Bengaluru Rain : ಸೋಮವಾರ ಮಧ್ಯಾಹ್ನವೇ ರಾಜಧಾನಿಯಲ್ಲಿ ಮಳೆ ಆರ್ಭಟ: ಇನ್ನೂ ನಾಲ್ಕು ದಿನ ಭಾರಿ ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನವೇ ವರುಣನ ಅಬ್ಬರ ಶುರುವಾಗಿದೆ. ನಗರದ ಹಲವು ಭಾಗಗಳಲ್ಲಿ ಸುರಿದ ಮಳೆಯಿಂದಾಗಿ ಜನ ಪರದಾಡುವಂತಾಯಿತು. ನಗರದ ಹಲವು ಪ್ರದೇಶಗಳಲ್ಲಿ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡಿದರು.
ನಗರದ ಕಲಾಸಿಪಾಳ್ಯ, ಚಿಕ್ಕಪೇಟೆ, ಕಾಮಾಕ್ಷಿಪಾಳ್ಯ, ಟೌನ್ ಹಾಲ್, ಕೆಆರ್ ಮಾರುಕಟ್ಟೆ ಸೇರಿದಂತೆ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಇಡೀ ನಗರದಲ್ಲಿ ದಟ್ಟವಾದ ಮೋಡ ಆವರಿಸಿಕೊಂಡಿದ್ದು, ಸಂಜೆ ಮತ್ತು ರಾತ್ರಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ದಕ್ಷಿಣ, ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯದಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಬೆಂಗಳೂರಿನ ಮಹದೇವಪುರದ ಹೊರಮಾವು ಪ್ರದೇಶದಲ್ಲಿ 9.5 ಮಿಲಿಮೀಟರ್ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Raining over KR Market & surrounding areas with intense lightning & thunder show & moderate winds
— Karnataka Weather (@Bnglrweatherman) May 8, 2023
VC: Ravi Gowda#KarnatakaRains #BengaluruRains #BangaloreRains #Bengaluru pic.twitter.com/3oW37RnPgs
ರಾಜಾಜಿನಗರ, ಲಗ್ಗೆರೆ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ವಿಜಯನಗರ, ಶಿವನಗರ, ದಾಸರಹಳ್ಳಿ, ಮಲ್ಲೇಶ್ವರಂ ಸೇರಿದಂತೆ ಹಲು ಭಾಗಗಳಲ್ಲಿ ಸೋಮವಾರ ಸಂಜೆ ಮತ್ತು ರಾತ್ರಿ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
#bengalururains #Bengaluru pic.twitter.com/xXrE9OK9Tq
— Akarsh Gowda (@akarsh_gowda007) May 8, 2023
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಾಮರಾಜನಗರ, ರಾಮನಗರ, ಚನ್ನಪಟ್ಟಣ, ಕೋಲಾರ, ದೊಡ್ಡಬಳ್ಳಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗ್ನೇಯ ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತವಾಗಲಿದ್ದು, ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಭಾಗದಲ್ಲಿ ಕೂಡ ಬಿರಿಗಾಳಿ ಸಹಿತ ಉತ್ತಮ ಮಳೆಯಾಗುವ ಬಗ್ಗೆ ಸೂಚನೆ ನೀಡಿದೆ. ಕರಾವಳಿ ತೀರ ಪ್ರದೇಶದಲ್ಲಿ 30-40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications