Bengaluru Rain: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರಿನ ವಿವಿಧ ಭಾಗದಲ್ಲಿ ಧಾರಾಕಾರ ಮಳೆ, ಮುನ್ಸೂಚನೆ

Bengaluru Rain: ಬೆಂಗಳೂರಿನ ವಿವಿಧ ಪ್ರದೇಶದಲ್ಲಿ ಸೆಪ್ಟೆಂಬರ್ 15ರ ಮಂಗಳವಾರ ಸಂಜೆ ಧಾರಾಕಾರ ಮಳೆ ಆಗುತ್ತಿದೆ. ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗುತ್ತಿದ್ದು, ಕೆಲವು ಭಾಗಗಳಲ್ಲಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಮಳೆ ಆಗಿರಲಿಲ್ಲ. ಇದೀಗ ಬೆಂಗಳೂರಿಗೆ ಮತ್ತೆ ವರುಣ ಕೃಪೆ ತೋರಿದ್ದಾನೆ. ಕಳೆದ ಒಂದು ವಾರದಿಂದಲೂ ಬೆಂಗಳೂರಿನಲ್ಲಿ ಬಹುತೇಕ ಬಿಸಿಲ ಝಳವಿತ್ತು. ಇನ್ನು ಮಂಗಳವಾರ ಮಧ್ಯಾಹ್ನದಿಂದಲೇ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ವಿವಿಧ ಭಾಗಗಳಲ್ಲಿ ಮಳೆ ಆಗುತ್ತಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಸರಾಸರಿ ಸಮುದ್ರ ಮಟ್ಟದಲ್ಲಿರುವ ಮುಂಗಾರು ಟ್ರಫ್ (Monsoon trough) ಈಗ ನೈಋತ್ಯ ರಾಜಸ್ಥಾನ (ಕಚ್ ಪ್ರದೇಶ ಮತ್ತು ಅಗ್ನಿಯ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ), ಉದಯಪುರ, ರೈಸನ್, ಪಂಡ್ರಾ ರಸ್ತೆ, ರಾಂಚಿ ಮತ್ತು ದಿಘಾ ಮೂಲಕ ಹಾದುಹೋಗಿ, ಅಲ್ಲಿಂದ ಆಗ್ನೇಯ ದಿಕ್ಕಿನಲ್ಲಿ ವಾಯುವ್ಯ ಬಂಗಾಳ ಕೂಲ್ಲಿಯವರೆಗೆ ಚಾಚಿಕೊಂಡಿದೆ. ವಾಯುವ್ಯ ಬಂಗಾಳ ಕೊಲ್ಲಿ ಹಾಗೂ ಅದಕ್ಕೆ ಹೊಂದಿಕೊಂಡಿರುವ ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳ ಕರಾವಳಿ ಪ್ರದೇಶಗಳ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 1.5 ರಿಂದ 5.8 ಕಿ.ಮೀ. ಎತ್ತರದವರೆಗೆ ವಾಯುಮಂಡಲದ ಮೇಲ್ಭಾಗದಲ್ಲಿ ಚಂಡಮಾರುತದ ಪರಿಚಲನೆ (cyclonic circulation) ಮುಂದುವರಿದಿದೆ; ಇದು ಎತ್ತರಕ್ಕೆ ಹೋದಂತೆ ನೈಋತ್ಯ ದಿಕ್ಕಿಗೆ ಬಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Bengaluru Rain Bay of Bengal Low-Pressure System Brings Heavy Rain to Several Parts of City

ದಕ್ಷಿಣ ಒಳನಾಡು ಕರ್ನಾಟಕದಿಂದ ನೈಋತ್ಯ ಬಂಗಾಳ ಕೊಲ್ಲಿಯವರೆಗೆ ಇದ್ದ ಟ್ರಫ್ ಈಗ ದಕ್ಷಿಣ ಒಳನಾಡು ಕರ್ನಾಟಕದಿಂದ ತಮಿಳುನಾಡಿನ ಮೂಲಕ ಮನ್ನಾ‌ ಕೊಲ್ಲಿಯವರೆಗೆ ಚಾಚಿಕೊಂಡಿದ್ದು, ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದವರೆಗೆ ವಿಸ್ತರಿಸಿದೆ ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಸೆಪ್ಟೆಂಬರ್ 21ರ ವರೆಗೆ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ವರದಿ ಉಲ್ಲೇಖಿಸಿದೆ.

Bengaluru Rain: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮಳೆ

ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮಳೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 21ರ ವರೆಗೆ ಮಳೆ ಇರಲಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಕೂಡಿದ ಮಳೆ ಆಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಕರ್ನಾಟಕದ 8 ಜಿಲ್ಲೆಗೆ ಯೆಲ್ಲೋ ಅಲರ್ಟ್

ಕರ್ನಾಟಕದ 8 ಜೆಲ್ಲೆಗಳಲ್ಲಿ ಮುಂದಿನ ಮೂರು ಗಂಟೆ ಅವಧಿಯಲ್ಲಿ ಭಾರೀ ಮಳೆ ಆಗಲಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಮಳೆ ಅಬ್ಬರ ಇದೆ. ಬೆಂಗಳೂರು ನಗರ, ಕೋಲಾರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ಗಂಟೆ ವಿಪರೀತ ಮಳೆ ಆಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+