Bengaluru Rain: ಬಿರುಗಾಳಿ ಸಹಿತ ಭಾರಿ ಮಳೆಗೆ ತತ್ತರಿಸಿದ ಬೆಂಗಳೂರು

ಬೆಂಗಳೂರು, ಮೇ 21: ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಮಧ್ಯಾಹ್ನವೇ ಮಳೆ ಅಬ್ಬರಿಸಿದೆ. ನಗರದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ರಾಜಾಜಿನಗರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಲಗ್ಗೆರೆ, ವಿಜಯನಗರ ಸೇರಿದಂತೆ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತದೆ.

ಮಧ್ಯಾಹ್ನವೇ ಏಕಾಏಕಿ ಭಾರಿ ಮಳೆಯಾದ ಕಾರಣ ವಾಹನ ಸವಾರರು ಪರದಾಡುವಂತಾಯಿತು. ಹಲವು ರಸ್ತೆಗಳಲ್ಲಿ ನೀರು ನಿಂತು ಭಾರಿ ಸಮಸ್ಯೆ ಉಂಟಾಗಿದೆ. ಮೆಜೆಸ್ಟಿಕ್, ಕೃಷ್ಣರಾಜ ಮಾರುಕಟ್ಟೆ, ರಿಚ್‌ಮಂಡ್ ರಸ್ತೆ, ನಂಜಪ್ಪ ಸರ್ಕಲ್, ಜೆಪಿ ನಗರ, ಬನಶಂಕರಿ, ಶಾಂತಿನಗರ, ಚಾಮರಾಜಪೇಟೆ ಭಾಗಗಳಲ್ಲಿ ಕೂಡ ಉತ್ತಮ ಮಳೆ ಸುರಿಯುತ್ತಿದೆ.

Bengaluru Rain: Heavy Rain Started In Several Parts Of Bengaluru

ಮುಂದಿನ ನಾಲ್ಕು ದಿನ ಭಾರಿ ಮಳೆ?

ಭಾನುವಾರ ರಾತ್ರಿ ಕೂಡ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಮಾತ್ರವಲ್ಲದ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಾಮರಾಜನಗರ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+