Property Tax: ಬೆಂಗಳೂರು ಆಸ್ತಿದಾರರಿಗೆ ಚಮಕ್: ಬಿಬಿಎಂಪಿ ಪ್ಲ್ಯಾನ್‌ ಸಕ್ಸಸ್‌!

Property Tax: ಬೆಂಗಳೂರಿನ ಆಸ್ತಿದಾರರಿಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಚಮಕ್ ಕೊಟ್ಟು ಕೋಟಿ.. ಕೋಟಿ ಸಂಗ್ರಹ ಮಾಡಿದೆ. ಹೌದು ಬೆಂಗಳೂರಿನಲ್ಲಿ ಹಲವು ಆಸ್ತಿದಾರರು ಕೆಲವು ಹಲವು ವರ್ಷಗಳಿಂದ ಬಿಬಿಎಂಪಿಗೆ ಆಸ್ತಿ ತೆರಿಗೆ ಪಾವತಿ ಮಾಡದೆ ಕಳ್ಳಾಟವಾಡುತ್ತಿದ್ದರು. ಈ ರೀತಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿ ಮಾಡದೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಬಿಎಂಪಿಯು ಈಚೆಗೆ ದೊಡ್ಡ ಶಾಕ್‌ ಕೊಟ್ಟಿತ್ತು. ಆ ಶಾಕ್‌ ಇದೀಗ ವರ್ಕ್‌ಔಟ್‌ ಆಗಿದೆ. ಬೆಂಗಳೂರು ಮಹಾನಗರ ಪಾಲಿಕೆಗೆ ಇದೀಗ ಕೋಟ್ಯಾಂತರ ರೂಪಾಯಿ ಆದಾಯ ಸಂಗ್ರಹವಾಗಿದೆ. ಆಸ್ತಿ ತೆರಿಗೆ ಸಂಗ್ರಹವಾದ ಹಿನ್ನೆಲೆಯಲ್ಲಿ ಬಿಬಿಎಂಪಿಯು ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ ಅದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ನಗರದಲ್ಲಿ ಆಸ್ತಿ ತೆರಿಗೆ ಸಂಗ್ರಹವೇ ಬೆಂಗಳೂರು ಪಾಲಿಕೆಯ ಪ್ರಮುಖ ಹಾಗೂ ಅಗ್ರ ಆದಾಯ ಎನ್ನುವುದು ತಿಳಿದಿರುವ ವಿಚಾರ. ಆದರೆ, ಬಿಬಿಎಂಪಿಗೆ ಕೆಲವರು ಎಷ್ಟೇ ಹೇಳಿದರೂ ಹಲವು ವರ್ಷಗಳಿಂದ ಆಸ್ತಿ ತೆರಿಗೆಯನ್ನೇ ಕಟ್ಟಿರಲಿಲ್ಲ. ಇದೀಗ ಬಿಬಿಎಂಪಿಯು ಈ ರೀತಿ ಆಸ್ತಿ ಉಳಿಸಿಕೊಂಡಿರುವವರಿಗೆ ಚಮಕ್ ಕೊಟ್ಟಿದ್ದು. ಅಂದರೆ ಆಸ್ತಿ ಹರಾಜು ಮಾಡುವುದಾಗಿ ಎಚ್ಚರಿಕೆಯನ್ನು ಕೊಟ್ಟಿದ್ದು. ಆಸ್ತಿ ಕಳೆದುಕೊಳ್ಳುತ್ತೇವೆ ಎಂದು ಹೆದರಿರುವು 500ಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆಯನ್ನು ಪಾವತಿ ಮಾಡಿದ್ದಾರೆ. ಬಿಬಿಎಂಪಿಯ ಆ ಒಂದು ನಿರ್ಧಾರದಿಂದಲೇ ಪಾಲಿಕೆಗೆ ಕೋಟ್ಯಾಂತರ ರೂಪಾಯಿ ಆದಾಯ ಹರಿದು ಬಂದಿದೆ.

Bengaluru Property Owners Pending Property Tax BBMP plan Success

608 ಆಸ್ತಿಗಳಿಗೆ ಫೈನಲ್‌ ವಾರ್ನಿಂಗ್: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ಪಾಲಿಕೆ ವ್ಯಾಪ್ತಿಯ 608 ಆಸ್ತಿ ಬಾಕಿ ಉಳಿಸಿಕೊಂಡಿರುವ ಆಸ್ತಿ ಮಾಲೀಕರ ಆಸ್ತಿಯನ್ನು ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿತ್ತು. ಅಲ್ಲದೆ ಫೆಬ್ರವರಿ 13ರಿಂದಲೇ ಹಂತ ಹಂತವಾಗಿ ಎಲ್ಲಾ ಆಸ್ತಿಗಳನ್ನು ಹರಾಜು ಹಾಕುವುದಾಗಿ ಹೇಳಿತ್ತು. ಈ ಪ್ರಕ್ರಿಯೆ ಪ್ರಾರಂಭವಾಗುತ್ತಿದ್ದಂತೆಯೇ ಆಸ್ತಿ ಬಾಕಿ ಉಳಿಸಿಕೊಂಡಿರುವ ನೂರಾರು ಜನ ಆಸ್ತಿ ಮಾಲೀಕರು ಆಸ್ತಿ ತೆರಿಗೆಯನ್ನು ಪಾವತಿ ಮಾಡಿದ್ದಾರೆ ಎಂದು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ರೀತಿ ಹರಾಜು ನೋಟಿಸ್‌ ಕೊಟ್ಟ ಕೂಡಲೇ ಶೇಕಡ 90ರಷ್ಟು ಆಸ್ತಿ ಮಾಲೀಕರು ಬಾಕಿ ಆಸ್ತಿ ತೆರಿಗೆಯನ್ನು ಪಾವತಿ ಮಾಡಿದ್ದಾರೆ. ಇನ್ನುಳಿದವರು ಕೂಡಲೇ ಆಸ್ತಿ ತೆರಿಗೆಯನ್ನು ಪಾವತಿ ಮಾಡುವುದಾಗಿ ಹೇಳಿದ್ದಾರೆ ಎಂದಿದ್ದಾರೆ. ಹೀಗಾಗಿ ಆಸ್ತಿ ಹರಾಜು ಹಾಕುವ ಪ್ರಕ್ರಿಯೆಯನ್ನು ಕೈಬಿಟ್ಟಿರುವುದಾಗಿ ಬಿಬಿಎಂಪಿಯ ಕಂದಾಯ ವಿಭಾಗದ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್ ಅವರು ಮಾಹಿತಿ ನೀಡಿದ್ದಾರೆ.

2 ಲಕ್ಷ ಆಸ್ತಿಗಳ ಪಟ್ಟಿ: ಇನ್ನು ಬೆಂಗಳೂರಿನಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ. ಈ ರೀತಿ ವರ್ಷಗಳ ಕಾಲದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವ ಲಿಸ್ಟ್‌ ಅನ್ನು ಸಹ ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಮಾಡಿಕೊಂಡಿದ್ದಾರೆ. ಇವರಿಗೂ ಈಗಾಗಲೇ ಎಚ್ಚರಿಕೆ ನೀಡಿದ್ದು, ಈ ಆಸ್ತಿದಾರರು ಸಹ ಕೂಡಲೇ ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡುವಂತೆ ಸೂಚನೆ ನೀಡಲಾಗಿದೆ. ಕೂಡಲೇ ಆಸ್ತಿ ತೆರಿಗೆಯನ್ನು ಪಾವತಿ ಮಾಡದೆ ಇದ್ದರೆ ಹರಾಜು ಪ್ರಕ್ರಿಯೆಯಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+