Bengaluru Rain: ಸಿಲಿಕಾನ್ ಸಿಟಿ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮಳೆ ಆರ್ಭಟ: ಐಎಂಡಿ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ಮುಂದಿನ ಮೂರು ಗಂಟೆ ಅವಧಿಯಲ್ಲಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಪ್ರದೇಶದಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ ವಿವಿಧ ಭಾಗಗಳಲ್ಲೂ ನವೆಂಬರ್ 7ರ ಶನಿವಾರ ಭಾರೀ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.

ದಕ್ಷಿಣ ಕೇರಳ ಕರಾವಳಿಯ ಸಮೀಪ, ಆಗ್ನೇಯ ಅರಬ್ಬಿ ಸಮುದ್ರದ ಮೇಲೆ, ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲೆ ವಾಯು ಚಕ್ರವಾತ ಪರಿಚಲನೆಯು (upper air cyclonic circulation) ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Bengaluru Rain Heavy Showers Expected Across Karnataka Including Bengaluru Over Next 3 Hours IMD

Bengaluru Rain: ಬೆಂಗಳೂರು ಸೇರಿ ಈ ಭಾಗದಲ್ಲಿ ಮಳೆ

ಶನಿವಾರ ಸಂಜೆ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ ಮತ್ತು ಚಾಮರಾಜನಗರದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಕೂಡಿದ ಮಳೆ ಆಗಲಿದೆ. ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಕೂಡಿದ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ನೈಜ ಸಮಯದ ದತ್ತಾಂಶದ (real-time data) ಆಧಾರದ ಮೇಲೆ ಕರ್ನಾಟಕದಾದ್ಯಂತ ಕನಿಷ್ಠ ತಾಪಮಾನವು 15.9 ರಿಂದ 24.4 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿತ್ತು. ನೈಜ ಸಮಯದ ದತ್ತಾಂಶದ ಪ್ರಕಾರ, ಉತ್ತರ ಒಳನಾಡಿನ ಕರ್ನಾಟಕದ ಬೆಳಗಾವಿ ವಿಮಾನ ನಿಲ್ದಾಣ, ಬಾಗಲಕೋಟೆ, ಕೊಪ್ಪಳ ಮತ್ತು ರಾಯಚೂರು ಹಾಗೂ ದಕ್ಷಿಣ ಒಳನಾಡಿನ ಕರ್ನಾಟಕದ ಬೆಂಗಳೂರು ಕೆಐಎಎಲ್ (KIAL) ವಿಮಾನ ನಿಲ್ದಾಣ, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಿತ್ತು.

ಅದೇ ಸಮಯದಲ್ಲಿ, ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ ಎಡಬ್ಲ್ಯೂಎಸ್ (Mandya AWS) ನಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಿತ್ತು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯ ಸ್ಥಿತಿಯಲ್ಲಿತ್ತು. ಕಳೆದ 24 ಗಂಟೆಗಳಲ್ಲಿ, ದಕ್ಷಿಣ ಒಳನಾಡಿನ ಕರ್ನಾಟಕದ ಮಂಡ್ಯ ಎಡಬ್ಲ್ಯೂಎಸ್ (Mandya AWS) ನಲ್ಲಿ ಕನಿಷ್ಠ ತಾಪಮಾನವು ಗಮನಾರ್ಹವಾಗಿ ಏರಿಕೆಯಾಗಿದೆ. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಕಂಡುಬಂದಿಲ್ಲ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Bengaluru Rain: ಬೆಂಗಳೂರಿನಲ್ಲಿ ಮಳೆ ಆರ್ಭಟ

ಇನ್ನು ನವೆಂಬರ್ 7ರ ಶನಿವಾರ ಸಂಜೆ ಬೆಂಗಳೂರು ನಗರದ ವಿವಿಧ ಪ್ರದೇಶಗಳಲ್ಲಿ ಮಳೆ ಆಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರಿಂದ ಕೂಡಿದ ಸಾಧಾರಣ ಮಳೆ ಆಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 28 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದೂ ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+