Bengaluru Rain: ಬೆಂಗಳೂರು ನಗರದಲ್ಲಿ ಮುಂಗಾರು ತುರ್ತು ಸಿದ್ಧತೆಗೆ “ಪ್ರಹರಿ” ವಾಹನಗಳ ಪರೇಡ್: ಮಹೇಶ್ವರ್ ರಾವ್

Bengaluru Rain: ಬೆಂಗಳೂರು ನಗರದಲ್ಲಿ ಮುಂಗಾರು ತುರ್ತು ಸಿದ್ಧತೆಗೆ "ಪ್ರಹರಿ" ವಾಹನಗಳ ಪರೇಡ್ ನಡೆಸಲಾಗುವುದು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮುಂಗಾರು ಸನ್ನದ್ಧತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಎಲ್ಲಾ ನಗರ ಪಾಲಿಕೆಗಳ ಆಯುಕ್ತರಿಗೆ ತಮ್ಮ ವ್ಯಾಪ್ತಿಯಲ್ಲಿ ತಕ್ಷಣ "ಪ್ರಹರಿ" ವಾಹನಗಳ ಪರೇಡ್ ಆಯೋಜಿಸಲು ಸೂಚಿಸಿದ್ದಾರೆ. ಜಿಬಿಎ ಮುಖ್ಯ ಕಚೇರಿ ಸಭಾಂಗಣದಲ್ಲಿ ನಡೆದ ಸಮನ್ವಯ ಸಭೆಯಲ್ಲಿ ಮಾತನಾಡಿದ ಅವರು, ಪ್ರಹರಿ ವಾಹನಗಳಲ್ಲಿರುವ ಎಲ್ಲಾ ಅಗತ್ಯ ಉಪಕರಣಗಳನ್ನು ಸಮಗ್ರವಾಗಿ ಪರಿಶೀಲಿಸಿ, ಮಳೆ ಸಂಬಂಧಿತ ತುರ್ತು ಪರಿಸ್ಥಿತಿಗಳಿಗೆ ಸಂಪೂರ್ಣ ಕಾರ್ಯಸನ್ನದ್ಧತೆ ಖಚಿತಪಡಿಸಿಕೊಳ್ಳಬೇಕು ಎಂದು ನಿರ್ದೇಶಿಸಿದ್ದಾರೆ.

Bengaluru Rain

ಜೊತೆಗೆ, ಎಲ್ಲಾ ಮರ ಕಟಾವು ಯಂತ್ರೋಪಕರಣಗಳು, ವಾಹನಗಳು, ಹಾಗೂ ಸಂಬಂಧಿತ ತುರ್ತು ಸೇವಾ ಸಾಧನಗಳನ್ನು ಕೂಡ ವಿವರವಾಗಿ ಪರಿಶೀಲಿಸಿ, ಒಂದು ವಾರದೊಳಗಾಗಿ ಸಮಗ್ರ ಸಿದ್ಧತಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿದರು. ಮುಂದುವರಿದು ಪ್ರವಾಹ ಮತ್ತು ನೀರು ನಿಲ್ಲುವ ಸಮಸ್ಯೆಗಳನ್ನು ಎದುರಿಸುತ್ತಿರುವ ರೈಲ್ವೆ ತಗ್ಗು ಪ್ರದೇಶಗಳಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಸಂಬಂಧಿತ ನಗರ ಪಾಲಿಕೆ ಅಧಿಕಾರಿಗಳು ಹಾಗೂ ರೈಲ್ವೆ ಅಧಿಕಾರಿಗಳು ಪ್ರತಿ ಪ್ರದೇಶವನ್ನು ಜಂಟಿಯಾಗಿ ಪರಿಶೀಲಿಸಿ, ಸಮಸ್ಯೆಗಳನ್ನು ಸಮನ್ವಯದಿಂದ ಪರಿಹರಿಸಿ, ಬಾಕಿ ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ.

ನಿಯಂತ್ರಣ ಕೊಠಡಿಗಳು ಮತ್ತು ತುರ್ತು ಪ್ರತಿಕ್ರಿಯಾ ವ್ಯವಸ್ಥೆಗಳ ಪರಿಶೀಲನೆ: ಇನ್ನು ಮಳೆ ತುರ್ತು ವಿಚಾರಕ್ಕೆ ಸಂಬಂಧಿಸಿದ ಅಧಿಕಾರಿಗಳು ನಿಯಂತ್ರಣ ಕೊಠಡಿಗಳನ್ನು ಪರಿಶೀಲಿಸಿ, ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಅಗತ್ಯ ಸೌಲಭ್ಯಗಳು, ತುರ್ತು ವ್ಯವಸ್ಥೆಗಳು ಹಾಗೂ ಸಿಬ್ಬಂದಿ ಸಿದ್ಧವಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ನಗರದ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಸಂಖ್ಯೆಯಲ್ಲಿ ಲಿಟ್ಟರ್ ಪಿಕ್ಕರ್ ಗಳನ್ನು ಖರೀದಿಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ರಸ್ತೆ ಮೀಡಿಯನ್‌ಗಳ ಸ್ವಚ್ಛತೆ

ನಗರದ ರಸ್ತೆ ಮೀಡಿಯನ್ ಗಳ ಸ್ವಚ್ಛತೆ, ಸಮರ್ಪಕ ನಿರ್ವಹಣೆ ಹಾಗೂ ಅಗತ್ಯವಿದ್ದಲ್ಲಿ ಹೂಳೆತ್ತುವಿಕೆ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಗರದಲ್ಲಿನ ಶಿಥಿಲಾವಸ್ಥೆಯ ಕಟ್ಟಡಗಳು ಹಾಗೂ ಅಪಾಯಕಾರಿ ಕಾಂಪೌಂಡ್ ಗಳನ್ನು ಆದ್ಯತೆಯ ಮೇರೆಗೆ ತೆರವುಗೊಳಿಸಲು ನಿರ್ದೇಶಿಸಿದ್ದಾರೆ. ರಸ್ತೆಗಳ ಗುಣಮಟ್ಟ ಕಾಪಾಡಲು ಹಾಗೂ ಸಮನ್ವಯಿತ ಕಾಮಗಾರಿಗಳನ್ನು ಖಚಿತಪಡಿಸಲು ಪೂರ್ವಾನುಮತಿ ಇಲ್ಲದೆ ರಸ್ತೆ ಕತ್ತರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಂಡು, ಕೇಸ್ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ನಗರದ ಎಲ್ಲಾ ಪ್ರವಾಹ ಪೀಡಿತ ಪ್ರದೇಶಗಳನ್ನು ನಿಯಮಿತವಾಗಿ ಮೇಲ್ವಿಚಾರಣೆ ಮಾಡಿ, ಭಾರಿ ಮಳೆ ಹಾಗೂ ಪ್ರವಾಹ ನಿಯಂತ್ರಣಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಮತ್ತು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಈ ವೇಳೆ ವಿಶೇಷ ಆಯುಕ್ತರಾದ ಸುಷಮಾ ಗೋಡಬೋಲೆ, ಘನತ್ಯಾಜ್ಯ ನಿರ್ವಹಣಾ ನಿಯಮಿತದ ಸಿಇಓ ಕರೀಗೌಡ, ನಗರ ಪಾಲಿಕೆಗಳ ಆಯುಕ್ತರುಗಳು, ಮುಖ್ಯ ಎಂಜಿನಿಯರರು, ರೈಲ್ವೆ, ಜಲಮಂಡಳಿ, ಬಿಡಿಎ ಅಧಿಕಾರಿಗಳು ಸೇರಿದಂತೆ ಮತ್ತಿತರು ಅಧಿಕಾರಿಗಳು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+