Rain..Rain..: ಬೆಂಗಳೂರು ಬಿಬಿಎಂಪಿಯಿಂದ ಮಳೆಗಾಲ ಮುನ್ನೆಚ್ಚರಿಕಾ ಕ್ರಮಗಳು
ಬೆಂಗಳೂರು, ಮೇ 07: ಬೆಂಗಳೂರಿನಲ್ಲಿ ಮಳೆಗಾಲ ಸ್ಥಿತಿ ನಿರ್ಮಾಣವಾಗುತ್ತಿದೆ. ಸೋಮವಾರ ಜೋರು ಮಳೆ ಬಂದು 25 ಕಡೆ ಮರ, ಕೊಂಬೆಗಳು ಧರೆಗುರುಳಿದ ಪರಿಣಾಮ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಮಳೆಗಾಲದಲ್ಲಿ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ. ವಾಟ್ಸಾಪ್ ಗ್ರೂಪ್ ರಚಿಸಿ, SDRF ಮತ್ತು ನಿಯಂತ್ರಣ ಕೊಠಡಿ ಜತೆ ನಿರಂತರ ಸಂಪರ್ಕ ಸಾಧಿಸಿ, ಮೆಟ್ರೋ ಕಾಮಗಾರಿ ಸ್ಥಳ ಪರಿಶೀಲಿಸುವಂತೆ ಬಿಬಿಎಂಪಿ ಸೂಚನೆ ನೀಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಂಬಂಧ ಮಂಗಳವಾರ ಸಭೆ ನಡೆಸಿತು. ನಗರದ ಆಯಾ ವಲಯ ವ್ಯಾಪ್ತಿಯ ಅಧಿಕಾರಿಗಳು ಮಳೆಗಾಲದ ವೇಳೆ ಎಲ್ಲಿಯೂ ಸಮಸ್ಯೆಯಾಗದಂತೆ ಕ್ರಮವಹಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಮ್ಮ ಮೆಟ್ರೋ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಸಮಸ್ಯೆ ಆಗಲಿದೆಯೇ ಎಂಬುದನ್ನು ಪರಿಶೀಲಿಸಬೇಕು. ಏನಾದರು ಸಮಸ್ಯೆ ಇದ್ದಲ್ಲಿ ಮೆಟ್ರೋ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ ಸಮಸ್ಯೆಯನ್ನು ಬಗೆಹರಿಸಬೇಕು.
ಚರಂಡಿ ಹೂಳು ತೆರವು: ಶೋಲ್ಡರ್ ಡ್ರೈನ್
ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಬೇಕು. ನಗರದಲ್ಲಿ ಜೋರು ಮಳೆಯಾಗುವ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ರಸ್ತೆ ಮೇಲೆ ಬೀಳುವ ನೀರು ಚರಂಡಿಗಳಿಗೆ ಸರಾಗವಾಗಿ ಹರಿದು ಹೋಗುವ ನಿಟ್ಟಿನಲ್ಲಿ ಶೋಲ್ಡರ್ ಡ್ರೈನ್ ಗಳ ಬಳಿ ಸ್ವಚ್ಚತೆ ಕಾಪಾಡಲು ಸೂಚಿಸಿದರು.
ನಿಯಂತ್ರಣ ಕೊಠಡಿಗಳು ಸೂಕ್ತ ಕಾರ್ಯ ನಿರ್ವಹಿಸಲಿ
ಬಿಬಿಎಂಪಿಯ 8 ವಲಯಗಳು ಹಾಗೂ ಕೇಂದ್ರ ಕಛೇರಿ ಸೇರಿದಂತೆ 9 ಶಾಶ್ವತ ನಿಯಂತ್ರಣ ಕೊಠಡಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಜೊತೆಗೆ ಮಳೆಗಾಲದ ವೇಳೆ ತಾತ್ಕಾಲಿಕವಾಗಿ 63 ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿಕೊಂಡು, ಅಗತ್ಯವಿರುವ ಪಂಪ್‌ಸೆಟ್, ಸಲಕರಣೆಗಳು, ಗ್ಯಾಂಗ್ಸ್ ಗಳನ್ನು ಸನ್ನದ್ಧವಾಗಿಟ್ಟುಕೊಳ್ಳುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಮಳೆ-ಗಾಳಿಗೆ ಬೀಳುವ ಮರ ತ್ವರಿತ ತೆರವಿಗೆ ಸೂಚನೆ
ಬೆಂಗಳೂರಿನಲ್ಲಿ ಮಳೆಗಾಲದ ವೇಳೆ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸುವ ಸಲುವಾಗಿ 28 ತಂಡಗನ್ನು ಕಾರ್ಯನಿರ್ವಹಿಸುತ್ತಿವೆ. ಅದರ ಜೊತೆಗೆ ಹೆಚ್ಚುವರಿಯಾಗಿ 6 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಅದಲ್ಲದೇ ರಸ್ತೆಗಳಲ್ಲಿ ಬಿದ್ದಂತಹ ಮರಗಳನ್ನು ಕೂಡಲೆ ತೆರವುಗೊಳಿಸಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡ ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.
ಮರ, ರೆಂಬೆ/ಕೊಂಬೆ ತೆರವು ಕಾರ್ಯಾಚರಣೆಗಾಗಿ 8 ಟ್ರ್ಯಾಕ್ಟರ್, 2 ಜೆಸಿಬಿ, 2 ಕ್ರೇನ್, ಅವಶ್ಯಕ ಸಲಕರಣೆಗಳು ಹಾಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ. ಬಿದ್ದಂತಹ ಮರ, ರೆಂಬೆ-ಕೊಂಬೆಗಳ ವಿಲೇವಾರಿಗಾಗಿ ಆಯಾ ವಲಯಗಳಲ್ಲಿ ಡಂಪಿಂಗ್ ಯಾರ್ಡ್ಗಳ ವ್ಯವಸ್ಥೆ ಮಾಡಿಕೊಳ್ಳಲು ಉಪ ಅರಣ್ಯ ಸಂರಕ್ಷಾಧಿಕಾರಿಗೆ ತಿಳಿಸಿದರು.
ಅಗ್ನಿಶಾಮಕ/SDRF ಜತೆ ನಿರಂತರ ಸಂಪರ್ಕವಿರಲಿ
ಮಳೆಗಾಲದ ವೇಳೆ ಬಿಬಿಎಂಪಿ ಜೊತೆ ಅಗ್ನಿ ಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳು ಕೈಜೋಡಿಸಲಿದ್ದಾರೆ. ಈ ಸಂಬಂಧ ಆಯಾ ವಲಯ ಆಯುಕ್ತರು ಅಗ್ನಿ ಶಾಮಕ ಠಾಣೆ ಸ್ಥಳಗಳಿಗೆ ಭೇಟಿ ನೀಡಿ ಸದರಿ ಇಲಾಖೆಗಳ ಜೊತೆ ನಿತ್ಯ ಸಂಪರ್ಕದಲ್ಲಿರಬೇಕು. ತುರ್ತು ಪರಿಸ್ಥಿತಿಯ ವೇಳೆ ಸದರಿ ಇಲಾಖೆಗಳ ಸಹಾಯ ಪಡೆದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು ಎಂದು ಹೇಳಿದರು.
ಮಳೆ: ವ್ಯಾಟ್ಸಪ್ ಗ್ರೂಪ್ ರಚಿಸಲು ಸಲಹೆ
ನಗರದಲ್ಲಿ ಮಳೆಗಾಲದ ವೇಳೆ ನಾಗರೀಕರ ಸಮಸ್ಯೆಗೆ ಕೂಡಲೆ ಸ್ಪಂದಿಸುವ ನಿಟ್ಟಿನಲ್ಲಿ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸಪ್ ಗ್ರೂಪ್‌ಗಳನ್ನು ರಚಿಸಿಕೊಂಡು, ಅದರ ಮೂಲಕ ಬಂದಂತಹ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥಪಡಿಸಬೇಕು ಎಂದು ನಿರ್ದೇಶಿಸಿದರು.
ರಸ್ತೆ ಬದಿ, ಇಕ್ಕೆಲಗಳಲ್ಲಿ, ರಾಜಕಾಲುವೆಗಳಲ್ಲಿ/ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಕಟ್ಟಡ ಭಗ್ನಾವಶೇಷಗಳ ವಿಲೇವಾರಿ ಕ್ರಮ ವಹಿಸಬೇಕು.
ಸಭೆಯಲ್ಲಿ ಪಾಲಿಕೆ ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ. ಕೆ. ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತರಾದ ಸುರೋಳ್ಕರ್ ವಿಕಾಸ್ ಕಿಶೋರ್, ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಪ್ರಧಾನ ಅಭಿಯಂತರರು, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
High Speed Rail: ಬೆಂಗಳೂರು ಸೇರಿ 3 ಹೈಸ್ಪೀಡ್ ರೈಲು ಕಾರಿಡಾರ್ ಡಿಪಿಆರ್ 2027ಕ್ಕೆ ಪೂರ್ಣ, ವಿವರ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ












Click it and Unblock the Notifications