Bengaluru Rains: ಬೆಂಗಳೂರಿನಲ್ಲಿ ಮುಂದಿನ 2-3 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Heavy Rains: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 12ರಿಂದ 16ರ ವರೆಗೂ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದ. ಬಳಿಕ ಮಳೆ ತಗ್ಗಿದ್ದು, ಇದೀಗ ಇಂದಿನಿಂದ (ಅಕ್ಟೋನರ್ 18) ಮತ್ತೆ ಅಬ್ಬರಿಸಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ ಹಲವು ಭಾಗಗಳಲ್ಲಿ ಮುಂದಿನ 2-3 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗೆಯಿಂದ ಸಂಜೆವರೆಗೂ ಬಿಸಿಲಿನ ವಾತಾವರಣ ಇದ್ದು, ಬಳಿಕ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ರಾತ್ರಿ ವೇಳೆಗೆ ಭಾರೀ ಮಳೆಯಾಲಿದೆ ಎಂದು ಹವಾಮಾನ ಇಲಾಕೆ ಮುಮುನ್ಸೂವನೆ ನೀಡಿದೆ. ಈಗಾಗಲೇ ಕಳೆದ ಒಂದು ಎರಡು ದಿನಗಳ ಹಿಂದೆ ಭಾರೀ ಮಳೆ ಸುರಿದ ಪರಿಣಾಮ ನಗರದ ಹಲವೆಡೆ ಅವಾಂತರಗಳೇ ಸೃಷ್ಟಿಯಾಗಿದ್ದವು.

ಮೊನ್ನವರೆಗೂ ಅಂದರೆ, ಅಕ್ಟೋಬರ್ 16ರ ವರೆಗೂ ಸತತ ಮೂರ್ನಾಲ್ಕು ದಿನಗಳ ಕಾಲ ನಗರದಲ್ಲಿ ಭಾರೀ ಮಳೆಯಾಗಿದೆ. ಇನ್ನು ನಿನ್ನೆಯಿಂದ ಮಳೆ ಬಿಡುವು ನೀಡಿದ್ದು, ಈ ಹಿನ್ನೆಲೆ ನಗರದಲ್ಲಿ ಬಿಸಿಲು ಕಾಣಿಸಿಕೊಂಡಿದೆ. ಆದರೆ, ಇಂದು (ಅಕ್ಟೋಬರ್ 18) ಯಾವಾಗ ಬೇಕಾದರೂ ಭಾರೀ ಆರ್ಭಟಿಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಇದೆ. ಮುಂದಿನ 2-3 ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹಾಗೆಯೇ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಯಾವತ್ತು ಎಷ್ಟು ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಅಕ್ಟೋಬರ್ 18ರಂದು ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಹಲವು ಭಾಗಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಅಕ್ಟೋಬರ್ 19ರಂದು ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ ಜಿಲ್ಲೆಯತ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ಸಂದೇಶವನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 20ರಂದು ಬೀದರ್, ವಿಜಯಪುರ, ಕೊಪ್ಪ, ಗದಗ, ವಿಜಯಪುರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ಮಂಡ್ಯ ಜಿಲ್ಲೆಯ ಪ್ರತ್ಯೇಕ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎನ್ನುವ ಮುನ್ಸೂನೆ ಇದೆ.
ರಾಜ್ಯಕ್ಕೆ ಈ ಬಾರಿ ಜೂನ್ ಆರಂಭದಲ್ಲೇ ಮುಂಗಾರು ಪ್ರವೇಶಿಸಿದ್ದು, ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದ್ದವು. ಮತ್ತೊಂದೆಡೆ ನೋಡುವುದಾದರೆ, ಬತ್ತುವ ಹಂತ ತಲುಪಿದ್ದ ಕೆರೆ-ಕಟ್ಟೆಗಳು, ನದಿನಗಳು, ಪ್ರಮುಖ ಜಲಾಶಯಗಳು ತುಂಬಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.












Click it and Unblock the Notifications