B - Khata: ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳಲು ಇಷ್ಟು ಲಕ್ಷ ಖರ್ಚು ಮಾಡಬೇಕು ?!

B-khata to A-khata Conversion: ರಾಜ್ಯದಲ್ಲಿ ಅನಧಿಕೃತ ಹಾಗೂ ಬಿ - ಖಾತಾ ಆಸ್ತಿಗಳಿಗೆ ಎ - ಖಾತಾ ನೀಡುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಸರ್ಕಾರ ಮುಂದಾಗಿದೆ. ಆದರೆ, ಬಿ - ಖಾತಾದಿಂದ ಎ ಖಾತಾ ನೀಡುವಲ್ಲಿ ಸರ್ಕಾರದ ಲೆಕ್ಕಾಚಾರವೇ ಬೇರೆ ಇದೆ. ದುಡ್ಡು ಮಾಡುವುದೇ ಇದರ ಮುಖ್ಯ ಉದ್ದೇಶ ರಿಯಲ್ ಎಸ್ಟೇಟ್ ಬೂಸ್ಟ್‌ ಮಾಡೋದು ಹಾಗೂ ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಲಾಗುತ್ತಿದೆ. ಅದರ ಸಂಪೂರ್ಣ ವಿವರ ಇಲ್ಲಿದೆ.

ಎಲ್ಲರಿಗೂ ಒಂದು ಬಾರಿ ಎ - ಖಾತಾ ನೀಡುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಎ ಖಾತಾದ ಹೆಸರಿನಲ್ಲಿ ಸರ್ಕಾರ ಲೂಟಿ ಮಾಡುತ್ತಿದೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ. ಸ್ಥಿರಾಸ್ತಿಗಳ ಮೇಲಿನ ತೆರಿಗೆ ಹೆಚ್ಚಿಸುವ ಉದ್ದೇಶದಿಂದಲೇ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಲು ಹೊರಟಿದೆ. ಜನರು ಬಿ ಖಾತಾದಿಂದ ಎ ಖಾತೆಗೆ ಬದಲಿಸಿಕೊಳ್ಳಲು ಆರೇಳು ಲಕ್ಷ ರೂಪಾಯಿಗೂ ಹೆಚ್ಚು ವೆಚ್ಚವಾಗಲಿದೆ ಎಂದು ಹೇಳಲಾಗುತ್ತಿದೆ. ಏನಿದು ಬಿ - ಖಾತಾದಿಂದ ಎ - ಖಾತಾ ಸಮಸ್ಯೆ, ಬಿ - ಖಾತಾದಿಂದ ಎ ಖಾತಾ ಮಾಡಿಸಿಕೊಳ್ಳಲು ಎಷ್ಟು ವೆಚ್ಚವಾಗಲಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

Bengaluru property owners have to spend 7 to 8 lakhs to convert B-Khata to A-Khata

ಲಕ್ಷಾಂತರ ರೂಪಾಯಿ ಖರ್ಚಾಗಲಿದೆ: ಇನ್ನು ಬಿ - ಖಾತಾದಿಂದ ಎ - ಖಾತಾ ಮಾಡಿಸಿಕೊಳ್ಳುವುದಕ್ಕೆ ಲಕ್ಷಾಂತರ ರೂಪಾಯಿ ಖರ್ಚಾಗಲಿದೆ ಎಂದು ಅಂದಾಜಿಸಲಾಗಿದೆ. ರಾಜ್ಯ ಸರ್ಕಾರವು ಎಲ್ಲಾ ಬಿ ಖಾತಾಗಳಿಗೆ ಎ ಖಾತಾ ನೀಡುವುದಾಗಿ ಹೇಳಿ ನಿಯಮ ರೂಪಿಸುವ ಸಮಯದಲ್ಲೇ ಈ ಬಗ್ಗೆ ಚರ್ಚೆ ಜೋರಾಗಿದೆ. ಈ ವಿಚಾರವಾಗಿ ಜೆಡಿಎಸ್ ಬೆಂಗಳೂರು ಜಿಲ್ಲಾ ಘಟಕದ ಎಂ. ರಮೇಶ್‌ಗೌಡ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

2007ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿದ ಹಳ್ಳಿಗಳ ನಿವೇಶನಗಳಿಗೆ, ಪ್ರತಿ ಚದರ ಮೀಟರ್‌ಗೆ ಗರಿಷ್ಠ 3250 ಸುಧಾರಣಾ ಶುಲ್ಕ ವಿಧಿಸಲಾಗುತ್ತಿತ್ತು. ಆದರೆ ಇದೀಗ ಗ್ರೇಟರ್ ಬೆಂಗಳೂರು ಅಡಿಯಲ್ಲಿ ಪ್ರತಿ ಚದರ ಅಡಿಗೆ ಗರಿಷ್ಠ 7500 ರೂಪಾಯಿಯನ್ನು ಸುಧಾರಣಾ ಶುಲ್ಕ ವಿಧಿಸಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ. ಅಲ್ಲದೇ ಈ ಬೆಳವಣಿಗೆಯು ಆಸ್ತಿದಾರರಿಗಿಂತಲೂ ರಿಯಲ್ ಎಸ್ಟೇಟ್‌ನವರಿಗೆ ಭಾರೀ ಲಾಭವನ್ನುಂಟು ಮಾಡಲಿದೆ ಎಂದು ಅವರು ದೂರಿದ್ದಾರೆ.

ರಿಯಲ್ ಎಸ್ಟೇಟ್‌ದಾರರು ಹಾಗೂ ಬಿಲ್ಡರ್‌ಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ಬಿ - ಖಾತಾದಿಂದ ಎ - ಖಾತಾ ಮಾಡಿಕೊಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಕೋಟ್ಯಾಂತರ ರೂಪಾಯಿ ವಂಚನೆ: ಇನ್ನು ಎ ಖಾತಾ ಹಾಗೂ ಬಿ ಖಾತಾ ವಿಚಾರದಲ್ಲಿ ಬಿಬಿಎಂಪಿಯು ಕೋಟ್ಯಾಂತರ ರೂಪಾಯಿ ವಂಚನೆ ಮಾಡುತ್ತಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಪ್ರತಿಭಟನೆ ಮಾಡುವುದಾಗಿಯೂ ಹೇಳಿದೆ.

ಶೀಘ್ರ ಬಿ - ಖಾತಾ ನಿಯಮ: ಇನ್ನು ಇಷ್ಟರಲ್ಲೇ ಬಿ - ಖಾತಾದಿಂದ ಎ - ಖಾತಾಗೆ ಖಾತಾ ವರ್ಗಾವಣೆ ಮಾಡುವ ಪ್ರಕ್ರಿಯೆ ಪ್ರಾರಂಭಿಸುವುದಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+