ರಾಜಧಾನಿಯಲ್ಲಿ ಮತ್ತೆ ಮಳೆ: ಎಚ್ಚರಿಕೆ ವಹಿಸಲು ಸಿಎಂ ಮನವಿ
Recommended Video

ಮಳೆ ಬಗ್ಗೆ ಮುನ್ನಚ್ಚರಿಕೆ ವಹಿಸಲು ಸಿ ಎಂ ಕುಮಾರ ಸ್ವಾಮಿ ಸೂಚನೆ | Oneindia Kannada
ಬೆಂಗಳೂರು, ಸೆಪ್ಟೆಂಬರ್ 27: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸಹ ಧಾರಾಕಾರ ಮಳೆಯಾಗಿದ್ದು, ಹಲವು ಬಡಾವಣೆಗಳು ಜಲಾವೃತವಾಗಿವೆ.
ರಾತ್ರಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು.
ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳುವ ಮನ್ಸೂಚನೆ ಇದೆ. ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಂದರ್ಭ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಇದೇ ಸಂದರ್ಭದಲ್ಲಿ ಮಳೆಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟು ನಿಟ್ಟಿನ ಕ್ರಮವಹಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.











Click it and Unblock the Notifications