Bengaluru Rain: ಮಳೆಯಲ್ಲಿ ನಿಂತ ಜನ; ಈ ಕಾರಣಕ್ಕೆ ಡಿಕೆಶಿಗೆ ಥ್ಯಾಂಕ್ಸ್ ಹೇಳ್ತಿದ್ದಾರೆ
ವೀಕೆಂಡ್ ಪ್ಲಾನ್‌ನಲ್ಲಿದ್ದ ಬೆಂಗಳೂರಿನ ಜನರಿಗೆ ಮಳೆರಾಯ ಶಾಕ್ ನೀಡಿದ್ದಾನೆ. ಶನಿವಾರ ರಾತ್ರಿ ಸುರಿದ ಮಳೆಯಿಂದ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿದ್ದು, ಜನ ಪರದಾಡಿದ್ದಾರೆ. ರಸ್ತೆ ಹಾಗೂ ಮೇಲ್ಸೇತುವೆಗಳಲ್ಲಿ ನೀರು ನಿಂತಿದ್ದು ಮನೆಗಳಿಗೆ ತೆರಳಲು ಜನ ಸುಸ್ತಾದರು. ಈ ನಡುವೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ಜನ ಈ ಕಾರಣಕ್ಕೆ ಥ್ಯಾಂಕ್ಸ್ ಅಂತ ಹೇಳ್ತಿದ್ದಾರೆ.
ಬೆಂಗಳೂರಿನಲ್ಲಿ ಸಣ್ಣ ಮಳೆ ಬಂದರೂ ಪರದಾಡುವ ಪರಿಸ್ಥಿತಿ ಇದೆ. ಸಣ್ಣ ಮಳೆಗೂ ರಸ್ತೆಗಳಲ್ಲಿ, ಅಂಡರ್‌ಪಾಸ್‌ಗಳಲ್ಲಿ ಹಾಗೂ ಮೇಲ್ಸೇತುವೆಗಳಲ್ಲಿ ನೀರು ನಿಲ್ಲುವುದು ಕಾಮನ್. ನೆನ್ನೆ ಸಂಜೆ ಸುರಿದ ಮಳೆಗೆ ಬೆಂಗಳೂರಿನ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೀಗ ಬ್ರ್ಯಾಂಡ್ ಬೆಂಗಳೂರು ಅಂದ್ರೆ ಇದೇನಾ ಅಂತ ಜನ ಕೇಳ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಟ್ಯಾಗ್ ಮಾಡುತ್ತಿರುವ ಜನ ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ವ್ಯಂಗ್ಯವಾಡಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಎನ್ನುವುದು ಕೇವಲ ಘೋಷಣೆಗೆ ಸೀಮಿತವಾಗಿದೆ. ಆದರೆ, ಜನ ಇನ್ನೂ ಪರದಾಡುವುದು ತಪ್ಪುತ್ತಿಲ್ಲ ಎನ್ನುತ್ತಿದ್ದಾರೆ. ಕೆಲವರು ವ್ಯಂಗ್ಯವಾಗಿ ಥ್ಯಾಂಕ್ಸ್ ಡಿ.ಕೆ ಶಿವಕುಮಾರ್ ಅವರೇ, ನೀವು ಹೇಳಿದ ಬ್ರ್ಯಾಂಡ್ ಬೆಂಗಳೂರು ಇದೇನಾ ಅಂತ ಕೇಳ್ತಾ ಇದ್ದಾರೆ.

ಡಿ.ಕೆ ಶಿವಕುಮಾರ್ ಬದ್ಧತೆಗೆ ಜೈ
ಬೆಂಗಳೂರಿನಲ್ಲಿ ಡಿ.ಕೆ ಶಿವಕುಮಾರ್ ಅವರ ಬದ್ಧತೆಗೆ ಜೈ.. ಎಂದು ವ್ಯಂಗ್ಯವಾಗಿ ಸುಮುಖ ಶೆಣೈ ಎನ್ನುವವರು ಹೇಳಿದ್ದಾರೆ. ಬೆಂಗಳೂರಿನ ಮಳೆಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡಿರುವ ಅವರು. ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡಿದ್ದಕ್ಕಾಗಿ ಥ್ಯಾಂಕ್ಸ್ ಡಿಯರ್ ಡಿ.ಕೆ ಶಿವಕುಮಾರ್ ಅವರೇ ಎಂದು ಹೇಳಿದ್ದಾರೆ.
#Hebbal Supremacy 💪🏻
— Sumukh Shenoy (@SumukhShenoy) October 5, 2024
Thanks to Brand Bengaluru by Honorable #DCM @DKShivakumar pic.twitter.com/El8OMFag2R
ಹೊಸ ಸ್ವಿಮ್ಮಿಂಗ್ ಫುಲ್‌ಗೆ ಥ್ಯಾಂಕ್ಸ್
ಬೆಂಗಳೂರಿನಲ್ಲಿ ಹೊಸ ಸ್ವಿಮ್ಮಿಂಗ್ ಫುಲ್ ಸೃಷ್ಟಿಯಾಗಿದೆ. ಈ ಹೊಸ ಈಜುಕೊಳ ಸೃಷ್ಟಿ ಮಾಡಿದ್ದಕ್ಕಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಸರ್ಕಾರಕ್ಕೆ ಧನ್ಯವಾದ ಎಂದು ಜನ ಟ್ರೋಲ್ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ನಾವು ಮತ್ತೊಂದು ಸ್ವಿಮ್ಮಿಂಗ್‌ಫುಲ್ ನೋಡಿದ್ವಿ, ಮಾನ್ಯತಾಟೆಕ್ ಪಾರ್ಕ್ ಮೇಲ್ಸೇತುವೆ ಮೇಲೆ ಇದಿದೆ ಎಂದಿದ್ದಾರೆ. ಇದನ್ನೂ ಸಹ ಡಿ.ಕೆ ಶಿವಕುಮಾರ್ ಅವರು ಕ್ರೆಡಿಟ್ ತಗೊಂಡು ಬ್ರ್ಯಾಂಡ್ ಬೆಂಗಳೂರಿಗೆ ಸೇರಿಸುತ್ತಾರಾ ಎಂದು ವ್ಯಂಗ್ಯವಾಗಿ ಪ್ರಶ್ನೆ ಮಾಡಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಮೇಲ್ಸೇತುವೆ ಮೇಲೆ ಮಳೆ ನೀರು ನಿಂತಿದ್ದು, ಕಾರ್‌ನಲ್ಲಿ ಹೋಗುವ ಕೆಲವರು ಬೆಂಗಳೂರಲ್ಲಿ ಮಾನಸ ಸರೋವರ.. ಎನ್ನುವ ಹಾಡನ್ನು ಹಾಡಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Another new swimming pool location has been spotted in Namma Bengaluru at the Manyata Tech Park flyover. Will our development minister, @DKShivakumar, take credit for this and add it to his Brand Bengaluru model?#bangalore #bengaluru #brandbengaluru #rain #bengalururains… pic.twitter.com/irht9vwEG0
— Karnataka Portfolio (@karnatakaportf) October 5, 2024
ಬೆಂಗಳೂರಿನಲ್ಲಿ ಮಳೆ ಅವಾಂತರ: ಬೆಂಗಳೂರಿನಲ್ಲಿ ಶನಿವಾರ ತಡರಾತ್ರಿ ಭಾರೀ ಮಳೆ ಸುರಿದಿದೆ. ಭಾನುವಾರವೂ ಬೆಂಗಳೂರಿನ ಹಲವು ಭಾಗದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ಒಂದೇ ದಿನ ಬೆಂಗಳೂರಿನಲ್ಲಿ 36 ಮಿ.ಮೀಟರ್ ಮಳೆಯಾಗಿರುವುದು ವರದಿಯಾಗಿದೆ. ಯಲಹಂಕ, ಸರ್ಜಾಪುರ ಹಾಗೂ ಹೆಬ್ಬಾಳ ಸೇರಿದಂತೆ ಹಲವು ಭಾಗದಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿರುವುದು ವರದಿಯಾಗಿದೆ. ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿವೆ. ದಿನಸಿ ಹಾಗೂ ಬಟ್ಟೆಗಳು ಮಳೆ ನೀರಿಗೆ ಹಾಳಾಗಿವೆ. ಪ್ರತಿ ಬಾರಿ ಮಳೆ ಬಂದಾಗಲೂ ಕೆಲವು ಪ್ರದೇಶದಲ್ಲಿ ಸಮಸ್ಯೆ ಆಗುತ್ತಿದ್ದರೂ, ಬಿಬಿಎಂಪಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎನ್ನುವ ಆಕ್ರೋಶ ಜನರಲ್ಲಿ ಹೆಚ್ಚಾಗುತ್ತಿದೆ.
-
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ












Click it and Unblock the Notifications