Bengaluru Property: ಬೆಂಗಳೂರಿನ ಈ ಆಸ್ತಿಗಳ ಹರಾಜಿಗೆ ಮುಂದಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ!
ಬೆಂಗಳೂರು: ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ 7,000 ಆಸ್ತಿದಾರರಿಗೆ ಶಾಕ್ ಕೊಡುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ. ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಆಸ್ತಿದಾರರ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವುದಕ್ಕೆ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿ ಸುಮಾರು 7,000 ಆಸ್ತಿ ಮಾಲೀಕರು ಒಟ್ಟು 437 ಕೋಟಿ ರೂ.ಗಳಿಗಿಂತ ಹೆಚ್ಚಿನ ಆಸ್ತಿ ತೆರಿಗೆ ಬಾಕಿಯನ್ನು ಉಳಿಸಿಕೊಂಡಿದ್ದಾರೆ ಎಂದು ಗ್ರೇಟರ್ ಬೆಂಗಳೂರಿನ ಕಂದಾಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದು. ಈ ಸಂಬಂಧ ಆಸ್ತಿ ಮಾಲೀಕರಿಗೆ ಬೇಡಿಕೆ ನೋಟಿಸ್‌ಗಳನ್ನು ಕಳುಹಿಸಲಾಗಿದೆ. ಆದರೂ ಸಹ ಅವರು ತೆರಿಗೆ ಪಾವತಿಸದೆ ಇರುವುದರಿಂದ, ಮುಂದಿನ ಕ್ರಮವಾಗಿ ಜಪ್ತಿ ಆದೇಶಗಳನ್ನು ಹೊರಡಿಸಲಾಗಿದೆ. ಸಾವಿರಾರು ಜನ ತಮ್ಮ ಆಸ್ತಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.

Bengaluru Property ಆಸ್ತಿದಾರರಿಗೆ ಕೊನೆಯ ಅವಕಾಶ
ಜಪ್ತಿ ಆದೇಶಗಳ ಹೊರಡಿಸಿದ ಬಳಿಕವೂ ತೆರಿಗೆ ಪಾವತಿ ಆಗದಿರುವ ಹಿನ್ನೆಲೆಯಲ್ಲಿ, ಕೊನೆಯ ಕ್ರಮವಾಗಿ ಈ ಆಸ್ತಿಗಳನ್ನು 17-02-2026 ರಂದು ಆಯಾ ವಲಯಗಳ ಜಂಟಿ ಆಯುಕ್ತರ ಕಚೇರಿಗಳಲ್ಲಿ ಹರಾಜು ಮಾರಾಟಕ್ಕೆ ನಿಗದಿಪಡಿಸಲಾಗಿದೆ. ಹರಾಜಿಗೆ ಸಂಬಂಧಿಸಿದ ನೋಟಿಸ್‌ಗಳ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ.
ಸಂಬಂಧಿತ ಆಸ್ತಿ ಮಾಲೀಕರು ತಕ್ಷಣವೇ https://BBMPTax.karnataka.gov.in ಮೂಲಕ ಆನ್‌ಲೈನ್ ಪಾವತಿ ಮಾಡಿದಲ್ಲಿ, ಹರಾಜು ಪ್ರಕ್ರಿಯೆಯನ್ನು ತಪ್ಪಿಸಿಕೊಳ್ಳಬಹುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Bengaluru Property Tax: ಕಳೆದ ಬಾರಿಯೂ ಇದೇ ಮಾದರಿ
ಇನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಪಾಲಿಕೆಗಳು ಬೆಂಗಳೂರಿನಲ್ಲಿ ಸುದೀರ್ಘ ಅವಧಿಯಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್ ಕೊಡುವುದಕ್ಕೆ ಮುಂದಾಗಿದೆ. 2024 - 2025ನೇ ಸಾಲಿನಲ್ಲೂ ಅಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ಶಾಕ್ ನೀಡಲಾಗಿತ್ತು.
ಅಂದಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಂಟು ವಲಯಗಳ ವ್ಯಾಪ್ತಿಯಲ್ಲೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಪಟ್ಟಿ ಮಾಡಿಕೊಂಡು ಆಯಾ ಆಸ್ತಿದಾರರ ಆಸ್ತಿಗಳನ್ನು ಹರಾಜು ಮಾಡುವುದಾಗಿ ಹೇಳಲಾಗಿತ್ತು. ಈ ಕ್ರಮದಿಂದ ಹಲವು ಆಸ್ತಿದಾರರು ಮಹಾನಗರ ಪಾಲಿಕೆಯು ನೀಡಿದ್ದ ಗಡುವಿನ ಒಳಗಾಗಿ ತೆರಿಗೆ ಪಾವತಿ ಮಾಡಿದ್ದರು. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರವೂ ಅದೇ ಮಾದರಿಯನ್ನು ಅನುಸರಿಸುತ್ತಿದೆ. ಈ ಬಾರಿ 7 ಸಾವಿರಕ್ಕೂ ಹೆಚ್ಚು ಆಸ್ತಿಗಳನ್ನು ಹರಾಜು ಹಾಕುವುದಾಗಿ ಹೇಳಿದೆ. ಆಸ್ತಿದಾರರು ತಮ್ಮ ಆಸ್ತಿಗಳನ್ನು ಉಳಿಸಿಕೊಳ್ಳಬೇಕಾದರೆ ಕೂಡಲೇ ಬಾಕಿ ಇರುವ ಆಸ್ತಿ ತೆರಿಗೆಯನ್ನು ಪಾವತಿ ಮಾಡಬೇಕಾಗುತ್ತದೆ.
ಕಳೆದ ಬಾರಿ ವಲಯವಾರು ಆಸ್ತಿಗಳನ್ನು ಪಟ್ಟಿ ಮಾಡಿ ಬಿಡುಗಡೆ ಮಾಡಲಾಗಿತ್ತು. ಈ ಬಾರಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಐದು ಪಾಲಿಕೆಗಳು ಹೊಸ ಮಾದರಿಯನ್ನು ಅನುಸರಿತ್ತಿವೆ. ಬೆಂಗಳೂರಿನ ಐದು ಪಾಲಿಕೆಗಳ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ಆಸ್ತಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ.












Click it and Unblock the Notifications