Rameshwaram Cafe Blast: ರಾಮೇಶ್ವರಂ ಕೆಫೆ ಸ್ಫೋಟದ ಸಿಸಿಟಿವಿ ದೃಶ್ಯಾವಳಿ ಬಹಿರಂಗ; ಸಿಎಂ ಸಿದ್ದರಾಮಯ್ಯ ಟ್ವೀಟ್
ಬೆಂಗಳೂರು ನಗರದ ವೈಟ್ ಫೀಲ್ಡ್ ಬಳಿ ಬ್ರೂಕ್ ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಬಹಿರಂಗವಾಗಿದೆ. ಬಹಿರಂಗವಾಗಿರುವ ದೃಶ್ಯಾವಳಿಗಳಲ್ಲಿ ಸ್ಫೋಟದ ತೀವ್ರತೆಯನ್ನು ನೋಡಬಹುದಾಗಿದೆ.
ನಿಗೂಢ ಸ್ಫೋಟಕ್ಕೆ ಸಂಬಂಧಿಸಿದಂತೆ ರಾಮೇಶ್ವರಂ ಕೆಫೆ ವ್ಯವಸ್ಥಾಪಕ ನಿರ್ದೇಶಕಿ ದಿವ್ಯಾ ರಾಘವೇಂದ್ರ ರಾವ್ ಸ್ಫೋಟಕ ಮಾಹಿತಿ ನೀಡಿದ್ದು, 10 ಸೆಕೆಂಡ್ ಅಂತರದಲ್ಲಿ ಎರಡು ಬಾರಿ ಸ್ಫೋಟ ಸಂಭವಿಸಿದೆ ಎಂದು ಹೇಳಿದ್ದಾರೆ.

ಕೆಫೆಯಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರಿಗೆ ನೀಡಲಾಗಿದೆ ಎಂದು ದಿವ್ಯಾ ರಾಘವೇಂದ್ರ ರಾವ್ ಹೇಳಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಕಂಡುಬರುವ ಪ್ರಕಾರ, ಮಧ್ಯಾಹ್ನ 12.55 ಗಂಟೆ ವೇಳೆಯಲ್ಲಿ ಸ್ಫೋಟವಾಗಿದೆ. ಎರಡು ಸ್ಫೋಟ ಸಂಭವಿಸಿರುವುದನ್ನು ನೋಡಬಹುದಾಗಿದೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು ಇದು ಸುಧಾರಿತ ಸ್ಫೋಟ ಎಂದು ಖಚಿತಪಡಿಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
CCTV footage during the blast
— Karnataka Weather (@Bnglrweatherman) March 1, 2024
Divya Raghavendra Rao, founder & MD of Rameshwaram Cafe says we have given access to all our CCTV cameras to the police#Karnataka #Bengaluru #RameshwaramCafe #BengaluruBlast #RameshwaramCafeBlast https://t.co/vhnjEJwF5r pic.twitter.com/pEUpaEua7y
ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ ಎಂದು ಹೇಳಿದ್ದು, ಇದು ಬಾಂಬ್ ಸ್ಫೋಟ ಎಂದು ದೃಢಪಡಿಸಿದ್ದಾರೆ.
ಎಂಟು ಜನರಿಗೆ ಗಾಯ
ಕ್ಯಾಶಿಯರ್ ಬಳಿ ಟೋಕನ್ ಪಡೆದು ಅಲ್ಲಿ ತಿಂಡಿ ತಿಂದಿರುವ ವ್ಯಕ್ತಿ, ಬ್ಯಾಗ್ ಇಟ್ಟು ಬಂದಿದ್ದಾನೆ ಎಂಬ ಮಾಹಿತಿ ದೊರೆತಿದೆ. ಘಟನೆಯಲ್ಲಿ ಸುಮಾರು ಎಂಟು ಜನರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಸಿ ಟಿವಿ ಕ್ಯಾಮರಾ ಪರೀಕ್ಷಿಸಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಗೃಹ ಸಚಿವರಿಗೆ ಸ್ಥಳಕ್ಕೆ ಭೇಟಿ ನೀಡುವಂತೆ ತಿಳಿಸಲಾಗಿದೆ. ಇನ್ನು ಸ್ವಲ್ಪ ಹೊತ್ತಿನಲ್ಲಿಯೇ ಸ್ಪಷ್ಟ ಮಾಹಿತಿ ದೊರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಪೋಟದ ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು.
— CM of Karnataka (@CMofKarnataka) March 1, 2024
ಪ್ರಾಥಮಿಕ ತನಿಖೆಯಲ್ಲಿ ಸಣ್ಣ ಪ್ರಮಾಣದ ಸುಧಾರಿತ ಸ್ಪೋಟಕವಾಗಿದೆ ಎಂದು ತಿಳಿದುಬಂದಿದೆ, ಪೂರ್ಣ ವರದಿ ಬಂದ ನಂತರ ಇನ್ನಷ್ಟು ಮಾಹಿತಿ ಸಿಗಲಿದೆ.
ಕ್ಯಾಶಿಯರ್ ಬಳಿ ಟೋಕನ್ ಪಡೆದು…
ರಾಜ್ಯದಲ್ಲಿ ಇಂಥ ಘಟನೆ ನಡೆಯಬಾರದಿತ್ತು. ಮಂಗಳೂರಿನಲ್ಲಿ ಆಗಿದ್ದು ಬಿಟ್ಟರೆ ಮತ್ತೆ ಆ ರೀತಿಯ ಘಟನೆ ಸಂಭವಿಸಿದೆ. ಯಾರು ಇದನ್ನು ಮಾಡಿದ್ದಾರೆ ಎಂದು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು.
ವಿರೋಧ ಪಕ್ಷಗಳು ಇಂತಹ ವಿಷಯದಲ್ಲಿ ರಾಜಕಾರಣ ಮಾಡಬಾರದು. ಎಲ್ಲರೂ ಈಗ ಸರ್ಕಾರದ ಜೊತೆ ಸಹಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳಿಗೆ ಮನವಿ ಮಾಡಿದ್ದಾರೆ.












Click it and Unblock the Notifications