ಇಂದು ಬೆಂಗಳೂರಿನಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚು, ಸಿದ್ದರಾಮಯ್ಯ, ಡಿ.ಕೆ.ಶಿ ಪ್ರಮಾಣ ವಚನಕ್ಕೆ ವರುಣನ ಅಡ್ಡಿ ಆತಂಕ

ಬೆಂಗಳೂರು, ಮೇ, 20: ಈಗಾಗಲೇ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದು, ಇನ್ನು ಕೆಲವೆಡೆ ಬಿಡುವು ನೀಡಿದ್ದಾನೆ. ಬೆಂಗಳೂರಿನಲ್ಲಿಯೂ ಕಳೆದ ಎರಡು ದಿನಗಳಿಂದ ಮಳೆ ಬಿಡುವು ನೀಡಿದ್ದು, ಮತ್ತೆ ಇಂದು ನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಅದರಲ್ಲೂ ಇಂದು ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಡಿ.ಕೆ.ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಗುವ ಆತಂಕ ಎದುರಾಗಿದೆ.

ಕಳೆದ ಒಂದೆರಡು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದು, ನಗರದಲ್ಲಿ ಬಿಸಿಲಿನ ವಾತಾರಣ ನಿರ್ಮಾಣವಾಗಿದೆ. ಇದರಿಂದ ಜನರು ಮನೆಯಿಂದ ಹೊರಬರದಂತಹ ಪರಿಸ್ಥಿತಿಯೂ ನಿರ್ಮಾಣವಾಗಿದೆ. ಇಂದು ಮತ್ತೆ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ವರುಣ ಎಂಟ್ರಿ ಕೊಡಲಿದ್ದು, ಈ ಮೂಲಕ ಬಿಸಿಲಿನ ತಾಪಕ್ಕೆ ಕಾದ ಭೂಮಿಗೆ ತಂಪೆರೆಯಲಿದ್ದಾನೆ ಎನ್ನುವ ಮಾಹಿತಿ ತಿಳಿದುಬಂದಿದೆ.

Bengaluru Rain: Rain with thunderstorm in Bengaluru on May 20 and 21

ಗುಡುಗು, ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ

ಅದರಲ್ಲೂ ಬಿಸಿಲಿನ ಧಗೆಯಿಂದ ಕಂಗೆಟ್ಟಿರುವ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಇಂದು (ಭಾನುವಾರ) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯದ ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು, ಈ ಪ್ರಮಾಣ ವಚನ ಕಾರ್ಯಕ್ರಮಕ್ಕೆ ವರುಣದೇವ ಅಡ್ಡಿಯಾಗುವ ಸಾಧ್ಯೆತೆಯಿದೆ ಎನ್ನಲಾಗಿದೆ.

ಅಲ್ಲದ ಇಂದು(ಮೇ 20) ಮತ್ತು ನಾಳೆ (ಮೇ 21) ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಗುಡು, ಮಿಂಚು ಸಹಿತ ಮಳೆ ಬೀಳುವ ನಿರೀಕ್ಷೆ ಇದೆ ಎಂದು ತಿಳಿಸಿದೆ. ಹಾಗೆಯೆ ಮೇ 21 ಮತ್ತು 22 ರಂದು ಸಿಲಿಕಾನ್‌ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಮತ್ತೆ ಇನ್ನು ಕೆಲವೆಡೆ ಮೋಡ ಮುಚ್ಚಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರಿನ ವಾತಾವರಣ ಹೇಗಿದೆ?

ಮೂರು ದಿನಗಳ ಹಿಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಳಗ್ಗೆ ಬಿಸಿಲಿನ ತಾಪಮಾನ ಹೆಚ್ಚಿದ್ದು, ಸಂಜೆ ಆಗುತ್ತಿಂದತೆ ಮಳೆರಾಯ ಧರೆಗಿಳಿದಿದ್ದ, ಇದು ಬಿಸಿಲಿನಿಂದ ಕಾದಿದ್ದ ನೆಲಕ್ಕೆ ತಂಪೆರೆದಂತಾಗಿತ್ತು. ಆದರೆ ಶನಿವಾರ (ಮೇ 19) ಬಿಸಿಲಿನ ವಾತಾವರಣವೇ ಮುಂದುವರೆದಿತ್ತು. ಇಂದು ಕೂಡ ಬಿಸಿಲಿನ ಧಗೆ ಕಡಿಮೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ದಿನಕಳೆದಂತೆ ಬಿಸಿಲಿನ ಧಗೆ ಹೆಚ್ಚಳವಾಗುತ್ತಲೇ ಇದೆ. ಆದರೆ ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತವಾರಣ ಇರಲಿದೆ. ಇನ್ನು ವಿವಿಧ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪಮಾನ ಏರಲಿದೆ. ಮತ್ತೊಂದೆಡೆ ಮಂಜಿನ ನಗರಿ ಮಡಿಕೇರಿ ಜಿಲೆಯಲ್ಲಿ ಜಿನುಗು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇನ್ನು ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮತ್ತೊಂದೆಡೆ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನುವ ಮಾಹಿತಿಯನ್ನು ನೀಡಿತ್ತು.

ಅದರಲ್ಲೂ ಯಾದಗಿರಿಯೂ ಬಿಸಿಲನಾಡು ಅಂತಲೇ ಹೆಸರುವಾಸಿ ಆಗಿರುವ ರಾಯಚೂರಿನ ಪಕ್ಕದಲ್ಲೇ ಬರುವ ಜಿಲ್ಲೆಯಾಗಿದೆ. ಆದ್ದರಿಂದ ಇಲ್ಲಿ ತಾಪಮಾನ ಏರಿಕೆ ಆಗಲಿದೆ. ಮೊನ್ನೆ ಕಲಬುರಗಿಯಲ್ಲಿ ಅದೇ ರೀತಿ ಇಂದು ಪಕ್ಕದ ಜಿಲ್ಲೆಯಾದ ಯಾದಗಿರಿಯಲ್ಲಿ ಬಿಸಿಲಿದ ಧಗೆ ಏರಿಕೆಯಾಗಲಿದೆ ಎಂದು ತಿಳಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+