Bengaluru Rain: ಭಾರೀ ಮಳೆಗೆ ಬೆಂಗಳೂರು ಅಲರ್ಟ್‌; ಮಳೆ ನಿಂತರೂ ಸಮಸ್ಯೆ ನಿಲ್ಲದು, ಆಯುಕ್ತರ ಖಡಕ್‌ ಸೂಚನೆ!

ಬೆಂಗಳೂರು ನಗರದಲ್ಲಿ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮಳೆನೀರು ನಿಲುಗಡೆ, ಪ್ರವಾಹ ಸಾಧ್ಯತೆಯಿರುವ ಪ್ರದೇಶಗಳು ಹಾಗೂ ಅಂಡರ್‌ಪಾಸ್‌ಗಳ ಕುರಿತು ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಸೂಚಿಸಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ 30ರಂದು ರಾತ್ರಿ 9 ಗಂಟೆಗೆ ಅಧಿಕಾರಿಗಳ ಸಭೆ ನಡೆಸಿದ ಆಯುಕ್ತರು, ಹಿಂದಿನ ವರ್ಷಗಳಲ್ಲಿ ಮಳೆನೀರು ನಿಂತಿದ್ದ ಸ್ಥಳಗಳು ಹಾಗೂ ತಗ್ಗು ಪ್ರದೇಶಗಳ ಸ್ಥಿತಿಗತಿ ಕುರಿತು ಸಮಗ್ರ ಮಾಹಿತಿ ಪಡೆದರು. ಈ ಬಾರಿ ಸುರಿದ ಮಳೆಯಲ್ಲಿ ಯಾವೆಲ್ಲ ಪ್ರದೇಶಗಳಲ್ಲಿ ನೀರು ನಿಂತಿತ್ತು, ಎಷ್ಟು ಕಡೆ ತ್ವರಿತವಾಗಿ ನೀರು ತೆರವುಗೊಳಿಸಲಾಗಿದೆ ಮತ್ತು ಇನ್ನೂ ಯಾವೆಲ್ಲ ಕಡೆ ಸಮಸ್ಯೆ ಮುಂದುವರಿದಿದೆ ಎಂಬ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

Bengaluru Rain High Alert After Heavy Rain Commissioner Orders Immediate Action on Flood-Prone Areas

ಸೂಕ್ಷ್ಮ ಪ್ರದೇಶಗಳ ಸಮಗ್ರ ಪಟ್ಟಿ ಸಿದ್ಧಪಡಿಸಲು ಸೂಚನೆ

ನಗರದಲ್ಲಿ ವಾಟರ್‌ಲಾಗಿಂಗ್‌ ಪಾಯಿಂಟ್‌ಗಳು, ಪ್ರವಾಹ ಸಾಧ್ಯತೆಯಿರುವ ಸೂಕ್ಷ್ಮ ಪ್ರದೇಶಗಳು ಹಾಗೂ ಅಂಡರ್‌ಪಾಸ್‌ಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಆಯುಕ್ತರು ಎಂಜಿನಿಯರ್‌ಗಳಿಗೆ ಸೂಚಿಸಿದ್ದಾರೆ. ಪ್ರತಿ ಸ್ಥಳದಲ್ಲಿ ಎದುರಾಗುತ್ತಿರುವ ಸಮಸ್ಯೆ, ಈಗಾಗಲೇ ಕೈಗೊಂಡಿರುವ ಕ್ರಮ ಹಾಗೂ ಶಾಶ್ವತ ಪರಿಹಾರಕ್ಕೆ ಅಗತ್ಯವಿರುವ ಕಾಮಗಾರಿಗಳ ವಿವರಗಳನ್ನು ಪಟ್ಟಿಯಲ್ಲಿ ದಾಖಲಿಸುವಂತೆ ತಿಳಿಸಿದ್ದಾರೆ.

ಮಳೆ ಬಂದಾಗಲೆಲ್ಲ ಒಂದೇ ಪ್ರದೇಶದಲ್ಲಿ ನೀರು ನಿಲ್ಲುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ನೀಡುವುದಕ್ಕಿಂತ, ಸಮಸ್ಯೆಯ ಮೂಲ ಕಾರಣವನ್ನು ಗುರುತಿಸಿ ಶಾಶ್ವತ ಪರಿಹಾರ ಕಲ್ಪಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

Bengaluru Rain: ವಿದ್ಯಾಶಿಲ್ಪ ಅಂಡರ್‌ಪಾಸ್‌ ಸಮಸ್ಯೆ

ವಿದ್ಯಾಶಿಲ್ಪ ಅಂಡರ್‌ಪಾಸ್‌ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುತ್ತದೆ. ಈ ಪ್ರದೇಶದಲ್ಲಿ ಸಮಸ್ಯೆ ಪರಿಹರಿಸುವಂತೆ ಪಾಲಿಕೆಯ ಎಂಜಿನಿಯರಿಂಗ್‌ ವಿಭಾಗದಿಂದ ಹಲವು ಬಾರಿ ಪತ್ರ ಬರೆದಿದ್ದರೂ ಅಗತ್ಯ ಕ್ರಮ ಕೈಗೊಳ್ಳದಿರುವುದನ್ನು ಸಭೆಯಲ್ಲಿ ಆಯುಕ್ತರು ಗಮನಿಸಿದರು.

ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಅಂಡರ್‌ಪಾಸ್‌ನಲ್ಲಿ ಮಳೆನೀರು ನಿಲುಗಡೆಯಾಗುವ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

Bengaluru Rain: 24 ಗಂಟೆ ಕಂಟ್ರೋಲ್‌ ರೂಂ ಕಾರ್ಯಾಚರಣೆ

ಮಳೆಯ ಸಂದರ್ಭದಲ್ಲಿ ಸಾರ್ವಜನಿಕರ ತುರ್ತು ದೂರುಗಳಿಗೆ ತಕ್ಷಣ ಸ್ಪಂದಿಸಲು 24 ಗಂಟೆಗಳ ಕಾಲ ನಿಯಂತ್ರಣ ಕೊಠಡಿಯಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾರ್ವಜನಿಕರಿಂದ ಬರುವ ದೂರುಗಳು, ತುರ್ತು ಪರಿಸ್ಥಿತಿಗಳು ಹಾಗೂ ಮಳೆ ಸಂಬಂಧಿತ ಸಮಸ್ಯೆಗಳಿಗೆ ವಿಳಂಬವಿಲ್ಲದೆ ಸ್ಪಂದಿಸಬೇಕು. ನಿಯಂತ್ರಣ ಕೊಠಡಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡದಿರುವುದು ಕಂಡುಬಂದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಾರ್ವಜನಿಕರು, ಹಿರಿಯ ಅಧಿಕಾರಿಗಳು ಹಾಗೂ ಸಚಿವರಿಂದ ಬರುವ ಕರೆಗಳಿಗೆ ಕೂಡಲೇ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಇನ್ನೂ ಸಭೆಯಲ್ಲಿ ಅಪರ ಆಯುಕ್ತರಾದ ಆರ್‌. ಲತಾ, ಪಲ್ಲವಿ, ಜಂಟಿ ಆಯುಕ್ತ ಮೊಹಮ್ಮದ್‌ ನಯೀಮ್‌ ಮೊಮಿನ್‌, ಮುಖ್ಯ ಅಭಿಯಂತರರಾದ ಡಾ. ರಾಘವೇಂದ್ರ ಪ್ರಸಾದ್‌, ಯಮುನಾ ಸೇರಿದಂತೆ ಅಧೀಕ್ಷಕ ಹಾಗೂ ಕಾರ್ಯಪಾಲಕ ಎಂಜಿನಿಯರ್‌ಗಳು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+