Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು
Bengaluru Property: ಬೆಂಗಳೂರಿನಲ್ಲಿ ಭೂಮಿಗೆ ಚಿನ್ನದ ಬೆಲೆ ಇದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಹ ಇದೀಗ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದುಕೊಂಡಿದೆ. ಇದರ ವಿವರ ಇಲ್ಲಿದೆ
ಬೆಂಗಳೂರು ರಸ್ತೆ ಮತ್ತು ಮೂಲಸೌಕರ್ಯ ಬಲಪಡಿಸಲು 510 ಕೋಟಿ ಮೌಲ್ಯದ 14 ಎಕರೆ ಭೂಮಿಯನ್ನು ಪೂರ್ವ ನಗರ ಪಾಲಿಕೆ ವಶಕ್ಕೆ ಪಡೆದುಕೊಂಡಿದೆ. ನಗರದ ಮೂಲಸೌಕರ್ಯವನ್ನು ಬಲಪಡಿಸುವುದು ಹಾಗೂ ಭವಿಷ್ಯದ ಸಂಚಾರದ ಅವಶ್ಯಕತೆಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಪ್ರಮುಖ ರಸ್ತೆಗಳು ಹಾಗೂ ಉಪ ಮುಖ್ಯರಸ್ತೆಗಳ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಪರಿತ್ಯಜಿಸಲಾದ (ಯಾರು ಬಳಕೆ ಮಾಡದ) ಭೂಮಿಯನ್ನು ಬೆಂಗಳೂರು ಪೂರ್ವ ನಗರ ಪಾಲಿಕೆ ವಶಕ್ಕೆ ಪಡೆಯುವ ಮೂಲಕ ಮಹತ್ವದ ಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ಅವರು ತಿಳಿಸಿದ್ದಾರೆ.

Bengaluru Property ಕಾರ್ಯಾಚರಣೆ ನಡೆಸಿದ ಸ್ಥಳಗಳು
ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಇಲ್ಲಿಯವರೆಗೂ ನಡೆದ ಕಾರ್ಯಾಚರಣೆಯಲ್ಲಿ 52 ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಮುಖವಾಗಿ ನಗರ ಪಾಲಿಕೆ ವ್ಯಾಪ್ತಿಯ ಪ್ರಮುಖ ಪ್ರದೇಶದ ಆಸ್ತಿಗಳನ್ನು ವಶಕ್ಕೆ ಪಡೆಯಲಾಗಿದೆ.
1. ಐಟಿಪಿಎಲ್ ಮುಖ್ಯರಸ್ತೆ
2. ವೈಟ್‌ಫೀಲ್ಡ್ ಮುಖ್ಯರಸ್ತೆ
3. ದೊಡ್ಡನೆಕ್ಕುಂದಿ (ಪ್ರಸ್ತಾಪಿತ ಹೊರವರ್ತುಲ ಮತ್ತು ಪಿಆರ್.ಆರ್ ಸಂಪರ್ಕಿಸುವ ರಸ್ತೆ ಜಾಗ)
ಪ್ರದೇಶಗಳಲ್ಲಿ ಪರಿತ್ಯಾಜನ ಪತ್ರ ಆಗಿರುವ ಹಾಗೂ ಪರಿಷ್ಕೃತ ಮಹಾಯೋಜನೆ 2015ರಂತೆ ರಸ್ತೆ ಅಗಲೀಕರಣಕ್ಕಾಗಿ ಗುರುತಿಸಲಾದ ಭೂಮಿಯನ್ನು ಸ್ವಾಧೀನಕ್ಕೆ ಪಡೆಯಲಾಯಿತು ಎಂದು ಆಯುಕ್ತರು ತಿಳಿಸಿದ್ದಾರೆ.
ಸ್ವತ್ತಿನ ಮಾರುಕಟ್ಟೆ ಮೌಲ್ಯ
ಸರ್ಕಾರಿ ಮಾರ್ಗಸೂಚಿ ದರದಂತೆ ಸುಮಾರು 510 ಕೋಟಿ ಮೌಲ್ಯದ 14 ಎಕರೆ (56,722.6 ಚದರ ಮೀಟರ್) ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಪೂರ್ವ ನಗರ ಪಾಲಿಕೆ ವಶಕ್ಕೆ ಪಡೆಯಲಾಗಿದ್ದು, ಸ್ವತ್ತುಗಳು ಒತ್ತುವರಿಯಾಗದಂತೆ ತಡೆಯಲು ರಸ್ತೆ ಅಗಲೀಕರಣಕ್ಕೆ ಕಾಯ್ದಿರಿಸಿರುವ ಮತ್ತು ನಗರ ಪಾಲಿಕೆ ಸ್ವತ್ತಾಗಿರುತ್ತದೆ ಎಂದು ಸೂಚನಾ ಫಲಕಗಳನ್ನು ಅಳವಡಿಸಲಾಗಿರುತ್ತದೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ರಸ್ತೆ ಮತ್ತು ಮೂಲಸೌಕರ್ಯ ವಿಸ್ತರಣೆಗೆ ಮಹತ್ವದ ನೆರವು
ನಗರ ಪಾಲಿಕೆಯ ವಶಕ್ಕೆ ಪಡೆದಿರುವ ಈ ಭೂಮಿಯನ್ನು ಬಳಸಿಕೊಂಡು ವಿವಿಧ ಪ್ರಮುಖ ಆರ್ಟೀರಿಯಲ್ ಹಾಗೂ ಸಬ್-ಆರ್ಟೀರಿಯಲ್ ರಸ್ತೆಗಳ ವಿಸ್ತರಣೆ, ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಅಗತ್ಯವಿರುವ ಕಡೆ ಸೈಕಲ್ ಪಾಥ್ ನಿರ್ಮಾಣ ಸೇರಿದಂತೆ ಇನ್ನಿತರೆ ಮೂಲಸೌಕರ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ. ಪ್ರಮುಖ ರಸ್ತೆಗಳನ್ನು ಅಗಲಗೊಳಿಸುವ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು, ಸಂಚಾರ ಸುಗಮಗೊಳಿಸುವುದು ಹಾಗೂ ಸಾರ್ವಜನಿಕರಿಗೆ ಉತ್ತಮ ರಸ್ತೆ ಮೂಲಸೌಕರ್ಯ ಒದಗಿಸುವುದರೊಂದಿಗೆ ಭವಿಷ್ಯದ ನಗರ ಅಭಿವೃದ್ಧಿಗೆ ಅಗತ್ಯವಾದ ಮೂಲಸೌಕರ್ಯ ವ್ಯವಸ್ಥೆಗಳನ್ನು ಬಲಪಡಿಸುವುದು ಸಾಧ್ಯವಾಗಲಿದೆ ಎಂದು ಹೇಳಲಾಗಿದೆ.
ಭವಿಷ್ಯದ ಅಭಿವೃದ್ಧಿಗಾಗಿ ನಿರಂತರ ಕಾರ್ಯಾಚರಣೆ
ಪೂರ್ವ ನಗರ ಪಾಲಿಕೆ ಭಾಗದಲ್ಲಿ ಹೆಚ್ಚುತ್ತಿರುವ ವಾಹನ ಸಂಚಾರ ದಟ್ಟಣೆ ಹಾಗೂ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ರಸ್ತೆಗಳ ಮೂಲಸೌಕರ್ಯ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯು ನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಆರ್.ಡಿ ಸ್ವತ್ತುಗಳನ್ನು ಮತ್ತು ಪರಿಷ್ಕೃತ ಮಹಾಯೋಜನೆ 2015ರಂತೆ ರಸ್ತೆ ಅಗಲೀಕರಣಕ್ಕಾಗಿ ಗುರುತಿಸಿರುವ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಮುಂದುವರಿಯಲಿದೆ ಎಂದು ಆಯುಕ್ತರು ವಿವರಿಸಿದರು.
ನಗರದ ಅಭಿವೃದ್ಧಿಯನ್ನು ಯೋಜಿತ ರೀತಿಯಲ್ಲಿ ಮುಂದುವರಿಸಲು ಈ ರೀತಿಯ ಭೂಮಿ ಸ್ವಾಧೀನ ಮತ್ತು ರಸ್ತೆ ವಿಸ್ತರಣೆ ಕ್ರಮಗಳು ಮಹತ್ವದ್ದಾಗಿರುತ್ತದೆ. ಹೀಗಾಗಿ, ಎಂಜಿನಿಯರಿಂಗ್ ವಿಭಾಗವಾರು ಕಾರ್ಯಪಾಲಕ ಎಂಜಿನಿಯರ್‌ಗಳು, ಸಹಾಯಕ ಕಾರ್ಯಪಾಲಕ ಎಂಜಿನಿಯರಗಳು, ಸಹಾಯಕ ನಿರ್ದೇಶಕರು(ನಗರ ಯೋಜನೆ), ಸಹಾಯಕ ನಿರ್ದೇಶಕರು (ಲ್ಯಾಂಡ್ ರೆಕಾರ್ಡ್) ಹಾಗೂ ಟಿಡಿಆರ್ ವಿಭಾಗದ ಅಧಿಕಾರಿಗಳನ್ನು ಒಳಗೊಂಡ ಜಾರಿ ತಂಡಗಳನ್ನು ರಚಿಸಿ ರಸ್ತೆ ವಿಸ್ತರಣೆಗೆ ಅಗತ್ಯವಾದ ಭೂಮಿಯನ್ನು ಗುರುತಿಸಿ ನಗರ ಪಾಲಿಕೆಯ ವಶಕ್ಕೆ ಪಡೆಯುವ ಕಾರ್ಯಾಚರಣೆಯನ್ನು ಹಂತ ಹಂತವಾಗಿ ಕೈಗೊಳ್ಳಲಾಗುತ್ತಿದೆ. ನಗರದಲ್ಲಿನ ಸಮಗ್ರ ಮತ್ತು ಸುಸ್ಥಿರ ಮೂಲಸೌಕರ್ಯ ಅಭಿವೃದ್ಧಿಗೆ ಬೆಂಗಳೂರು ಪೂರ್ವ ನಗರ ಪಾಲಿಕೆ ಬದ್ಧವಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.
-
Bengaluru Waste: ಬೆಂಗಳೂರಲ್ಲಿ ಕಸ ಸಂಗ್ರಹ ವ್ಯವಸ್ಥೆಯಲ್ಲಿ ಹೊಸ ಸುಧಾರಣೆ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL











Click it and Unblock the Notifications