Acid Attack: ಬೆಂಗಳೂರಿನಲ್ಲೇ ಮಹಿಳೆಯರ ಮೇಲೆ ಹೆಚ್ಚಿನ ಆಸಿಡ್ ದಾಳಿ ಪ್ರಕರಣ
2022ರಲ್ಲಿ ಬೆಂಗಳೂರಿನಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಆ್ಯಸಿಡ್ ದಾಳಿಗಳು ನಡೆದಿದ್ದು, ನಗರ ಪೊಲೀಸರು ಎಂಟು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಿಡುಗಡೆ ಮಾಡಿರುವ ಇತ್ತೀಚಿನ ವರದಿ ತಿಳಿಸಿದೆ.
ಅಂಕಿಅಂಶಗಳ ಪ್ರಕಾರ, ಎನ್‌ಸಿಆರ್‌ಬಿ ಡೇಟಾದಲ್ಲಿ ಪಟ್ಟಿ ಮಾಡಲಾದ 19 ಮೆಟ್ರೋಪಾಲಿಟನ್ ನಗರಗಳ ಪೈಕಿ, ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಕಳೆದ ವರ್ಷ ಎಂಟು ಮಹಿಳೆಯರು ಆಸಿಡ್ ದಾಳಿಗೆ ಒಳಗಾಗಿದ್ದಾರೆ.

ಎರಡನೇ ಸ್ಥಾನದಲ್ಲಿ ದೆಹಲಿ ಇದ್ದು 2022 ರಲ್ಲಿ ಏಳು ಮಹಿಳೆಯರು ಆಸಿಡ್ ದಾಳಿಗೆ ಬಲಿಯಾಗಿದ್ದಾರೆ. ನಂತರ ಅಹಮದಾಬಾದ್ ಮೂರನೇ ಸ್ಥಾನದಲ್ಲಿದ್ದು ಐದು ಆಸಿಡ್ ದಾಳಿ ಪ್ರಕರಣಗಳು ದಾಖಲಾಗಿವೆ ಎಂದು ಅಂಕಿಅಂಶಗಳು ತೋರಿಸಿವೆ.
ವಿವಿಧ ನಗರಗಳಲ್ಲಿ ಆಸಿಡ್ ದಾಳಿ ಪ್ರಕರಣ
ಎನ್‌ಸಿಆರ್‌ಬಿ ಅಂಕಿ ಅಂಶಗಳ ಮಾಹಿತಿ ಪ್ರಕಾರ ರಾಷ್ಟ್ರೀಯ ರಾಜಧಾನಿ (ದೆಹಲಿ) 7 ದಾಳಿಯ ಯತ್ನ ಪ್ರಕರಣಗಳು ವರದಿಯಾಗಿದೆ. ಬೆಂಗಳೂರಿನಲ್ಲಿ ಕಳೆದ ವರ್ಷ ಅಂತಹ 3 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದೆ.
ಹೈದರಾಬಾದ್ ಮತ್ತು ಅಹಮದಾಬಾದ್‌ನಂತಹ ಮೆಟ್ರೋಪಾಲಿಟನ್ ನಗರಗಳು 2022 ರಲ್ಲಿ ದಾಳಿಯ ಪ್ರಯತ್ನದ ಎರಡು ಪ್ರಕರಣಗಳನ್ನು ದಾಖಲಿಸಿವೆ.
ಬೆಂಗಳೂರನ್ನು ಬೆಚ್ಚಿ ಬೀಳಿಸಿದ್ದ ಪ್ರಕರಣ
24 ವರ್ಷದ ಎಂ.ಕಾಂ ಪದವೀಧರ ಮಹಿಳೆ ಮೇಲೆ ಆಸಿಡ್ ದಾಳಿ ಪ್ರಕರಣ ಬೆಂಗಳೂರನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 28 ರಂದು ಕೆಲಸಕ್ಕೆ ಹೋಗುತ್ತಿದ್ದಾಗ ಆಸಿಡ್ ದಾಳಿ ಮಾಡಲಾಗಿತ್ತು. ಪೊಲೀಸರ ಪ್ರಕಾರ ಆರೋಪಿಯು ಹಲವು ವರ್ಷಗಳಿಂದ ಮಹಿಳೆಯನ್ನು ಹಿಂಬಾಲಿಸುತ್ತಿದ್ದು, ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ದಾಳಿ ಮಾಡಲಾಗಿದೆ ಎಂದು ಹೇಳಿದ್ದರು.
ಮದುವೆಯಾಗುವಂತೆ ಮಹಿಳೆಗೆ ಒತ್ತಾಯಿಸಿದ್ದು ಆಕೆ ತನ್ನ ಪ್ರಸ್ತಾವನೆಯನ್ನು ತಿರಸ್ಕರಿಸಿದಾಗ ಆಕೆಯ ಮೇಲೆ ಆ್ಯಸಿಡ್ ಎರಚಿದ್ದಾನೆ. ನಂತರ ಆರೋಪಿಯನ್ನು ಮೇ ತಿಂಗಳಲ್ಲಿ ತಿರುವಣ್ಣಾಮಲೈ ಆಶ್ರಮದಿಂದ ಬಂಧಿಸಲಾಯಿತು, ಅಲ್ಲಿ ಆತ ಸ್ವಾಮಿ ವೇಷದಲ್ಲಿ ತಲೆಮರೆಸಿಕೊಂಡಿದ್ದ.
ಆಸಿಡ್ ದಾಳಿಗೆ ಒಳಗಾದ ಮಹಿಳೆಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಯಲ್ಲಿ ಅವರ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ನೀಡಲಾಯಿತು.
ಇದೇ ರೀತಿಯ ಮತ್ತೊಂದು ಪ್ರಕರಣವು ಜೂನ್ 10, 2022 ರಂದು ವರದಿಯಾಗಿದೆ, ಇದರಲ್ಲಿ ಆರೋಪಿ ತನ್ನ ಮಹಿಳಾ ಸ್ನೇಹಿತೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ಆಕೆಯ ಮುಖದ ಮೇಲೆ ಆಸಿಡ್ ಎರಚಿದ್ದ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications