ಬೆಂಗಳೂರು ರಸ್ತೆ ಅಪಘಾತ: ಮೊದಲ ಮೂರು ಸ್ಥಾನದಲ್ಲಿರುವ ರಸ್ತೆಗಳು?

Recommended Video

      ಅತಿ ಹೆಚ್ಚು ಅಪಘಾತವಾಗುವ ಬೆಂಗಳೂರಿನ 3 ರಸ್ತೆಗಳು ! | Oneindia Kannada

      ಬೆಂಗಳೂರು, ಮಾರ್ಚ್ 2: ನಗರದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುವ 10 ರಸ್ತೆಗಳ ಪಟ್ಟಿಯಲ್ಲಿ ಹಳೆ ಮದ್ರಾಸ್ ರಸ್ತೆ, ತುಮಕೂರು ಹಾಗೂ ಬಳ್ಳಾರಿ ರಸ್ತೆ ಮೊದಲ ಮೂರು ಸ್ಥಾನದಲ್ಲಿದೆ ಎಂದು ಬೆಂಗಳೂರು ನಗರ ಸಂಚಾರ ಪೊಲೀಸರು ಗುರುತಿಸಿದ್ದಾರೆ.

      ಬೆಂಗಳೂರು ನಗರ ಸಂಚಾರಿ ಪೊಲೀಸರು ಕೈಗೊಂಡ ಸಮೀಕ್ಷೆಯಲ್ಲಿ ವರ್ಷದಲ್ಲಿ ಸಂಭವಿಸುವ ರಸ್ತೆ ಅಪಘಾತಗಳ ಅಂಕಿ ಅಂಶಗಳ ಪ್ರಕಾರ ಹಳೆ ಮದ್ರಾಸ್, ತುಮಕೂರು, ಬಳ್ಳಾರಿ ರಸ್ತೆ ಈ ಮೂರು ರಸ್ತೆಗಳನ್ನು ಗುರುತಿಸಲಾಗಿದ್ದು, ಅಪಘಾತಗಳು ಸಂಭವಿಸದಂತೆ ಕ್ರಮ ಕೈಗೊಳ್ಳುವ ಕುರಿತು ಆಲೋಚಿಸಲಾಗಿದೆ. ಅತಿ ಹೆಚ್ಚು ಅಪಘಾತ ಸಂಭವಿಸುವ 10 ರಸ್ತೆಗಳನ್ನು ಗುರುತಿಸಲಾಗಿದ್ದು ಅದರಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಈ ರಸ್ತೆಗಳು ಬಂದಿವೆ.

      ಈ ರಸ್ತೆಗಳು ರಾಷ್ಟ್ರೀಯ ಹೆದ್ದಾರಿ ಭಾಗವಾಗಿದೆ. ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದೇವೆ, ಬಿಬಿಎಂಪಿಗೆ ಕೂಡ ಹೆದ್ದಾರಿ ಪ್ರಾಧಿಕಾರದೊಂದಿಗೆ ಕುಳಿತು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಕುರಿತಾಗಿ ಪತ್ರ ಬರೆಯಲಾಗಿದೆ. ಈಗ ಈ ಎರಡು ಇಲಾಖೆಯು ಯಾವ ರೀತಿ ಕ್ರಮಗಳನ್ನು ಕೈಗೊಳ್ಳುತ್ತವೆ ಎಂದು ಕಾದುನೋಡಬೇಕಿದೆ.

      Bengaluru riddled with accidents

      ಈ ಹೆದ್ದಾರಿಗಳಲ್ಲಿ ಸಿಗ್ನಲ್ ಗಳ ಅಳವಡಿಕೆಯ ಅಗತ್ಯವಿದೆ, ನಾವು ಅತಿ ವೇಗವಾಗಿ ಬರುವ ವಾಹನಗಳನ್ನು ತಡೆದರೆ ಅಲ್ಲಿ ಸಂಚಾರ ದಟ್ಟಣೆ ಏರ್ಪಡುತ್ತದೆ. ಎನ್ಎಚ್ಎಐಯು ಹೆದ್ದಾರಿಯಲ್ಲಿ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ಪಾದಚಾರಿಗಳು ರಸ್ತೆ ದಾಟಲು ಸ್ಕೈವಾಕ್ ಅಳವಡಿಸಬೇಕು ಇಲ್ಲವಾದಲ್ಲಿ ಅಪಘಾತ ಸಂಖ್ಯೆ ಕಡಿಮೆಯಾಗುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

      ವಾಹನ ಸವಾರರು ಕ್ರಾಸ್ ರಸ್ತೆಯಿಂದ ಮುಖ್ಯ ರಸ್ತೆಗೆ ಬರುವಾಗ ಹೆಚ್ಚು ಅಪಘಾತಗಳು ಸಂಭವಿಸುತ್ತಿದೆ. ರಾತ್ರಿ ಹೊತ್ತು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ.ಅದನ್ನು ತಡೆಯಲು ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹತ್ತು ಅಪಘಾತ ಕಪ್ಪು ಪ್ರದೇಶ- ಓಲ್ಡ್ ಮದ್ರಾಸ್ ರಸ್ತೆ, ತುಮಕೂರು ರಸ್ತೆ, ಬಳ್ಳಾರಿ ರಸ್ತೆ, ಐಟಿಪಿಎಲ್ ಮುಖ್ಯ ರಸ್ತೆ, ಓಆರ್ ಆರ್ ಮಹದೇವಪುರ, ಬಳ್ಳಾರಿ ರಸ್ತೆ, ಹೊಸೂರು ರಸ್ತೆ, ಔಟರ್ ರಿಂಗ್ ರೋಡ್, ಬಳ್ಳಾರಿ ರಸ್ತೆ, ಕನಕಪುರ ರಸ್ತೆಯನ್ನು ಗುರುತಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+