18(1)(ಬಿ) ರನ್ವಯ ಖಾಲಿ ನಿವೇಶನಗಳನ್ನು ಸ್ವಚ್ಛ ಹಾಗೂ ನೈರ್ಮಲ್ಯಯುತ ಸ್ಥಿತಿಯಲ್ಲಿ ನಿರ್ವಹಿಸುವುದು ಮಾಲೀಕರ ಕಡ್ಡಾಯ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ, ನಗರದ ಎಲ್ಲಾ ಖಾಲಿ ನಿವೇಶನಗಳ ಮಾಲೀಕರಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಲಾಗಿದೆ.

1. ನಗರದಲ್ಲಿನ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಶೇಖರಣೆಯಾಗಿರುವ ತ್ಯಾಜ್ಯ/ಡೆಬ್ರಿಸ್ ಅನ್ನು ದಿನಾಂಕ: 15.08.2026 ರೊಳಗಾಗಿ ತಪ್ಪದೇ ಸ್ವಚ್ಚಗೊಳಿಸಬೇಕು.

2. ಒಂದು ವೇಳೆ ದಿನಾಂಕ 15.08.2026ರ ಒಳಗಾಗಿ ಸಂಬಂಧಿಸಿದ ಮಾಲೀಕರು ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸದಿದ್ದಲ್ಲಿ, ನಗರಪಾಲಿಕೆಯ ವತಿಯಿಂದ ತ್ಯಾಜ್ಯ/ಡೆಬಿಸ್ ಅನ್ನು ತೆರವುಗೊಳಿಸಿ, ತಗುಲುವ ವೆಚ್ಚವನ್ನು ನಿವೇಶನದ ವಿಸ್ತೀರ್ಣ ಹಾಗೂ ತೆರವುಗೊಳಿಸಿದ ತ್ಯಾಜ್ಯದ ಪ್ರಮಾಣಕ್ಕೆ ಅನುಗುಣವಾಗಿ ಘನತ್ಯಾಜ್ಯ ನಿರ್ವಹಣಾ ಉಪವಿಧಿಗಳು-2020ರ ಉಪವಿಧಿ 18(1)(ಡಿ) (ii) ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 285(2) ರನ್ವಯ ಆಸ್ತಿ ತೆರಿಗೆಯೊಂದಿಗೆ ವಸೂಲಿ ಮಾಡಲಾಗುವುದು.

ತೆರಿಗೆ ಬಾಕಿಯನ್ನು ಕರ್ನಾಟಕ ಭೂಕಂದಾಯ ಕಾಯ್ದೆ, 1964 ರ ಅನುಸಾರ ವಸೂಲಾತಿ ಕ್ರಮ ಜರುಗಿಸಲಾಗುವುದು. ನಂತರದ ಪ್ರಕರಣಗಳಲ್ಲಿ ಉಪವಿಧಿ 18(1)(ಡಿ) (iii) ರನ್ವಯ ಮೊದಲ ಉಲ್ಲಂಘನೆಗೆ 25,000 ರೂ. ಹಾಗೂ ನಂತರದ ಉಲ್ಲಂಘನೆಗಳಿಗೆ 50,000 ರೂ.ದಿಂದ 1,00,000 ರೂ. ವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

3. ಖಾಲಿ ನಿವೇಶನಗಳನ್ನು ದಿನಾಂಕ:15.08.2026 ರೊಳಗಾಗಿ ಸ್ವಚ್ಛಗೊಳಿಸದಿದ್ದಲ್ಲಿ, ಸಾರ್ವಜನಿಕರು ಅಂತಹ ನಿವೇಶನಗಳ ಛಾಯಚಿತ್ರ ಸಹಿತ GPS Co-ordinates ನೊಂದಿಗೆ ದೂರನ್ನು ವಾಟ್ಸ್ ಆಪ್ ಚಾಟ್-ಬಾಟ್ ಸಂಖ್ಯೆ: +91-9448197197 ಗೆ ಸಲ್ಲಿಸಬಹುದು. ದೂರುದಾರರ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗುವುದು.

4. ನಿವೇಶನಗಳ ಮಾಲೀಕರು ಸ್ವಚ್ಛಗೊಳಿಸಿದ ನಿವೇಶನಗಳ ಸುತ್ತಮುತ್ತ ಬೇಲಿ/ಕಾಂಪೌಂಡ್ ಗೋಡೆಯನ್ನು ನಿರ್ಮಿಸಿಕೊಂಡು, ಅನಧಿಕೃತ ತ್ಯಾಜ್ಯ ವಿಲೇವಾರಿಯಾಗದಂತೆ ವ್ಯವಸ್ಥೆ ಕಲ್ಪಿಸಿಕೊಳ್ಳಬೇಕು. ಸ್ವಚ್ಛ, ಸುಂದರ ಮತ್ತು ವಾಸಯೋಗ್ಯ ಬೆಂಗಳೂರು ನಿರ್ಮಾಣಕ್ಕಾಗಿ ಸಹಕರಿಸಿ, ಕೈಜೋಡಿಸಿ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ತಿಳಿಸಿದ್ದಾರೆ.

ಇ ಖಾತಾ ವಿಚಾರದಲ್ಲಿ ಗುಡ್‌ನ್ಯೂಸ್

ಇನ್ನು ಕರ್ನಾಟಕ ಸರ್ಕಾರವು ಬೆಂಗಳೂರಿನ ಆಸ್ತಿದಾರರಿಗೆ ಇ ಖಾತಾ ವಿಚಾರದಲ್ಲಿ ಗುಡ್‌ನ್ಯೂಸ್ ಕೊಡಲಾಗಿದೆ. ಬೆಂಗಳೂರಿನಲ್ಲಿ ಆಸ್ತಿಗಳ ಸಂರಕ್ಷಣೆಯ ಉದ್ದೇಶದಿಂದ ಆಸ್ತಿಗಳಿಗೆ ಇ ಖಾತಾ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಎಲ್ಲ ಆಸ್ತಿದಾರರಿಗೂ ಇ ಖಾತಾ ಸೇವೆ ನೀಡಲು ಸಾಧ್ಯವಾಗಿಲ್ಲ.

ಬೆಂಗಳೂರು ನಗರದಲ್ಲಿ ಸುಮಾರು 35 ಲಕ್ಷ ಸ್ಥಿರಾಸ್ತಿಗಳಿರುವ ಅಂದಾಜಿದ್ದು ಈ ಪೈಕಿ 18 ಲಕ್ಷ ಆಸ್ತಿ ಮಾಲೀಕರು ಮಾತ್ರ ಆಸ್ತಿ ತೆರಿಗೆ ಪಾವತಿ ಮಾಡುತ್ತಿದ್ದಾರೆ ಎಂದು ಸರ್ಕಾರವು ಹೇಳಿದೆ. ಇದೀಗ ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಇಲ್ಲದೆ ಇರುವವರನ್ನು ಇ ಖಾತಾ ವ್ಯಾಪ್ತಿಗೆ ತರುವ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡುವಂತೆ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದೆ. ಹೀಗಾಗಿ, ಮುಂದಿನ ಆರು ತಿಂಗಳ ಅವಧಿಯಲ್ಲಿ ಬೆಂಗಳೂರಿನ ಎಲ್ಲ ಅರ್ಹ ಆಸ್ತಿ ಮಾಲೀಕರನ್ನು ಇ-ಖಾತಾ ವ್ಯವಸ್ಥೆಯಡಿ ತರುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+