Bengaluru Rain: ಸೈಕ್ಲೋನ್ ಆರ್ಭಟ: ಬೆಂಗಳೂರಲ್ಲಿ ಧಾರಾಕಾರ ಮಳೆ, ಇನ್ನೆಷ್ಟು ದಿನ ಮಳೆ ಇರಲಿದೆ
Bengaluru Rain: ಬೆಂಗಳೂರಿನಲ್ಲಿ ಸೈಕ್ಲೋನ್ ಆರ್ಭಟ ಮುಂದುವರಿದಿದೆ. ಕಳೆದೊಂದು ವಾರದಿಂದಲೂ ಬೆಂಗಳೂರಿನಲ್ಲಿ ಮಳೆ ಆಗುತ್ತಿದೆ. ವಾರಾಂತ್ಯದಂದು ಬೆಂಗಳೂರಿನ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗಿದೆ. ಬೆಂಗಳೂರಿನಲ್ಲಿ ಸೆಪ್ಟೆಂಬರ್ 3ರ ವರೆಗೆ ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಸೈಕ್ಲೋನ್ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಅಲ್ಲದೇ ದೇಶದಾದ್ಯಂತ ಭಾರೀ ಮಳೆ ಆಗುತ್ತಿರುವುದರ ನಡುವೆಯೇ ಅರಬ್ಬೀ ಸಮುದ್ರದಲ್ಲಿ ತೂಫಾನ್ ಉಂಟಾಗಿ ಇನ್ನಷ್ಟು ಜೋರು ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ. ಭಾನುವಾರ ನಗರದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಿದ್ದು ವೀಕೆಂಡ್ ಮೂಡ್‌ನಲ್ಲಿದ್ದ ಜನ ಪರದಾಡಿದರು.

ಸೆಪ್ಟೆಂಬರ್ 02ರ ಸುಮಾರಿಗೆ ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ ಹೊಸ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ಇದರಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ತೂಫಾನ್‌ನಿಂದಾಗಿ ಭಾರೀ ಮಳೆ ಆಗಲಿದೆ ಎಂದು ಹೇಳಲಾಗಿದೆ.
ಮುಂದಿನ 24 ಗಂಟೆಗಳು: ಇನ್ನು ಬೆಂಗಳೂರಲ್ಲಿ ಸಾಮಾನ್ಯವಾಗಿ ಮುಂದಿನ 24 ಗಂಟೆ ಅವಧಿಯಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.
ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ. ಗಂಟೆಗೆ 30- 40 ಕಿ.ಮೀ. ವೇಗದಲ್ಲಿ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ ಎಂದು ಐಎಂಡಿ ವರದಿ ಹೇಳಿದೆ.
ರಸ್ತೆ ಗುಂಡಿ ಮುಚ್ಚುವುದಕ್ಕೆ ವಿಳಂಬ: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗಿದೆ. ಕಳೆದ ಒಂದ ವಾರದಿಂದಲೂ ಬೆಂಗಳೂರಿನಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸವನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಡುತ್ತಿದ್ದರು. ಆದರೆ, ಇದೀಗ ಕಳೆದ ಮೂರು ದಿನಗಳಿಂದಲೂ ನಿರಂತರವಾಗಿ ಮಳೆ ಆಗುತ್ತಿರುವುದರಿಂದ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ ಸಾಧ್ಯವಾಗುತ್ತಿಲ್ಲ. ಮತ್ತೆ ಬೆಂಗಳೂರಿನಲ್ಲಿ ಸಾರ್ವಜನಿಕರು ರಸ್ತೆ ಗುಂಡಿಗಳ ಸಮಸ್ಯೆಯಿಂದ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.












Click it and Unblock the Notifications