Bengaluru Republic Day 2026: ಈ ರಸ್ತೆಗಳಲ್ಲಿ ವಾಹನ ಸಂಚಾರ-ಪಾರ್ಕಿಂಗ್ ನಿಷೇಧ, ಪಾರ್ಯಾಯ ಮಾರ್ಗ ಯಾವುವು?
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ 2026ನೇ ಜನವರಿ 26 ರಂದು (ಸೋಮವಾರ) ರಾಜ್ಯಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದೆ. ಮುಖ್ಯಮಂತ್ರಿಗಳು ಸೇರಿ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಸಂಬಂಧ ಮೈದಾನ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜೊತೆಗೆ ಕೆಲವು ರಸ್ತೆಗಳ ಸಂಚಾರ ನಿಷೇಧಿಸಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ. ಕೆಲವೆಡೆ ಪಾರ್ಕಿಂಗ್ ಸಹ ನಿಷೇಧಿಸಲಾಗಿದೆ. ವಾಹನ ಸವಾರರು ಈ ಸಂಚಾರ ಸಲಹೆ ಗಮನಿಸಿ ಓಡಾಡುವಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಕೋರಿದ್ದಾರೆ.
ಶನಿವಾರ ಗಣರಾಜ್ಯೋತ್ಸವ ಪ್ರಯುಕ್ತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಪೂರ್ವಭಾವಿ ಸಭೆ ನಡೆಸಿದರು. 26/01/2026 ರಂದು ಬೆಳಗ್ಗೆ 09 ಗಂಟೆಗೆ ವಿಶೇಷ ಕವಾಯತು ನಡೆಯಲಿದೆ. ರಾಜ್ಯಪಾಲರು ಧ್ವಜಾರೋಹಣ ಮಾಡಿ, ಗೌರವ ವಂದನೆ ಸ್ವೀಕರಿಸಲಿದ್ದಾರೆ. ಈ ಪ್ರಯುಕ್ತ ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಸಂಚಾರ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಅದರ ವಿವರ ಮುಂದಿದೆ.

ಬಿಟಿಪಿ ಸಂಚಾರ ಸಲಹೆ ಹೀಗಿದೆ
1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್‌ಗಳಲ್ಲಿ ಇಳಿದು, ಪಾಸ್‌ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನ ಪಾರ್ಕಿಂಗ್ ಮಾಡಬೇಕು.
2. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದಕಡೆಗೆ) ವಾಹನಗಳ ನಿಲುಗಡೆಗೆ ಅವಕಾಶ.
3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬೇಕು.
4. ಅಂದು ಬೆಳಗ್ಗೆ 08.30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗ ಒದಗಿಸಲಾಗಿದೆ.
ಸಂಚಾರ ನಿಷೇಧಿತ ರಸ್ತೆಗಳು
ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್‌ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿರಸ್ತೆ - ಸಫೀನಾ ಪ್ಲಾಜಾ ಎಡತಿರುವು ಪಡೆದು ಮೈನ್‌ಗಾರ್ಡ್ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ-ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಕಡೆಗೆ ಸಾಗಬೇಕು.
ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಲಾಗಿದೆ. ವಾಹನ ಸವಾರರು ವೆಬ್ಸ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.
ಇನ್ನೂ ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್‌ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿರಸ್ತೆ- ಸಫೀನಾ ಪ್ಲಾಜಾ-ಎಡಕ್ಕೆ ತಿರುವು ಪಡೆದು ಮೈನ್‌ಗಾರ್ಡ್ ರಸ್ತೆ-ಆಲಿ ಸರ್ಕಲ್- ಡಿಸ್ಪೆನ್ಸರಿ ರಸ್ತೆ ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್-ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್‌ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಕಡೆಗೆ ಸಾಗಬಹುದು.
ಈ ವಸ್ತುಗಳು ಮೈದಾನದೊಳಕ್ಕೆ ನಿಷೇಧ
ಬೆಳಗ್ಗೆ 08-00 ಗಂಟೆ ಒಳಗೆ ಮೈದಾನದೊಳಗೆ ಬಂದಿರಬೇಕು. ಭದ್ರತಾ ದೃಷ್ಟಿಯಿಂದ ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆ ಸೂಚಿಸಲಾಗಿದೆ. ವಸ್ತುಗಳು ನಿಮ್ಮೊಂದಿಗೆ ಕಂಡು ಬಂದಿಲ್ಲಿ ಅಂಥವರಿಗೆ ಪ್ರವೇಶ ನಿಷೇಧಿಸಲಾಗಿದೆ.
ಎಲ್ಲೆಲ್ಲಿ ಪಾರ್ಕಿಂಗ್ ನಿಲುಗಡೆ
1. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ.
2. ಕಬ್ಬನ್ ರಸ್ತೆ, ಸಿ.ಟಿ.ಓ. ವತ್ತ ದಿಂದಕೆ.ಆರ್.ರಸ್ತೆ ಮತ್ತ ಕಬ್ಬನ್‌ರಸ್ತೆ ಜಂಕ್ಷನ್‌ವರೆಗೆ.
3. ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಲ್ವೇನ್ಸ್ ವೃತ್ತದವರೆಗೆ.
ಸವಾರರಿಗೆ ಬಿಟಿಪಿ ವಿಶೇಷ ಸೂಚನೆಗಳು
1. ಮಾಣಿಕ್‌ಷಾ ಪೆರೇಡ್ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆ ಕಡಿಮೆ ಮಾಡಲು ಜನರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಹೆಚ್ಚು ಬಳಸಬೇಕಿದೆ.
2. ಯಾವುದೇ ಸಹಾಯಕ್ಕಾಗಿ ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಬಹುದು.
3. ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ಜಿ.ಬಿ.ಎ ವತಿಯಿಂದ ಏರ್ಪಡಿಸಲಾಗಿದೆ ಎಂದು ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications