Bengaluru Property: ಬೆಂಗಳೂರಿನಲ್ಲಿ ಆಸ್ತಿ ಉಳಿಸಿಕೊಳ್ಳಲು ಆಸ್ತಿದಾರರ ಸರ್ಕಸ್!
Bengaluru Property: ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ದೊಡ್ಡ ಶಾಕ್ ಕೊಟ್ಟಿದೆ. ನಗರದಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 2 ಲಕ್ಷಕ್ಕೂ ಹೆಚ್ಚು ಆಸ್ತಿದಾರರಿಗೆ ಆಸ್ತಿ ವಶಪಡಿಸಿಕೊಂಡು ಹರಾಜು ಹಾಕುವುದಾಗಿ ಬಿಬಿಎಂಪಿಯು ಈಗಾಗಲೇ ಎಚ್ಚರಿಕೆ ಕೊಟ್ಟಿದ್ದು. ಆಸ್ತಿ ಉಳಿಸಿಕೊಳ್ಳಲು ಬೆಂಗಳೂರಿನ ಆಸ್ತಿದಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ 2 ಲಕ್ಷಕ್ಕೂ ಹೆಚ್ಚು ಆಸ್ತಿದಾರರು ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ. ಆದರೆ 608 ಹೆಚ್ಚು ಆಸ್ತಿದಾರರು ಹಲವು ವರ್ಷಗಳಿಂದ ಆಸ್ತಿ ತೆರಿಗೆ ಪಾವತಿ ಮಾಡದೆ ಕೋಟ್ಯಾಂತರ ರೂಪಾಯಿ ಬಾಕಿ ಉಳಿಸಿಕೊಂಡಿದ್ದಾರೆ. ಮೊದಲ ಹಂತದಲ್ಲಿ ಈ ಆಸ್ತಿದಾರರನ್ನು ಟಾರ್ಗೆಟ್ ಮಾಡಲಾಗಿದೆ. ಈ ಆಸ್ತಿದಾರರು ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ.
ಬಿಬಿಎಂಪಿಯು ಈ ಬಾರಿ ಕೆಲವು ಪ್ರಾಪರ್ಟಿ ಮಾಲೀಕರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಹಲವು ಆಸ್ತಿದಾರರು ವರ್ಷಗಳಿಂದ ಆಸ್ತಿ ತೆರಿಗೆಯನ್ನು ಪಾವತಿ ಮಾಡಿಲ್ಲ. ಹಲವು ಬಾರಿ ನೋಟಿಸ್ ಕೊಟ್ಟರೂ ಕ್ಯಾರೇ ಎಂದಿರಲಿಲ್ಲ. ಇದರಿಂದ ರೊಚ್ಚಿಗೆದ್ದಿರುವ ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳು ಆಸ್ತಿಯನ್ನೇ ವಶಕ್ಕೆ ಪಡೆದು ಸರ್ಕಾರಿ ಬೆಲೆಯಲ್ಲಿ ಹರಾಜು ಮಾಡುವುದಾಗಿ ಹೇಳಿದ್ದರು. ಇದಕ್ಕೆ ದಿನಾಂಕ ಸಹ ನಿಗದಿ ಮಾಡಲಾಗಿದೆ. ಈ ರೀತಿ ಹರಾಜಿಗೆ ಇರಿಸಿದ ಆಸ್ತಿಗಳನ್ನು ಹರಾಜು ಮಾಡಿ. ಅದರಿಂದ ಬರುವ ಹಣದಲ್ಲಿ ಪಾಲಿಕೆಗೆ ಬಾಕಿ ಇರುವ ಮೊತ್ತವನ್ನು ತೆಗೆದುಕೊಳ್ಳುವುದು ಹಾಗೂ ಇನ್ನುಳಿದ ಹಣವನ್ನು ಆಸ್ತಿ ಮಾಲೀಕರ ಖಾತೆಗೇ ಹಾಕುವುದಾಗಿ ಪಾಲಿಕೆಯ ಕಂದಾಯ ವಿಭಾಗದ ಅಧಿಕಾರಿಗಳು ಹೇಳಿದ್ದರು.

ಈ ರೀತಿ ಬಿಬಿಎಂಪಿ ಹೇಳಿ ನೋಟಿಸ್ ಜಾರಿ ಮಾಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಆಸ್ತಿಯನ್ನು ಉಳಿಸಿಕೊಳ್ಳುವುದಕ್ಕೆ ಬೆಂಗಳೂರಿನ ಆಸ್ತಿದಾರರು ಹಲವು ಸರ್ಕಸ್ ಮಾಡಿದ್ದಾರೆ.
ಪ್ರಭಾವಿಗಳ ಮೂಲಕ ಲಾಬಿ & ಒತ್ತಡ: ಇನ್ನು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರು ಬಿಬಿಎಂಪಿಯ ಕಂದಾಯ ವಿಭಾಗದ ಅಧಿಕಾರಿಗಳ ಮೇಲೆ ಶಾಸಕರು, ಸಚಿವರು ಹಾಗೂ ಪ್ರಭಾವಿಗಳ ಮೂಲಕ ಒತ್ತಡ ಹಾಕಿಸುತ್ತಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ಬಿಬಿಎಂಪಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಆಸ್ತಿಗಳ ಹರಾಜು ಪ್ರಕ್ರಿಯೆಯನ್ನು ವಲಯವಾರು ನಿಗದಿ ಮಾಡಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಫೆಬ್ರವರಿ 10ಕ್ಕೆ ಹರಾಜು ಪ್ರಕ್ರಿಯೆ ನಡೆಯಬೇಕಿತ್ತು. ಫೆಬ್ರವರಿ 11, 12 ಹಾಗೂ 13ಕ್ಕೆ ವಿವಿಧ ವಲಯಗಳಲ್ಲಿ ಆಸ್ತಿ ಹರಾಜು ಹಾಕುವುದಕ್ಕೆ ಬಿಬಿಎಂಪಿ ಮುಂದಾಗಿತ್ತು. ಆದರೆ, ಮೂರು ದಿನವಾದರೂ ಆಸ್ತಿ ಹರಾಜು ಪ್ರಕ್ರಿಯೆ ನಡೆದಿಲ್ಲ.
ಕೆಲವರು ಪಾವತಿ ಮಾಡಿರುವುದೂ ಕಾರಣ
ಇನ್ನು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿ ಹರಾಜು ಹಾಕದೆ ಇರುವುದಕ್ಕೆ ಇನ್ನೊಂದು ಕಾರಣವೂ ಇದೆ. ಬೆಂಗಳೂರಿನಲ್ಲಿ ಆಸ್ತಿಗಳನ್ನು ಹರಾಜು ಹಾಕುವುದಾಗಿ ಬಿಬಿಎಂಪಿಯು ಎಚ್ಚರಿಕೆ ನೀಡಿದ ಮೇಲೆ ಹಲವರು ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ. ಇದು ಸಹ ಹರಾಜು ಪ್ರಕ್ರಿಯೆ ಮುಂದೂಡುವುದಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಈ ರೀತಿ ನೋಟಿಸ್ ನೀಡಿದ ಮೇಲೆ ಶೇ 55ರಷ್ಟು ಜನ ಆಸ್ತಿ ತೆರಿಗೆ ಬಾಕಿಯನ್ನು ಪಾವತಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೀಗಾಗಿ, ಇನ್ನೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಇನ್ನೊಂದು ಲಿಸ್ಟ್ ರೆಡಿ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಒಟ್ಟಾರೆ ಬೆಂಗಳೂರಿನಲ್ಲಿ ಆಸ್ತಿದಾರರು ಆಸ್ತಿ ಉಳಿಸಿಕೊಳ್ಳುವುದಕ್ಕೆ ದೊಡ್ಡ ಸರ್ಕಸ್ ಮಾಡುತ್ತಿದ್ದಾರೆ.
ಪಾಲಿಕೆಯ ಇತಿಹಾಸದಲ್ಲೇ ಮೊದಲು: ಇನ್ನು ಬೆಂಗಳೂರಿನಲ್ಲಿ ಈ ರೀತಿ ಆಸ್ತಿದಾರರ ಮೇಲೆ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದು ಪಾಲಿಕೆಯ ಇತಿಹಾಸದಲ್ಲೇ ಮೊದಲು ಎಂದು ಹೇಳಲಾಗುತ್ತಿದೆ. ಇಷ್ಟು ವರ್ಷಗಳ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಕೇವಲ ನೋಟಿಸ್‌ಗಳನ್ನು ಜಾರಿ ಮಾಡುತ್ತಿತ್ತು. ಇದೇ ಮೊದಲ ಬಾರಿಗೆ ಆಸ್ತಿ ಹರಾಜು ಹಾಗೂ ಆಸ್ತಿ ವಶದಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದು ಆಸ್ತಿದಾರರಲ್ಲಿ ನಡುಕವನ್ನು ಮೂಡಿಸಿದೆ.












Click it and Unblock the Notifications