ಬೆಂಗಳೂರಲ್ಲಿ ಮತ್ತೆ ಧಾರಾಕಾರ ಮಳೆ, ಹಲವು ಬಡಾವಣೆಗಳು ಜಲಾವೃತ
Recommended Video

ಬೆಂಗಳೂರು, ಸೆಪ್ಟೆಂಬರ್ 25: ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ಮತ್ತೆ ಧಾರಾಕಾರ ಮಳೆ ಆರಂಭವಾಗಿದ್ದು, ಮಂಗಳವಾರ ಬೆಳಗ್ಗಿನವರೆಗೂ ಮುಂದುವರಿದಿದೆ.
ವರುಣನ ಆರ್ಭಟಕ್ಕೆ ಬೆಂಗಳೂರಿನ ರಾಜಾಜೀನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಆರ್ ಟಿನಗರ, ನಾಯಂಡಹಳ್ಳಿ, ಜೆಪಿ ನಗರ ಸೇರಿದಂತೆ ಹಲವೆಡೆ ರಾತ್ರಿಯೆಲ್ಲ ಸುರಿದ ಭಾರೀ ಮಳೆಯಿಂದಾಗಿ ರಸ್ತೆಯಲ್ಲೇ ನೀರು ನಿಂತಿದೆ. ವಾಹನ ಸವಾರರು ಪರದಾಡುವಂತಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಕರ್ನಾಟಕ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾನುವಾರ ರಾತ್ರಿಯಿಂದ ಮಳೆ ಆರಂಭವಾಗಿದೆ.

ಬೆಂಗಳೂರಿನಲ್ಲಿ ಸುಮಾರು 12ಸೆಂ.ಮೀ.ಯಿಂದ 20 ಸೆಂ.ಮೀ.ವರೆಗೆ ಮಳೆ ಸುರಿದಿದೆ.
ಹವಾಮಾನ ಇಲಾಖೆಯ ಸೂಚನೆಯಂತೆ ರಾಜಧಾನಿಯಲ್ಲಿ ಇನ್ನೆರಡು ದಿನ ಮಳೆ ಮುಂದುವರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ ತಿಂಗಳಾಂತ್ಯದವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಳ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, 'ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಎರಡು ದಿನ ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಹಾನಿ ಆಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ನಗರದ ತಗ್ಗು ಪ್ರದೇಶದಲ್ಲಿ ನೆಲೆಸಿರುವವರು ಅಪಾಯದ ಬಗ್ಗೆ ಮುನ್ನೆಚ್ಚರಿಕೆಯಿಂದ ಇರಬೇಕು.' ಎಂದಿದ್ದಾರೆ.
ಇನ್ನೆರಡು ದಿನಗಳ ಕಾಲ ಮಳೆಯ ಆರ್ಭಟ ಹೀಗೇ ಮುಂದುವರಿಯುವ ಸಾಧ್ಯತೆ ಇದೆ.












Click it and Unblock the Notifications