Bengaluru Rain: ಸೋಮವಾರದ ಮಳೆಗೆ ರಾಜಧಾನಿ ರಸ್ತೆಗಳು ಜಲಾವೃತ: ಇಂದೂ ಕೂಡ ವ್ಯಾಪಕ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 13: ಸೋಮವಾರ ಸಂಜೆ ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡು, ವಾಹನ ಸವಾರರು ಪರದಾಡುವಂತಾಯಿತು. ನಗರದ ಹಲವು ಭಾಗಗಳಲ್ಲಿ ಸಂಜೆ ಮಳೆಯಾದ ಕಾರಣ ಟ್ರಾಫಿಕ್ ಸಮಸ್ಯೆಯಿಂದಾಗಿ ಜನ ಹೈರಾಣಾದರು.
ಕಳೆದ 24 ಗಂಟೆಯಲ್ಲಿ ಮಹದೇವಪುರದ ರಾಮಮೂರ್ತಿ ನಗರದಲ್ಲಿ 94 ಮಿ.ಮೀ. ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ತಿಳಿಸಿದೆ. ಕೆಲವು ಗಂಟೆಗಳ ಮಳೆಗೆ ಬೆಂಗಳೂರು ರಸ್ತೆಗಳು ಕೆರೆಗಳಂತಾಗಿದ್ದವು, ಹಲವು ಭಾಗಗಳಲ್ಲಿ ಅಂಡರ್ ಪಾಸ್‌ಗಳಲ್ಲಿ ನೀರು ತುಂಬಿದ್ದರಿಂದ ಸುಗಮ ಸಂಚಾರಕ್ಕೆ ಭಾರಿ ತೊಂದರೆಯಾತ್ತು. ಶಾಂತಿ ನಗರ, ಕೋರಮಂಗಲ, ಲಾಲ್ ಬಾಗ್, ವಿಲ್ಸನ್ ಗಾರ್ಡನ್, ಆಡುಗೋಡಿ, ಮಾರತಹಳ್ಳಿ, ಲಗ್ಗೆರೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ ಭಾಗದಲ್ಲಿ ಉತ್ತಮ ಮಳೆಯಾಗಿದೆ.

ನಗರದ ಹೊರವರ್ತುಲ ರಸ್ತೆಯ ಕಾಡು ಬೀಸನಹಳ್ಳಿ ಕೆಳ ಸೇತುವೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆಯಿಂಟಾದ ಕಾರಣ ಟ್ರಾಫಿಕ್ ಸಮಸ್ಯೆ ತೀವ್ರವಾಗಿತ್ತು. ವೈಟ್‌ಫೀಲ್ಡ್ ಮುಖ್ಯರಸ್ತೆಯಲ್ಲಿ ನೀರು ತುಂಬಿಕೊಂಡ ಕಾರಣ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.
ವರ್ತೂರು ಕೋಟು, ವೈಟ್‌ಫೀಲ್ಡ್‌ನ ನೆಕ್ಸಸ್ ಮಾಲ್ ರಸ್ತೆಗಳಲ್ಲಿ ಕೂಡ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ಸಂಜೆ ವೇಳೆ ಮಳೆ ಬಂದಿದ್ದರಿಂದ ಜನರಿಗೆ ರಸ್ತೆ ಗುಂಡಿಗಳ ಭಯ ಕೂಡ ಕಾಡಿತ್ತು, ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ಎಲ್ಲೆಲ್ಲಿ ಗುಂಡಿಗಳಿವೆ ಎನ್ನುವುದು ತಿಳಿಯದೇ ಜೀವ ಕೈಯಲ್ಲಿಡಿದು ವಾಹನ ಸಂಚಾರ ಮಾಡಿದರು.
#Bengaluru #bellandur #rain #bengalururain pic.twitter.com/MkSHAzRUFD
— vidya d (@vidyaberyl) June 12, 2023
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ, ಫೋಟೊ ಹಂಚಿಕೆ
ಸೋಮವಾರದ ಮಳೆಯಿಂದ ನಗರದಲ್ಲಿ ಉಂಟಾದ ಹಲವು ಸಮಸ್ಯೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದು, ಬಿಬಿಎಂಪಿ, ಸರ್ಕಾರ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕ ಕಾಮಗಾರಿ, ಯೋಜನೆಗಳೇ ಇಂತಹ ಸಮಸ್ಯೆಗೆ ಕಾರಣ, ಪ್ರತಿ ವರ್ಷ ಮಳೆಗಾಲದಲ್ಲಿ ಸಮಸ್ಯೆಯಾಗುತ್ತಿದ್ದರು, ಶಾಶ್ವತ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಹಲವು ಕಡೆಗಳಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಲಾಗಿದೆ. ಕಳೆದ ಬಾರಿ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾದ ಬಳಿಕ ಎಚ್ಚೆತ್ತಿದ್ದ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ್ದರು, ನಂತರು ಕಾಮಗಾರಿ ನಿಲ್ಲಿಸಲಾಗಿತ್ತು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮತ್ತೆ ರಾಜಕಾಲುವೆ ತೆರವಿಗೆ ಮುಂದಾಗಿದ್ದು, ಶೀಘ್ರದಲ್ಲೇ ತೆರವು ಕಾರ್ಯಾಚರಣೆ ಮಾಡುವುದಾಗಿ ಹೇಳಿದ್ದಾರೆ.
ಇಂದೂ ಕೂಡ ಮಳೆ ಸಾಧ್ಯತೆ
ಇನ್ನು ಮಂಗಳವಾರ ಕೂಡ ಬೆಂಗಳೂರು ನಗರದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ನಾಲ್ಕು ದಿನಗಳ ಕಾಲ ನಗರದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಬೀಳಲಿದೆ ಎಂದು ತಿಳಿಸಿದೆ.
ಸಂಜೆ ವೇಳೆಗೆ ಮಳೆ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದ್ದು, ದ್ವಿಚಕ್ರ ವಾಹನ ಸವಾರರು ಆದಷ್ಟು ಬೇಗ ಮನೆ ಸೇರಿಕೊಳ್ಳುವುದು ಉತ್ತಮವಾಗಿದೆ. ಇನ್ನು ಅಂಡರ್ ಪಾಸ್‌ಗಳಲ್ಲಿ ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ಮಾಡಲಾಗಿದೆ.
-
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications