Bengaluru Property: ಬೆಂಗಳೂರಲ್ಲಿ ಆಸ್ತಿ ಮೌಲ್ಯದ ದುಪ್ಪಟ್ಟು: ಈ ಯೋಜನೆ ಭೂಸ್ವಾಧೀನ ಕಷ್ಟ: ಡಿಸಿಎಂ ಡಿಕೆಶಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಹೆಚ್ಚಾಗುತ್ತಿದ್ದು. ಇದೀಗ ಬೆಂಗಳೂರಿನ ವಿವಿಧ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಂಟ್ರೋಲ್ ಮಾಡುವುದಕ್ಕೆ ಕರ್ನಾಟಕ ಸರ್ಕಾರವು ಮಹತ್ವದ ಯೋಜನೆಯೊಂದನ್ನು ರೂಪಿಸಿಕೊಂಡಿದೆ. ಬೆಂಗಳೂರಿನ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವುದಕ್ಕೆ ಅಧ್ಯಯನ ನಡೆಸಿ ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಹೇಳಲಾಗಿದ್ದು, ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಬೆಂಗಳೂರು ನಗರ ಪ್ರದೇಶದಲ್ಲಿ ರಸ್ತೆಗಳ ಅಗಲೀಕರಣದ ಅವಶ್ಯಕತೆ ಇದೆ. ಆದರೆ ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. ಕರ್ನಾಟಕ 2013ರ ಕಾಯ್ದೆ ಅನುಸಾರ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕಾಗುತ್ತದೆ. ಈಗ ಬೆಂಗಳೂರಿನ ಆಸ್ತಿ ಮೌಲ್ಯ ಹೆಚ್ಚಾಗಿದೆ. ಹೀಗಾಗಿ ಪರ್ಯಾಯ ಆಯ್ಕೆಗಳನ್ನು ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳೊಂದಿಗೆ ಈಚೆಗೆ ಸಭೆ ನಡೆಸಿದ್ದು ಸಭೆಯ ನಂತರ ಕೆಲವೊಂದು ಪ್ರಮುಖ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಬೆಂಗಳೂರಿನ ಸಮಸ್ಯೆ ನಿವಾರಿಸಿ, ನಗರದ ಸ್ವರೂಪ ಬದಲಿಸಲು ಹಾಗೂ ಅನೇಕ ಯೋಜನೆ ಕೈಗೊಂಡಿದ್ದೇವೆ. ಬಹಳ ಅಧ್ಯಯನ ಮಾಡಿದ ನಂತರ 2 ಟನಲ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದೇವೆ. ಬರೋಬ್ಬರಿ 130 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯನ್ನು ಬರೋಬ್ಬರಿ 26 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ ನಾವು ಈ ಯೋಜನೆ ಮಾಡಿಯೇ ಮಾಡುತ್ತೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರು ಈ ಯೋಜನೆ ಮುಂದುವರಿಸುವಂತೆ ನನಗೆ ಹೇಳಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟನಲ್ ರೋಡ್ ಯೋಜನೆಯ ಬಗ್ಗೆ ಮಾತನಾಡಿದ್ದು, ಈ ಯೋಜನೆಗೆ ರಾಜ್ಯ ಬಿಜೆಪಿ ನಾಯಕರು ವಿರೋಧಿಸಿರುವುದನ್ನು ಪರೋಕ್ಷವಾಗಿ ಉಲ್ಲೇಖ ಮಾಡಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರಿಗೆ ಯಾಕೆ ಟನಲ್ ರೋಡ್ ಯೋಜನೆ ಬೇಡ ಎಂದು ಹೇಳಿದ್ದರು. ಇದೀಗ ಟನಲ್ ರೋಡ್ ಯೋಜನೆಯನ್ನು ಜಾರಿ ಮಾಡಿಯೇ ಸಿದ್ಧ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಪುನರುಚ್ಚರಿಸಿದ್ದಾರೆ.
ಬೆಂಗಳೂರಲ್ಲಿ ಭೂಸ್ವಾಧೀನ ಕಷ್ಟ
ಬೆಂಗಳೂರಿನಲ್ಲಿ ಈಗಾಗಲೇ ಭೂಮಿ / ಆಸ್ತಿ ಬೆಲೆಯು ಹೆಚ್ಚಳವಾಗಿದೆ. ಹೀಗಾಗಿ, ಪರ್ಯಾಯ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಕಂಟ್ರೋಲ್ ಮಾಡುವ ಉದ್ದೇಶದಿಂದ ಸಾಕಷ್ಟು ಅಧ್ಯಯನ ನಡೆಸಿದ ನಂತರ ಟನಲ್ ರಸ್ತೆ ಉತ್ತಮ ಆಯ್ಕೆಯಾಗಿದೆ ಎಂದು ನಾವು ಪರಿಗಣಿಸಿದ್ದೇವೆ. ರಸ್ತೆ ಅಗಲೀಕರಣಕ್ಕೆ ಇಂದಿನ ತುರ್ತು ಅವಶ್ಯಕವಾಗಿದೆ. ಆದರೆ ನಾವು ಯಾವುದೇ ಕಟ್ಟಡ ಕೆಡವಲು ಆಗುವುದಿಲ್ಲ. 2013ರ ಕಾಯ್ದೆ ಅನ್ವಯ ಆಸ್ತಿ ಮೌಲ್ಯದ ದುಪ್ಪಟ್ಟು ಪರಿಹಾರ ನೀಡಬೇಕು. ಈಗ ಬೆಂಗಳೂರಿನ ಆಸ್ತಿ ಮೌಲ್ಯ ಹೆಚ್ಚಾಗಿದೆ ಎಂದಿದ್ದಾರೆ.
ಒಟ್ಟಾರೆ ಭೂಸ್ವಾಧೀನ ಪ್ರಕ್ರಿಯೆ ಕಷ್ಟವಾಗಿರುವುದರಿಂದ ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಂಡಿರುವುದಾಗಿ ಹೇಳಿದ್ದಾರೆ.












Click it and Unblock the Notifications