Bengaluru Property: ಬೆಂಗಳೂರು ಜೈಲು, ಬಿಎಂಟಿಸಿ, ಮೆಟ್ರೋ ಸೇರಿ 7 ಸಾವಿರ ಆಸ್ತಿಗಳ ಹರಾಜು: ಗ್ರೇಟರ್ ಬೆಂಗಳೂರು ಪ್ರಾಧಿಕಾರ
Bengaluru Property: ಬೆಂಗಳೂರಿನಲ್ಲಿರುವ ಪ್ರಮುಖ ಆಸ್ತಿಗಳ ಹರಾಜಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳಲ್ಲಿನ ಪ್ರಮುಖ ಆಸ್ತಿಗಳ ಹರಾಜಿಗೆ ಪ್ರಾಧಿಕಾರ ಮುಂದಾಗಿದೆ. ಅದರಲ್ಲಿ ಬೆಂಗಳೂರಿನ ಜೈಲು, ಬಿಎಂಟಿಸಿ ಹಾಗೂ ಮೆಟ್ರೋ ಸಹ ಇರುವುದು ವಿಶೇಷ. ಇಷ್ಟಕ್ಕೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಈ ಆಸ್ತಿಗಳ ಹರಾಜಿಗೆ ಮುಂದಾಗಿರುವುದು ಯಾವ ಕಾರಣಕ್ಕೆ ಹಾಗೂ ಬೆಂಗಳೂರಿನಲ್ಲಿ ಒಟ್ಟು 7,000 ಆಸ್ತಿಗಳನ್ನು ಹರಾಜು ಹಾಕುವುದಕ್ಕೆ ಗುರುತಿಸಿರುವುದು ಯಾಕೆ ಎನ್ನುವ ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಬೆಂಗಳೂರಿನ ವಿವಿಧ ಕ್ಷೇತ್ರಗಳಿಂದ ಆದಾಯ ಸಂಗ್ರಹವಾಗುತ್ತದೆ. ಈ ರೀತಿ ಸಂಗ್ರಹವಾಗುವ ಆದಾಯಗಳಲ್ಲಿ ಆಸ್ತಿ ತೆರಿಗೆಯಿಂದ ಸಂಗ್ರಹವಾಗುವ ತೆರಿಗೆ ಮೊತ್ತವು ಬೃಹತ್ ಪ್ರಮಾಣದ್ದು ಆಗಿದೆ. ಆದರೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಹಲವರು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಬಿಸಿ ಮುಟ್ಟಿಸುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಇಲಾಖೆಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಕೋಟ್ಯಂತರ ರೂಪಾಯಿ ಆಸ್ತಿ ತೆರಿಗೆಯನ್ನು ಬಾಕಿ ಇದೆ. ಈ ರೀತಿ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿಗಳಲ್ಲಿ ಆಸ್ತಿದಾರರು, ಸರ್ಕಾರಿ ಸಂಸ್ಥೆಗಳು, ಮೆಟ್ರೋ ಹಾಗೂ ಬಿಎಂಟಿಸಿ ಸೇರಿದಂತೆ ಜೈಲು ಸಹ ಇದೆ. ಇದೀಗ ಈ ಆಸ್ತಿಗಳ ಹರಾಜಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇದೇ ಮೊದಲ ಬಾರಿಗೆ ಮುಂದಾಗಿದೆ.
437 ಕೋಟಿ ತೆರಿಗೆ ಬಾಕಿ
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರನ್ನು ಪಟ್ಟಿ ಮಾಡಲಾಗಿದೆ. ಈ ರೀತಿ ದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವ ಆಸ್ತಿಗಳನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಪಟ್ಟಿ ಮಾಡಿಕೊಂಡಿದ್ದು, ಈ ರೀತಿ ದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಸಂಖ್ಯೆಯು 7 ಸಾವಿರಕ್ಕೂ ಹೆಚ್ಚಾಗಿದೆ. ಈ ಆಸ್ತಿಗಳಿಂದ ಬರೋಬ್ಬರಿ 437 ಕೋಟಿ ರೂಪಾಯಿ ಆಸ್ತಿ ತೆರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಬೇಕಾಗಿದೆ ಅಥವಾ ಬಾಕಿ ಉಳಿದಿದೆ. ಆದರೆ ಹಲವು ಬಾರಿ ನೋಟಿಸ್ ಜಾರಿ ಮಾಡಿದರೂ ಈ ಆಸ್ತಿದಾರರು ಆಸ್ತಿ ತೆರಿಗೆ ಪಾವತಿ ಮಾಡದ ಹಿನ್ನೆಲೆಯಲ್ಲಿ ಈ ಆಸ್ತಿಗಳ ಹರಾಜಿಗೆ ಮುಂದಾಗಿರುವುದಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಹೇಳಿದೆ.
ಫೆಬ್ರವರಿ 17ಕ್ಕೆ ಹರಾಜು ಪ್ರಕ್ರಿಯೆ
ಇನ್ನು ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿಗಳ ಹರಾಜು ಪ್ರಕ್ರಿಯೆಯು ಇದೇ ಫೆಬ್ರವರಿ 17ರಂದು ನಡೆಯಲಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಂದಾಯ ವಿಭಾಗದ ಅಧಿಕಾರಿಗಳು ಹೇಳಿದ್ದಾರೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಎಲ್ಲಾ ಸುಸ್ತಿದಾರರಿಗೆ ಹರಾಜು ನೋಟಿಸ್ ಜಾರಿ ಮಾಡಲಾಗಿದೆ. ಪಾಲಿಕೆಯ ನಗರ ಪಾಲಿಕೆಗಳ ಕಂದಾಯ ಅಧಿಕಾರಿ, ಜಂಟಿ ಆಯುಕ್ತ ಹಾಗೂ ವಲಯ ಉಪ ಆಯುಕ್ತರಿಗೆ ಫೆಬ್ರವರಿ 17ರಂದು ಹರಾಜು ಪ್ರಕ್ರಿಯೆ ನಡೆಸುವುದಕ್ಕೆ ಸೂಚನೆ ನೀಡಲಾಗಿದೆ ಎಂದೂ ತಿಳಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರಮುಖ ಸಂಸ್ಥೆಗಳು
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಪ್ರಮುಖ ಸಂಸ್ಥೆಗಳು / ಆಸ್ತಿಗಳಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಚೇರಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್), ಬೆಂಗಳೂರು ಉತ್ತರ ಪ್ರದೇಶದ ಉಪ ಪೊಲೀಸ್ ಆಯುಕ್ತರ ಕಚೇರಿ , ಯಲಹಂಕ ಹಾಗೂ ಶಾಂತಿನಗರದ ಪೊಲೀಸ್ ಕ್ವಾಟ್ರಸ್ ಸೇರಿದಂತೆ ಹಲವು ಆಸ್ತಿಗಳು ಇವೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.












Click it and Unblock the Notifications