ಬೆಂಗಳೂರು: ಬೆಳ್ಳಂಬೆಳಿಗ್ಗೆ ಮೊಬೈಲ್ ಕಳ್ಳನ ಮೇಲೆ ಫೈರಿಂಗ್
Recommended Video

ಬೆಳ್ಳಂಬೆಳಿಗ್ಗೆ ಮೊಬೈಲ್ ಕಳ್ಳನ ಮೇಲೆ ಫೈರಿಂಗ್ | Oneindia Kannada
ಬೆಂಗಳೂರು, ಡಿಸೆಂಬರ್ 04 : ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಬಂದಿದ್ದು, ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ ಮೊಬೈಲ್ ಕಳ್ಳನ ಮೇಲೆ ಫೈರಿಂಗ್ ಮಾಡಲಾಗಿದೆ.
ಬೆಂಗಳೂರಿನ ಆರ್ ಎಂಸಿ ಯಾರ್ಡ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಕಳ್ಳತನ ಮಾಡಿ ಎಸ್ಕೇಪ್ ಆಗಲು ಯತ್ನಿಸಿದ್ದ ಅಶ್ವಥ್ ಎನ್ನುವಾತನ ಬಲಗಾಲಿಗೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಮೊಬೈಲ್ ಕಳ್ಳ ಅಶ್ವಥ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.

ಮೊಬೈಲ್ ಕಳ್ಳ ಅಶ್ವಥ್ ನನ್ನು ಪೊಲೀಸರು ಬಂಧಿಸಿದ್ದ ಸಂದರ್ಭದಲ್ಲಿ ಆತ ಮಾರಕಾಸ್ತ್ರದಿಂದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಗಾಳಿಯಲ್ಲಿ 2 ಸುತ್ತು ಗುಂಡು ಹಾರಿಸಿ ಎಚ್ಚರಿಕೆ ನೀಡಿದರೂ, ಮತ್ತೆ ಹಲ್ಲೆಗೆ ಮುಂದಾಗಿದ್ದ ಅಶ್ವಥ್ ಮೇಲೆ ಫೈರಿಂಗ್ ಮಾಡಿದ್ದಾರೆ.
ಗಾಯಗೊಂಡಿರುವ ಪೊಲೀಸರನ್ನು ಆಸ್ಪತ್ರೆ ಸೇರಿಸಲಾಗಿದ್ದು, ಈ ಬಗ್ಗೆ ಆರ್.ಎಂ.ಸಿ. ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications