ಸೈಬರ್‌ ಕ್ರೈಂ ಕೇಸುಗಳಲ್ಲಿ ಬೆಂಗಳೂರಿಗೆ 2ನೇ ಸ್ಥಾನ

ಬೆಂಗಳೂರು, ನವೆಂಬರ್ 07 : ಬೆಂಗಳೂರು ನಗರದಲ್ಲಿ ವರ್ಷದಿಂದ ವರ್ಷಕ್ಕೆ ಸೈಬರ್ ಕ್ರೈಂ ಅಪರಾಧಗಳು ಹೆಚ್ಚುತ್ತಿವೆ. 2018ರ ನವೆಂಬರ್ 3ರ ತನಕ 3953 ಪ್ರಕರಣಗಳು ದಾಖಲಾಗಿವೆ.

ರಾಷ್ಟ್ರೀಯ ಅಪರಾಧ ದಾಖಲಾತಿ ಘಟಕ (ಎನ್‌ಸಿಆರ್‌ಬಿ) ಈ ಕುರಿತು ಮಾಹಿತಿ ನೀಡಿದೆ. 2017ಕ್ಕೆ ಹೋಲಿಕೆ ಮಾಡಿದರೆ ನಗರದಲ್ಲಿ ಈ ವರ್ಷ ಸೈಬರ್ ಅಪರಾಧಗಳು ಶೇ 300ರಷ್ಟು ಹೆಚ್ಚಳವಾಗಿದೆ.

ದೇಶದಲ್ಲಿಯೇ ಅತಿ ಹೆಚ್ಚು ಸೈಬರ್ ಅಪರಾಧಗಳು ದಾಖಲಾಗುತ್ತಿರುವ ನಗರಗಳಲ್ಲಿ ಬೆಂಗಳೂರು 2ನೇ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ ದಾಖಲಾಗುತ್ತಿರುವ ಸೈಬರ್ ಅಪರಾಧಗಳಲ್ಲಿ ಬ್ಯಾಂಕಿಂಗ್ ವಂಚನೆ ಪ್ರಕರಣಗಳೇ ಹೆಚ್ಚಾಗಿವೆ.

Bengaluru records second highest number of cyber crime

ಸೈಬರ್ ಅಪರಾಧಗಳ ಬಗ್ಗೆ ದೂರು ಸ್ವೀಕಾರ ಮಾಡಲು, ತನಿಖೆ ನಡೆಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪ್ರತ್ಯೇಕ ಸೈಬರ್ ಕ್ರೈಂ ಪೊಲೀಸ್ ಠಾಣೆಯನ್ನು ತೆರೆಯಲಾಗಿದೆ.

ಆದರೆ, ಸೈಬರ್ ಕ್ರೈಂ ಪೊಲೀಸ್ ಠಾಣೆಗಳಲ್ಲಿ ಸಿಬ್ಬಂದಿ ಕೊರತೆ ಇದೆ. ಇದರಿಂದಾಗಿ ದೂರುಗಳ ಬಗ್ಗೆ ತ್ವರಿತವಾಗಿ ತನಿಖೆ ನಡೆಯುತ್ತಿಲ್ಲ ಎಂಬ ಆರೋಪವೂ ಇದೆ.

ಈಗಾಗಲೇ 1 ಸೈಬರ್ ಕ್ರೈಂ ಪೊಲೀಸ್ ಠಾಣೆ ಇದೆ. ಬೆಂಗಳೂರು ನಗರದಲ್ಲಿ ಇನ್ನೂ 8 ಠಾಣೆಗಳನ್ನು ತೆರಯಬೇಕು ಎಂದು ಪೊಲೀಸರು ಗೃಹ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+