Bengaluru-Pune Expressway: ಬೆಂಗಳೂರು-ಪುಣೆ ಎಕ್ಸ್‌ಪ್ರೆಸ್‌ವೇನಿಂದ ಶಿರಾಕ್ಕೆ ಏನೆಲ್ಲಾ ಉಪಯೋಗಗಳಿವೆ?
Bengaluru-Pune Expressway: ಈಗಾಗಲೇ ದೇಶದಲ್ಲಿ ಕೆಲವು ಎಕ್ಸ್‌ಪ್ರೆಸ್ ವೇಗಳು ವಾಹನ ಸಂಚಾರಕ್ಕೆ ಮುಕ್ತವಾಗಿವೆ. ಮತ್ತೊಂದೆಡೆ ಇನ್ನೂ ಹಲವು ಹೆದ್ದಾರಿಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಇದೀಗ ಬೆಂಗಳೂರು-ಪುಣೆ ದಶಪಥ ಹೆದ್ದಾರಿ ಕಾಮಗಾರಿ ಶಿಘ್ರದಲ್ಲೇ ಆರಂಭವಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇದು ನಿರ್ಮಾಣವಾದರೆ, ಇದರಿಂದ ತುಮಕೂರು ಜಿಲ್ಲೆಯ ಶಿರಾಕ್ಕೆ ಏನೆಲ್ಲ ಪ್ರಯೋಜನೆಗಳಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಬೆಂಗಳೂರು-ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (ವಿಷನ್-47) ಕಾಮಗಾರಿ ಅತಿ ಶೀಘ್ರದಲ್ಲಿ ಪ್ರಾರಂಭ ಆಗಲಿದ್ದು, ಇದರಿಂದಾಗಿ ಶಿರಾ ತಾಲೂಕಿನ ಚಿತ್ರಣವೇ ಬದಲಾವಣೆ ಆಗಲಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಶಿರಾ ತಾಲೂಕಿನ ತೊಗರಗುಂಟೆ ಬಳಿ 25 ಕೋಟಿ ರೂಪಾಯಿ ವೆಚ್ಚದಲ್ಲಿ ಶಿರಾ-ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ ಈಗಾಗಲೇ 3 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿವೆ. ಶೀಘ್ರದಲ್ಲಿ ಬೆಂಗಳೂರು-ಪುಣೆ ಹೆದ್ದಾರಿ ಕಾಮಗಾರಿ ಪ್ರಾರಂಭ ಆಗಲಿದೆ. ಇದು ಪೂರ್ಣಗೊಂಡಡೆ ಒಟ್ಟು 4 ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯತ್ತ ಸಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.
ತುಮಕೂರು ಜಿಲ್ಲೆಯ ಶಿರಾ-ಅಮರಾಪುರ ರಸ್ತೆ ಕಾಮಗಾರಿ ಸುಮಾರು 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಾಡಲಾಗುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ, ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ. ಇನ್ನು ಹೆಚ್ಚಿನ ಹಣ ಬೇಕಾದ್ರೆ, ನನಗೆ ಹೇಳಿ ಕೊಡಿಸುತ್ತೇನೆ. ತಾಲೂಕಿನಲ್ಲಿ ಒಟ್ಟು 4 ಹೆದ್ದಾರಿಗಳು ಹಾದು ಹೋಗಬೇಕು. ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿ 4ಕ್ಕೆ ಪರ್ಯಾಯ ಆಗಿರುವ ಈ ಹೆದ್ದಾರಿಯಿಂದ ಉಭಯ ನಗರಗಳ ಅಂತರ 95 ಕಿಲೋ ಮೀಟರ್ ತಗ್ಗಲಿದ್ದು, ಕೇವಲ 7 ಗಂಟೆಗಳಲ್ಲಿ 700 ಕಿಲೋ ಮೀಟರ್‌ವರೆಗೂ ವಿಸ್ತರಿಸಿದೆ ಎನ್ನಲಾಗಿದೆ. ಭಾರತ್ ಮಾಲಾ-2 ಯೋಜನೆಯಡಿ ಬೆಂಗಳೂರು-ಪುಣೆ ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್‌ವೇಗೆ 40,000 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚವಾಗಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಮಾಣದ ಹೊಣೆ ಹೊತ್ತಿದ್ದು, 2028ರಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. 10 ಲೇನ್ ಹೆದ್ದಾರಿ ಇದಾಗಿದ್ದು, ಸದ್ಯ 8 ಲೇನ್ ನಿರ್ಮಾಣ ಆಗಲಿದೆ. ಇದಕ್ಕಾಗಿ 250 ಮೀಟರ್ ಅಗಲದ ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಇತ್ತೀಚೆಗಷ್ಟೇ ಮಾಹಿತಿ ಹೊರಬಿದ್ದಿತ್ತು.
ಯಾವೆಲ್ಲಾ ಜಿಲ್ಲೆಗಳಿಗೆ ಸಂಪರ್ಕ?: ಮಧ್ಯ, ಕಲ್ಯಾಣ ಹಾಗೂ ಉತ್ತರ ಕರ್ನಾಟಕದ 9, ಮಹಾರಾಷ್ಟ್ರದ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು 12 ಜಿಲ್ಲೆಗಳ ಮೂಲಕ ಈ ಹೆದ್ದಾರಿ ಹಾದು ಹೋಗಲಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ, ತುಮಕೂರು ಜಿಲ್ಲೆಯ ಕೊರಟಗೆರೆ, ಮಧುಗಿರಿ, ಚಿತ್ರದುರ್ಗ, ದಾವಣಗೆರೆಯ ಜಗಳೂರು, ವಿಜಯನಗರದ ಕೂಡ್ಲಿಗಿ, ಕೊಪ್ಪಳದ ಯಲಬುರ್ಗಾ, ಗದಗ ಜಿಲ್ಲೆಯ ರೋಣ, ನರಗುಂದ, ಬಾಗಲಕೋಟೆಯ ಬಾದಾಮಿ, ಮುಧೋಳ, ಜಮಖಂಡಿ, ಬೆಳಗಾವಿ ಜಿಲ್ಲೆಯ ಅಥಣಿ ಮೂಲಕ ಹಾಯ್ದು ಮಹಾರಾಷ್ಟ್ರದ ಸತಾರಾ, ಸಾಂಗ್ಲಿ ಮಾರ್ಗವಾಗಿ ಪುಣೆಗೆ ತಲುಪಲಿದೆ.












Click it and Unblock the Notifications