Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಮಳೆ ಆರ್ಭಟ, ಇನ್ನು ಪರದಾಟ ಶುರು

ಬೆಂಗಳೂರು, ಜೂನ್‌, 06: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಹಾಗೆಯೇ ಮಂಗಳವಾರ (ಜೂನ್‌ 06) ಬೆಳಗ್ಗೆಯಿಂದಲೂ ಕೂಡ ಬಿಸಿಲು ಇದ್ದು, ಮಧ್ಯಾಹ್ನದ ವೇಳೆಗೆ ಇದ್ದಕ್ಕಿದ್ದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಮಳೆರಾಯ ಆರ್ಭಟವನ್ನು ಶುರು ಮಾಡಿದ್ದಾನೆ.

ಮಂಗಳವಾರ ಮಧ್ಯಾಹ್ನ 4:15ರ ಸುಮಾರಿಗೆ ಸಿಲಿಕಾನ್‌ ಸಿಟಿ ಬೆಂಗಳೂರಿನ ಮೆಜೆಸ್ಟಿಕ್‌, ಕೆ.ಆರ್‌.ಮಾರ್ಕೆಟ್‌, ಬಸವನಗುಡಿ, ಜಯನಗರ, ವಿಧಾನಸೌಧ, ಕೋರಮಂಗಲ, ಹನುಮಂತ ನಗರ, ವಿದ್ಯಾಪೀಠ, ಕತ್ರಿಗುಪ್ಪೆ ಸೇರಿದಂತೆ ಗಾಳಿ ಸಹಿತ ಭಾರೀ ಮಳೆ ಸುರಿದಿದೆ. ಇನ್ನು ಈ ಮಳೆಗೆ ರಸ್ತೆಗಳೆಲ್ಲ ಕೆರೆಯಂತಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ಪರದಾಡಿದ್ದಾರೆ.

Bengaluru Rain: Bengaluru Rain: Heavy rain in many parts of Bangaluru city

ಇನ್ನು ಹೀಗೆ ಮಳೆ ಮುಂದುವರೆದರೆ ರಸ್ತೆಗಳು ಜಲಾವೃತವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಹಾಗೆಯೆ ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಮಳೆ ಆರ್ಭಟ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

ಈಗಾಗಲೇ ಮುಂಗಾರು ಪೂರ್ವ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾ ಹಾನಿಗಳು ಸಂಭವಿಸಿವೆ. ಮತ್ತೊಂದೆಡೆ ಇದೀಗ ಮುಂಗಾರು ಮಳೆ ಪ್ರವೇಶ ಮಾಡಲಿದ್ದು, ಇದರಿಂದ ಇನ್ನೆಷ್ಟು ಅನಾಹುತಗಳು ಆಗುತ್ತವೆಯೋ ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ.

ಹಾಗೆಯೆ ಇಂದಿನಿಂದ ನಾಲ್ಕು ದಿನಗಳ ಕಾಲ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಳೆದ ವಾರದಿಂದ ಮಳೆರಾಯ ಬಿಡುವು ನೀಡಿದ್ದ. ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಮುಚ್ಚಿದ ವಾತಾವರಣ ಇದ್ದು, ಬಳಿಕ ಸಂಜೆಯವರೆಗೆ ಬಿಸಿನ ಧಗೆ ಹೆಚ್ಚಾಗುತ್ತು. ಇನ್ನು ಸಂಜೆ ಸಮಯದಲ್ಲಿ ಸ್ವಲ್ಪ ಗಡುಗು ಸಹಿತ ಹಗುರವಾಗಿ ಜಿನುಗು ಮಳೆ ಬೀಳುತ್ತಿತ್ತು. ಆದರೆ ಇಂದು ನಗರದಲ್ಲಿ ಸಂಜೆ ವೇಳೆಗೆ ಮಳೆರಾಯ ಆರ್ಭಟಿಸಿದ್ದಾನೆ.

ಅಲ್ಲದೆ ಇಂದಿನಿಂದ ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣ ಆಗಿದ್ದು, ಭಾರೀ ಮಳೆ ಸುರಿಯುವ ಮುನ್ಸೂಚನೆಯೂ ಇದೆ.

ಅದರಲ್ಲೂ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದೆ ಅಂತಲೂ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಮತ್ತೊಂದೆಡೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆ ಸುರಿಯುವ ಸಂಭವ ಇದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+