ದೇವನಹಳ್ಳಿ ಭೀಕರ ಅಪಘಾತಕ್ಕೆ 6 ವಿದ್ಯಾರ್ಥಿಗಳು ಸೇರಿ 7 ಜನ ಬಲಿ, ಇಲ್ಲಿದೆ ಮಾಹಿತಿ... Bengaluru Road Accident
ಬೆಂಗಳೂರು: ಹೊಸಕೋಟೆ ಹಾಗೂ ದಾಬಸ್ಪೇಟೆಯ ಸ್ಯಾಟಲೈಟ್ ರಿಂಗ್ ರೋಡ್ (ಎಸ್ಟಿಆರ್ಆರ್) ಮಾರ್ಗದಲ್ಲಿ, ಸತ್ಯವಾರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 7 ಜನರು ಮೃತಪಟ್ಟಿದ್ದಾರೆ. ಇನ್ನು ಈ ಭೀಕರ ಅಪಘಾತದಲ್ಲಿ 1 ಟ್ರಕ್, ಎಕ್ಸ್ಯುವಿ ಕಾರು & ಒಂದು ಬೈಕ್ ನಜ್ಜುಗುಜ್ಜಾಗಿ ಹೋಗಿವೆ. ಹೆದ್ದಾರಿಯಲ್ಲಿ ದಿಢೀರ್ ಬೈಕ್ ಮತ್ತು ಕಾರು ನಡುವೆ ಸಂಭವಿಸಿದ ಡಿಕ್ಕಿಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ, ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದಾರೆ.
ಬೆಂಗಳೂರು ಹೊರವಲಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಸಂಭವಿಸಿರುವ ಈ ದುರಂತಕ್ಕೆ ಮೊದಲು ಎಕ್ಸ್ಯುವಿ ಕಾರು ಡಿಕ್ಕಿಯಾಗಿದ್ದೇ ಕಾರಣ ಎನ್ನಲಾಗಿದೆ. ಹೀಗೆ ಹೆದ್ದಾರಿಯಲ್ಲಿ ಎಕ್ಸ್ಯುವಿ ಕಾರು ಮೊದಲು ಬೈಕ್ಗೆ ಡಿಕ್ಕಿ ಹೊಡೆದು ಬಳಿಕ ಟ್ರಕ್ಗೆ ಹೋಗಿ ಗುದ್ದಿದೆ. ಇಲ್ಲಿ ಅತಿವೇಗದ ಚಾಲನೆಯಿಂದ ಈ ಭೀಕರ ಅಪಘಾತವು ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ನಿಖರ ಕಾರಣಕ್ಕಾಗಿ ತನಿಖೆ ಆರಂಭ ಆಗಿದೆ. ಭೀಕರ ಅಪಘಾತದಲ್ಲಿ ಒಟ್ಟು 6 ವಿದ್ಯಾರ್ಥಿಗಳು ಸೇರಿ ಒಟ್ಟು 7 ಜನ ಬಲಿಯಾಗಿದ್ದಾರೆ. ಮೃತದೇಹಗಳನ್ನು ಕೂಡಲೇ ಹೊಸಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

6 ವಿದ್ಯಾರ್ಥಿಗಳು ಮತ್ತು ಉದ್ಯೋಗಿ ಬಲಿ
ಬೆಂಗಳೂರು ಹೊರವಲಯದ ಹೆದ್ದಾರಿ, ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಸಾಕ್ಷಿಯಾಗಿತ್ತು. ಹೊಸಕೋಟೆ ಹಾಗೂ ದಾಬಸ್ಪೇಟೆ ಹೆದ್ದಾರಿಯ ಕಳಪೆ ನಿರ್ಮಾಣ ಮತ್ತು ವಿನ್ಯಾಸದ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮೃತರಲ್ಲಿ ಬೈಕ್ ಸವಾರ ಸ್ಥಳೀಯರಾಗಿದ್ದು ಕಾರಿನಲ್ಲಿ ಇದ್ದ ಉಳಿದವರು ಬೆಂಗಳೂರಿನ ಕೊತ್ತನೂರು ಮೂಲದವರು ಎನ್ನಲಾಗಿದೆ. ಅಪಘಾತಕ್ಕೆ ಅತಿವೇಗ ಪ್ರಮುಖ ಕಾರಣ ಎಂಬುದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ಪಿಯು ವಿದ್ಯಾರ್ಥಿಗಳ ಜಾಲಿ ರೈಡ್ ಅಪಘಾತಕ್ಕೆ ಕಾರಣ ಆಗಿದೆಯಾ? ಎಂಬ ಪ್ರಶ್ನೆ ಹುಟ್ಟುಹಾಕಿದೆ. ಇನ್ನು ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗಳು ಅಶ್ವಿನ್, ಅಹನ್, ಆಯನ್, ಅಲಿ, ಭರತ್, ಈಶನ್ ಎಂದು ಗುರುತಿಸಲಾಗಿದೆ. 6 ವಿದ್ಯಾರ್ಥಿಗಳೂ ಸೇರಿ, ಬೈಕ್ ಸವಾರ ಸಫಲ್ ಕಂಪನಿಯ ಉದ್ಯೋಗಿ ಗಗನ್ ಕೂಡ ಅಪಘಾತಕ್ಕೆ ಬಲಿಯಾಗಿದ್ದಾರೆ.
VIDEO | Karnataka: Seven people killed in a series of collisions between canter truck, bike and a car on Hoskote-Dabaspet National Highway.#KarnatakaNews
— Press Trust of India (@PTI_News) February 13, 2026
(Source: Third Party)
(Full video available on PTI Videos - https://t.co/n147TvrpG7) pic.twitter.com/ZbZWpo6PxC
ಮಕ್ಕಳನ್ನು ಕಳೆದುಕೊಂಡ ಪೋಷಕರ ಕಣ್ಣೀರು
ಅಪಘಾತ ನಡೆದ ಸ್ಥಳಕ್ಕೆ ತಕ್ಷಣವೇ ದೌಡಾಯಿಸಿದ ಬೆಂಗಳೂರು ಗ್ರಾಮಾಂತರ ಎಸ್ಪಿ ಚಂದ್ರಕಾಂತ್ ಹಾಗೂ ಪೊಲೀಸರ ತಂಡ, ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪೋಷಕರಿಗೆ ಬೆಳ್ಳಂಬೆಳಗ್ಗೆ ಈ ಸಾವಿನ ಸುದ್ದಿ ತಲುಪಿದ್ದು, ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಇತ್ತ ಏನೂ ತಪ್ಪು ಮಾಡದೆ ತನ್ನ ಪಾಡಿಗೆ ತಾನು ಕೆಲಸಕ್ಕೆ ಹೊರಟಿದ್ದ ಉದ್ಯೋಗಿ ಕೂಡ ತನ್ನ ಜೀವವನ್ನೇ ಕಳೆದುಕೊಂಡಿದ್ದಾರೆ. ಈ ಭೀಕರ ಅಪಘಾತ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಕೂಡ ಸುದ್ದಿಯಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications