Bengaluru Property Sale: ಫೆಬ್ರವರಿ 21ರ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡದಿದ್ದರೆ ಆಸ್ತಿಗಳ ಹರಾಜು: ಜಿಬಿಎ ಎಚ್ಚರಿಕೆ
Bengaluru Property Sale: ಬೆಂಗಳೂರಿನಲ್ಲಿ ಆಸ್ತಿದಾರರಿಗೆ ಶಾಕ್ ಕೊಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ಬೆಂಗಳೂರಿನಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರ ಆಸ್ತಿ ವಶಪಡಿಸಿಕೊಳ್ಳುವುದಕ್ಕೆ / ಹರಾಜು ಹಾಕುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳು ಮುಂದಾಗಿವೆ. ಆಸ್ತಿ ತೆರಿಗೆ ಬಾಕಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ಆಸ್ತಿ ತೆರಿಗೆ ಪಾವತಿ ಮಾಡದೆ ಇರುವ ಆಸ್ತಿದಾರರ ಮೇಲೆ ಕ್ರಮಕ್ಕೆ ಬೆಂಗಳೂರಿನ ಪಾಲಿಕೆಗಳು ಮುಂದಾಗಿವೆ.
ಬೆಂಗಳೂರು ಪೂರ್ವನಗರ ಪಾಲಿಕೆ ಕೆ.ಆರ್.ಪುರ ವಲಯ ವ್ಯಾಪ್ತಿಯಲ್ಲಿ ನಗರ ಪಾಲಿಕೆಗೆ ಒಂದಕ್ಕಿಂತಲೂ ಹೆಚ್ಚಿನ ವರ್ಷಗಳ ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ಸ್ವತ್ತುಗಳ ಹರಾಜಿನ ಮೂಲಕ ಬಾಕಿ ಆಸ್ತಿ ತೆರಿಗೆ ವಸೂಲಾತಿಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಕೃಷ್ಣರಾಜಪುರ ವಲಯದ ಜಂಟಿ ಆಯುಕ್ತರಾದ ಡಾ. ಸುಧಾ ಅವರು ತಿಳಿಸಿದ್ದಾರೆ.

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2025ರ ಅಡಿಯಲ್ಲಿ ನಗರ ಪಾಲಿಕೆ ವ್ಯಾಪ್ತಿಯಲ್ಲಿನ ಎಲ್ಲ ಮಾದರಿಯ ಸ್ವತ್ತುಗಳ ಮಾಲೀಕರು ಅಥವಾ ಅಧಿಭೋಗದಾರರ (ಭೂಮಿ ಅಥವಾ ಆಸ್ತಿಯನ್ನು ಮಾಲೀಕರಿಂದ ಬಾಡಿಗೆಗೆ ಅಥವಾ ಲೀಸ್‌ಗೆ ಪಡೆದು ಉಪಯೋಗಿಸುವ ವ್ಯಕ್ತಿ ಅಥವಾ ಸಂಸ್ಥೆ) ಪ್ರತಿ ವರ್ಷವೂ ಆಸ್ತಿ ತೆರಿಗೆ ಪಾವತಿಸುವುದು ಕಡ್ಡಾಯವಾಗಿದೆ. ಒಂದಕ್ಕಿಂತಲೂ ಹೆಚ್ಚಿನ ಸಾಲಿನ ಆಸ್ತಿತರಿಗೆ ಪಾವತಿಸದೇ ಇರುವ ಪ್ರಕರಣಗಳಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಕಾರ್ಯವಿಧಾನವನ್ನು ಆಸ್ತಿ ತೆರಿಗೆ ನಿರ್ಧರಣೆ, ವಸೂಲಾತಿ ಮತ್ತು ನಿರ್ವಹಣೆ ನಿಯಮಗಳು 2024ರ ಅಡಿಯಲ್ಲಿ ರೂಪಿಸಲಾಗಿರುತ್ತದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ ಹಾಗೂ ನಿಯಮಗಳಲ್ಲಿ ತಿಳಿಸಿರುವಂತೆ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಕಾರಣ ಕೇಳಿ ಪತ್ರ, ಆಸ್ತಿ ತೆರಿಗೆ ಬೇಡಿಕೆ ಪತ್ರ ಜಾರಿ ಮಾಡಲಾಗಿದ್ದು, ಸಾಕಷ್ಟು ಕಾಲಾವಕಾಶವನ್ನು ನೀಡಿದ್ದರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಾರೆ. ಅಂತಹ ಪ್ರಕರಣಗಳ ಮಾಲೀಕರಿಗೆ ನಿರಂತರವಾಗಿ ಮೊಬೈಲ್ ಮೆಸೇಜ್‌ಗಳ ಮೂಲಕ ಸ್ವತ್ತಿನ ಬಾಕಿ ಆಸ್ತಿ ತೆರಿಗೆಯನ್ನು ಪಾವತಿಸುವಂತೆ ಹಲವ ಬಾರಿ ತಿಳಿಸಲಾಗಿತ್ತು ಎಂದು ಜಂಟಿ ಆಯುಕ್ತರು ತಿಳಿಸಿದ್ದಾರೆ.
ಮುಂದುವರಿದು ಸಾಕಷ್ಟು ಅವಕಾಶಗಳನ್ನು ನೀಡಿದ ನಂತರವು ಬಾಕಿ ಆಸ್ತಿ ತೆರಿಗೆಯನ್ನು ಪಾವತಿಸದ ಕೃಷ್ಣರಾಜಪುರ ವಲಯ ವ್ಯಾಪ್ತಿಯಲ್ಲಿನ 33 ಸ್ವತ್ತುಗಳನ್ನು ಕಾಯ್ದೆ ಹಾಗೂ ನಿಯಮಗಳನ್ವಯ ಹರಾಜು ಪ್ರಕ್ರಿಯೆಗೆ (Distress sale) ಒಳಪಡಿಸಲು ತಿರ್ಮಾನಿಸಲಾಗಿರುತ್ತದೆ ಎಂದು ಜಂಟಿ ಆಯುಕ್ತರು ಹೇಳಿದ್ದಾರೆ.
ಆಸ್ತಿ ತೆರಿಗೆ ಬಾಕಿದಾರರು ಎಂದು ಗುರುತಿಸಲಾಗಿರುವ ಸ್ವತ್ತುಗಳಿಂದ ಹರಾಜಿನ ಮೂಲಕ ಬೇಬಾಕಿ ಆಸ್ತಿ ತೆರಿಗೆ ವಸೂಲಾತಿ ಮಾಡುವ ಮುಂದುವರಿದ ಕ್ರಮವಾಗಿ ಇದೇ ಫೆಬ್ರವರಿ 21ರಂದು ಬೆಳಗ್ಗೆ 11ಗಂಟೆಗೆ ಜಂಟಿ ಆಯುಕ್ತರ ಕಾರ್ಯಾಲಯ ಕೃಷ್ಣರಾಜಪುರ ವಲಯ-2ರ ಕಚೇರಿಯ ಮುಂಭಾಗದಲ್ಲಿ ಹರಾಜು ಪ್ರಕ್ರಿಯೆಯನ್ನು ನಡೆಸಲಾಗುವುದು ಸಾರ್ಜಜನಿಕರು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಈ ಮೂಲಕ ಕೋರಿದೆ ಎಂದು ಜಂಟಿ ಆಯುಕ್ತರು ಮಾಹಿತಿ ನೀಡಿದ್ದಾರೆ.
ಆಸ್ತಿ ಬಾಕಿ ಉಳಿಸಿಕೊಂಡಿರುವ ಸ್ವತ್ತಿನ ಮಾಲೀಕರು ಹರಾಜು ಪ್ರಕ್ರಿಯೆಯ ಮುನ್ನಾ ಸ್ವತ್ತಿನ ಬಾಕಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸಿದ್ದಲ್ಲಿ ಹರಾಜು ಪ್ರಕ್ರಿಯೆಯಿಂದ ಸ್ವತ್ತನ್ನು ಕೈ ಬಿಡಲಾಗುವುದು, ಅಂತಹ ಸಂದರ್ಭದಲ್ಲಿ ಸ್ವತ್ತಿನ ಹರಾಜು ಪ್ರಕ್ರಿಯೆಗೆ ಮುನ್ನಾ ತಮ್ಮ ಅಹವಾಲುಗಳನ್ನು ಜಂಟಿ ಆಯುಕ್ತರ ಕಚೇರಿಗೆ ಸಲ್ಲಿಸಲು ಅವಕಾಶವಿರುತ್ತದೆ ಎಂದು ಹೇಳಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Bengaluru Rent Crisis: ಬೆಂಗಳೂರಲ್ಲಿ ಬಾಡಿಗೆ ಮನೆ ಡಿಮ್ಯಾಂಡ್ ಬಗ್ಗೆ ಯುವತಿ ವಿಡಿಯೋ ವೈರಲ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ













Click it and Unblock the Notifications