ಬೆಂಗಳೂರು: ಮಹಿಳೆಯರ ರಕ್ಷಣೆಯೇ ಸರ್ಕಾರದ ಪ್ರಥಮ ಆದ್ಯತೆ: ಬೊಮ್ಮಾಯಿ

ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥಿತಿ ಇರಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು, ಮಾರ್ಚ್ 03: ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥಿತಿ ಇರಬೇಕು. ಈ ನಿಟ್ಟಿನಲ್ಲಿ ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಪೊಲಿಸರ ಮೇಲಿನ ನಂಬಿಕೆಯಿಂದ ಮಹಿಳೆಯರಿಗೆ ರಾತ್ರಿ ಪಾಳಿಯಲ್ಲಿ ಕೆಲಸ ಮಾಡಲು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಮಹಿಳೆಯರು ಪುರುಷರು ಸಮಾನವಾಗಿ ಕೆಲಸ ಮಾಡುವ ವ್ಯವಸ್ಥೆಯಾಗಬೇಕು ಎನ್ನುವ ಕಾರಣಕ್ಕೆ ಮಹಿಳೆಯರಿಗೆ ರಾತ್ರಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

Bengaluru: Protection of women is the first priority of the government, Say CM Bommai

ಮಹಿಳೆ ಮೇಲಿನ ದೌರ್ಜನ್ಯ ತಡೆಯಲು ಕ್ರಮ

ದೇಶದ 130ಕೋಟಿ ಜನ ಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದಾರೆ. ಎಲ್ಲರಿಗೂ ಬದುಕಿನಲ್ಲಿ ಸಾಧನೆ ಮಾಡಬೇಕು ಎನ್ನುವ ಉತ್ಸಾಹವಿದೆ. ಅವರೂ ಶಾಲೆಗೆ, ಉದ್ಯೋಗಕ್ಕೆ ಹೋಗಬೇಕು. ಆದರೆ ಹಲವಾರು ಸಂದರ್ಭಗಳಲ್ಲಿ ಅವರ ಮೇಲೆ ದೌರ್ಜನ್ಯ ಆಗುತ್ತಿದೆ. ಇದನ್ನು ತಡೆಯಲು ಹಲವಾರು ಉಪಾಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ನಿರ್ಭಯ ಪ್ರಕರಣದ ನಂತರ ಕಾನೂನು ತರಲಾಗಿದೆ.

ಇರುವ ಕಾನೂನಿಗೆ ಬಲ ತುಂಬಲು ಕಾನೂನಿನ ವ್ಯವಸ್ಥೆ ಯ ನಿರ್ವಹಣೆ ಅಗತ್ಯ. ವ್ಯಾಪಕವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಒದಗಿಸುವುದು ಸವಾಲು. ಅಂಥಹುದರಲ್ಲಿ ಮಹಿಳೆಯರ ಸುರಕ್ಷತೆ ಒದಗಿಸುವ ಮಹತ್ವದ ಕೆಲಸವಿದ್ದರೂ, ತಂತ್ರಜ್ಞಾನದ ಬಳಕೆ ಇಲ್ಲದೆ ಅದು ಅಸಾಧ್ಯ ಎಂದು ಮನಗಂಡು ಕೇಂದ್ರ ಸರ್ಕಾರ 668 ಕೋಟಿ ರೂ ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತಂದಿದೆ ಎಂದರು.

Bengaluru: Protection of women is the first priority of the government, Say CM Bommai

ನಾನು ಗೃಹ ಸಚಿವರಾಗಿದ್ದ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಕ್ಯಾಮರಾಗಳನ್ನು ಅಳವಡಿಸಿ ಈಗ ಎಲ್ಲೆಡೆ ಸಂಖ್ಯೆ ಯನ್ನು ಕ್ಯಾಮೆರಾ ಹೆಚ್ಚಿಸಲಾಗಿದೆ. ಈಗಾಗಲೇ 4 ಸಾವಿರ ಕ್ಯಾಮರಾ ಅಳವಡಿಸಲಾಗಿದೆ. ಡಾರ್ಕ್ ಸ್ಪಾಟ್ ಗಳಲ್ಲಿ ಆದ್ಯತೆ ಮೇರೆಗೆ ಕ್ಯಾಮರಾ ಅಳವಡಿಸಬೇಕಿದೆ ಎಂದು ಸಲಹೆ ನೀಡಿದರು.

ಆರು ಮಹಿಳಾ ಪೊಲೀಸ್ ಠಾಣೆ

ಈ ಯೋಜನೆಯಡಿ 112 ದ್ವಿಚಕ್ರ ವಾಹನಗಳನ್ನು ಇದಕ್ಕೆ ಜೋಡಿಸಿರುವುದು ಶ್ಲಾಘನೀಯ. ಅತ್ಯಾಧುನಿಕ ಕ್ಯಾಮರಾಗಳ ಸದ್ಬಳಕೆ ಯಾಗಬೇಕು. ಕಮಾಂಡ್ ಸೆಂಟರ್ ಹೆಚ್ಚು ಪ್ರಬಲವಾಗಿರಬೇಕು. ಕಡಿಮೆ ಸಮಯದಲ್ಲಿ ಘಟನಾ ಸ್ಥಳಕ್ಕೆ ತಲುಪುವುದು ಪೊಲೀಸರ ದಕ್ಷತೆಯನ್ನು ಬಿಂಬಿಸುತ್ತದೆ. 8 ಸಿಇ ಎನ್ ಪೊಲೀಸ್ ಠಾಣೆಗಳಿವೆ. ಸಂಚಾರ ದಟ್ಟಣೆ ಕಡಿಮೆ ಮಾಡಲು 4 ಹೊಸ ಪೊಲೀಸ್ ಠಾಣೆ ನೀಡಿದ್ದೇವೆ. ಈ ಬಾರಿಯ ಬಜೆಟ್ ನಲ್ಲಿ 9 ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆ, 5 ಸಂಚಾರ ಪೋಲಿಸ್ ಠಾಣೆ ಮತ್ತು 6 ಮಹಿಳಾ ಪೊಲೀಸ್ ಠಾಣೆ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+