Bengaluru Weather: ದಶಕದಲ್ಲೇ ಅತ್ಯಂತ ಹೆಚ್ಚು ಬಿಸಿಲಿನ ದಿನ: ಹೈರಾಣಾದ ಜನ

ಬೆಂಗಳೂರಿನಲ್ಲಿ ದಿನೇ ದಿನೇ ಬಿಸಿಲು ಹೆಚ್ಚಾಗುತ್ತಿದ್ದು ಜನರನ್ನು ಹೈರಾಣಾಗಿಸುತ್ತಿದೆ. ಭಾನುವಾರ ಬೆಂಗಳೂರು ತಾಪಮಾನ ಮತ್ತೊಂದು ದಾಖಲೆ ಬರೆದಿದೆ. ದಶಕದಲ್ಲೇ ಅತಿ ಹೆಚ್ಚು ಬಿಸಿಲಿನ ದಿನ ಎನ್ನುವ ದಾಖಲೆ ಬರೆದಿದೆ.

ಕಳೆದ 8 ವರ್ಷಗಳಲ್ಲಿ ಅತಿ ಹೆಚ್ಚು ಮತ್ತು ನಾಲ್ಕನೇ ಅತಿ ಹೆಚ್ಚು ತಾಪಮಾನ ದಾಖಲಾದ ಏಪ್ರಿಲ್ ದಿನವಾಗಿದೆ. 2016 ರಲ್ಲಿ ದಾಖಲಾದ ಸಾರ್ವಕಾಲಿಕ ಗರಿಷ್ಠ 39.2 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ ಆದರೆ ಶೀಘ್ರದಲ್ಲೇ ದಾಖಲೆ ಮಟ್ಟವನ್ನು ತಲುಪುವ ನಿರೀಕ್ಷೆಯಿದೆ.

Bengaluru Records Hottest Day in Almost a Decade as Karnataka Continues Heatwave Alert

ಕರ್ನಾಟಕದಲ್ಲಿ ಬಿಸಿಗಾಳಿ ಪರಿಸ್ಥಿತಿಗಳ ನಡುವೆ ತಾಪಮಾನದಲ್ಲಿ ಏರಿಕೆ ಬಂದಿದೆ, ಇದು ಇನ್ನೂ ಕೆಲವು ದಿನಗಳ ಕಾಲ ಉಳಿಯುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಶಾಖದ ಅಲೆ ಎಚ್ಚರಿಕೆ

ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಮತ್ತು ಮಂಡ್ಯ ಸೇರಿದಂತೆ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಶಾಖದ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಹವಾಮಾನವು ಭಾಗಶಃ ಮೋಡವಾಗಿರುತ್ತದೆ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇದ್ದರೆ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಅತಿ ಹೆಚ್ಚು ಗರಿಷ್ಠ ತಾಪಮಾನ ಇರುವ ಕಲಬುರ್ಗಿ ಜಿಲ್ಲೆಯಲ್ಲಿ ಭಾನುವಾರ ತಾಪಮಾನ 42.4 ಡಿಗ್ರಿ ಸೆಲ್ಸಿಯಸ್‌ನಿಂದ 40.5 ಡಿಗ್ರಿ ಸೆಲ್ಸಿಯಸ್‌ಗೆ ಕಡಿಮೆಯಾಗಿದೆ.

ಏಪ್ರಿಲ್ 30 ರವರೆಗೆ ಬೆಂಗಳೂರಿನಲ್ಲಿ ಶುಷ್ಕ ವಾತಾವರಣ ಇರಲಿದೆ. ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ಕೊಡಗು, ಮೈಸೂರು, ಬೆಳಗಾವಿ, ಬಾಗಲಕೋಟೆ ಮತ್ತು ರಾಯಚೂರು ಸೇರಿದಂತೆ ಕರ್ನಾಟಕದ ಇತರ ಭಾಗಗಳಲ್ಲಿ ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+