Bengaluru Rain: ಬೆಂಗಳೂರಿನ ಈ ಪ್ರದೇಶಗಳಲ್ಲಿ ಉತ್ತಮ ಮಳೆ!

ರಾಜಧಾನಿ ಬೆಂಗಳೂರಿಗೆ ಈ ಬಾರಿ ಮುಂಗಾರು ಕೈಕೊಟ್ಟಿದೆ. ಕಳೆದ ವರ್ಷ ಮಳೆಯಿಂದ ಬೆಂಗಳೂರಿಗರು ತತ್ತರಿಸಿದ್ದರೆ, ಈ ಬಾರಿ ಮಳೆ ಕೊರತೆಯಿಂದ ಪರಿತಪಿಸುವಂತಾಗಿದೆ. ಬಿಸಿಲಿನ ಬೇಗೆಯಿಂದ ಕಂಗೆಟ್ಟಿರುವ ಬೆಂಗಳೂರಿಗೆ ಸೋಮವಾರ ಸಂಜೆ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದ್ದು, ಮಂಗಳವಾರ ಹಲವು ಕಡೆಗಳಲ್ಲಿ ಉತ್ತಮ ಮಳೆ ಸುರಿಯುವ ಮುನ್ಸೂಚನೆ ನೀಡಿದೆ.

ಮಂಗಳವಾರ ಕೂಡ ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದ ಹಲವು ಭಾಗಗಳಲ್ಲಿ ಹಗುರ ಮಳೆಯಾದರೆ, ಇನ್ನೂ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಂಗಳವಾರ ನಗರದ ಹಲವು ಕಡೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಸಂಜೆ ವೇಳೆಗೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

 Bengaluru Rain : Moderate Rains Are Likely Over The BBMP Area

ನಗರದ ಜಕ್ಕೂರು, ಹೂಡಿ, ಹೊರಮಾವು, ಬಾಣಸವಾಡಿ, ಸರ್ವಜ್ಞನಗರ, ಜೀವನ್ ಭೀಮಾ ನಗರ, ಲಿಂಗರಾಜಪುರ, ಹೊಯ್ಸಳ ನಗರ, ಅಗರ, ಈಜಿಪುರ, ಸಿವಿ ರಾಮನ್ ನಗರ, ಹಲಸೂರು, ಪುಲಕೇಶಿ ನಗರ, ಕೋರಮಂಗಲ, ಹೆಚ್‌ಎಸ್‌ಆರ್ ಲೇಔಟ್, ಮಂಗಮ್ಮನಪಾಳ್ಯ, ಮಡಿವಾಳ, ಜಕ್ಕಸಂದ್ರ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

ಬೆಳ್ಳಂದೂರು, ದೇವಸಂದ್ರ, ರಾಮಮೂರ್ತಿ ನಗರ, ಕುವೆಂಪು ನಗರ, ಯಲಹಂಕ ಸ್ಯಾಟಲೈಟ್ ಟೌನ್, ಬ್ಯಾಟರಾಯನಪುರ, ಥಣಿಸಂದ್ರ, ಕೊಡಿಗೆಹಳ್ಳಿ, ಚಿಕ್ಕಪೇಟೆ, ಕಾಡು ಮಲ್ಲೇಶ್ವರ, ಓಕಳೀಪುರ, ಗಾಂಧಿನಗರ, ಜಯನಗರ, ಜೆಪಿ ನಗರ, ಸಾರಕ್ಕಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಹಳ್ಳಿ, ಕೆಂಗೇರಿ, ಉಳ್ಳಾಲ, ಜ್ಞಾನಭಾರತಿ, ಕೊಟ್ಟಿಗೆಪಾಳ್ಯ, ಗರುಡಾಚರ್ ಪಾಳ್ಯ, ಹೂಡಿ ಸೇರಿದಂತೆ ಹಲವು ನಗರಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ವರದಿಯಲ್ಲಿ ಹೇಳಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ

ಇನ್ನು ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಾಮರಾಜನಗರ, ರಾಮನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಕಷ್ಟು ವ್ಯಾಪಕವಾದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗು ಜಿಲ್ಲೆಗಳ ಘಟ್ಟಗಳ ಮೇಲೆ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ, ಧಾರವಾಡ, ಬಾಗಲಕೋಟೆ, ಗದಗ, ವಿಜಯಪುರ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+