Bengaluru Rain: ಒಣಗಿರುವ ಮರ, ಕೊಂಬೆ ಕಂಡರೆ ವಾಟ್ಸಾಪ್ ಮಾಡಿ
ಬೆಂಗಳೂರು ಮೇ 18: ಬೆಂಗಳೂರು ನಗರದಲ್ಲಿ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದೆ. ಅಲ್ಲದೆ ಏಕಾಏಕಿ ಜೋರಾಗಿ ಗಾಳಿ ಬೀಸುತ್ತಿರುವುದರಿಂದ ಮರಗಳು ಉರುಳಿ ಸಾಕಷ್ಟು ಹಾನಿ ಮಾಡುತ್ತಿವೆ. ಹೀಗಾಗಿ ನಗರದಲ್ಲಿ ರಸ್ತೆ ಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳು ಕಂಡು ಬಂದರೆ ಪಾಲಿಕೆ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಕೋರಿದೆ.
ಒಣಗಿರುವ ಮರಗಳು ಬುಡ ಸಮೇತ ಬೀಳುತ್ತಿದ್ದು, ಮರಗಳ ಹಸಿ ರೆಂಬೆಗಳು ಸಹ ಗಾಳಿಯಿಂದ ಆಕಸ್ಮಿಕವಾಗಿ ಮುರಿದು ಬೀಳುತ್ತಿರುವುದು ವರದಿಯಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರಿಗೆ ಹಾಗೂ ಆಸ್ತಿ ಪಾಸ್ತಿಗೆ ಹಾನಿಯಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಈಗಾಗಲೇ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿರುವ, ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸುವ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.

ಬೆಂಗಳೂರು ನಗರದ ಸಾರ್ವಜನಿಕರು ತಮ್ಮ ಪ್ರದೇಶಗಳಲ್ಲಿ ಒಣಗಿರುವ, ಅಪಾಯ ಸ್ಥಿತಿಯ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಮೂಲಕ (ವಾಟ್ಸಾಆಪ್ ಫೋಟೋ ಲಗತ್ತಿಸಿ) ಮಾಹಿತಿ ನೀಡಲು ಬಿಬಿಎಂಪಿ ಪ್ರಕಟಣೆಯಲ್ಲಿ ಕೋರಿದೆ.
ಒಣಗಿದ ಮರದ ಮಾಹಿತಿಗೆ ದೂರವಾಣಿ ಸಂಖ್ಯೆ:
*ಪೂರ್ಣ ತಿಮ್ಮಪ್ಪ 9380090027, ಪಶ್ಚಿಮ ಶಿವರಾಮು 9449659252,
*ದಕ್ಷಿಣ ಎಚ್,ಆರ್, ಹರೀಶ್ 9480685039,
*ದಾಸರಹಳ್ಳಿ- ವಿ.ಚಂದ್ರಪ್ಪ 9164042566,
*ಬೊಮ್ಮನಹಳ್ಳಿ-ನರೇಂದ್ರಬಾಬು.ಜೆ.ಆರ್.ಮಹೇಶ್ 958068500/9480685539,
*ಯಲಹಂಕ-ಚಂದ್ರಪ್ಪ/ಮುತ್ತುರಾಜು 9164042566/9483139438,
*ರಾಜರಾಜೇಶ್ವರಿನಗರ ಎಸ್ ಆರ್ ಕೃಷ್ಣ/ಜಗದೀಶ್ 7760553545/ 9880516322,
*ಮಹದೇವಪುರ-ಎಂಪುಷ್ಪ/ಸುದರ್ಶನ್ 8147276414/9480685541.

ಬೆಂಗಳೂರಿನಲ್ಲಿ ಇಂದು ಧಾರಾಕಾರ ಮಳೆ
ಬೆಂಗಳೂರಿನಲ್ಲಿ ಇಂದು ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಸಂಜೆ ಐದು ಗಂಟೆ ಬಳಿಕ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿಎಸ್ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಬೆಂಗಳೂರಿನಲ್ಲಿ RCB VS CSK ಮ್ಯಾಚ್ ನಡೆಯಲಿದೆ. ಅದಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.
ಅಲ್ಲದೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ರಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿ ಸಿಎಸ್ ಪಾಟೀಲ್ ಹೇಳಿದ್ದಾರೆ. ದಕ್ಷಿಣ ಒಳನಾಡು ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಶ್ಯತೆ ಇದೆ. ಬೆಂಗಳೂರು ಜೊತೆಗೆ ಮೈಸೂರು, ಮಂಡ್ಯ, ಕೋಲಾರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ರಾಜ್ಯದ ಹಲವೆಡೆ ಆರೆಂಜ್ ಅಲರ್ಟ್
ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಿಗೂ ಮೇ 20ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕರ್ನಾಟಕದಲ್ಲಿ ಇಂದಿನಿಂದ ಮೇ 20ರವರೆಗೆ ವಿಶೇಷವಾಗಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮೇ 20ರಂದು ತಮಿಳುನಾಡು ಮತ್ತು ಕೇರಳದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.












Click it and Unblock the Notifications