Bengaluru Road Potholes: ಬೆಂಗಳೂರಿನ ರಸ್ತೆಗುಂಡಿ ಮುಚ್ಚಲು ಹೊಸ ಡೆಡ್‌ಲೈನ್ ಕೊಟ್ಟ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್

Bengaluru Road Potholes: ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಹೊಸ ಡೆಡ್‌ಲೈನ್ ಕೊಟ್ಟಿದ್ದಾರೆ. ನಗರದ ಪ್ರಮುಖ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಬಿದ್ದಿರುವ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 8ರ ಮಂಗಳವಾರ ನಡೆದ ವರ್ಚುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಆರ್ಟಿರಿಯಲ್ ಹಾಗೂ ಸಬ್-ಆರ್ಟಿರಿಯಲ್ ರಸ್ತೆಗಳಲ್ಲಿ ಗುರುತಿಸಿರುವ ರಸ್ತೆ ಗುಂಡಿಗಳನ್ನು ಕೂಡಲೇ ಮುಚ್ಚುವ ಕಾರ್ಯ ಕೈಗೊಳ್ಳಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿರುವ ಕುರಿತು ವಿಭಾಗವಾರು ಪಟ್ಟಿ ಸಿದ್ಧಪಡಿಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

Bengaluru Road Potholes GBA Chief Commissioner Maheshwar Rao Sets New Deadline for Pothole Repairs

ರಸ್ತೆ ಗುಂಡಿಗಳಿಂದ ಯಾವುದೇ ಅಪಘಾತಕ್ಕೆ ಕಾರಣವಾಗದ ರೀತಿಯಲ್ಲಿ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣವೇ ಮುಚ್ಚಬೇಕು. ಪಾಲಿಕೆವಾರು ರಸ್ತೆ ಗುಂಡಿ ಮುಚ್ಚುವ ಯಂತ್ರಗಳನ್ನು ಖರೀದಿಸಿ, ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಮಳೆಯಾಗುವ ಸಂದರ್ಭದಲ್ಲಿ ಎಕೋಫಿಕ್ಸ್ ಮೂಲಕ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಕೈಗೊಳ್ಳಬೇಕು. ವಾರ್ಡ್ ರಸ್ತೆಗಳಲ್ಲಿಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಸಬೇಕು. ರಸ್ತೆ ಗುಂಡಿಗಳನ್ನು ಮುಚ್ಚಿರುವುದನ್ನು ಖಾತರಿಪಡಿಸಿಕೊಳ್ಳಲು ಪಾಲಿಕೆಗಳ ಹಿರಿಯ ಅಧಿಕಾರಿಗಳು ರಸ್ತೆಗಳನ್ನು ಖುದ್ದಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ.

Bengaluru Road Potholes: ತ್ಯಾಜ್ಯದಿಂದ ಸ್ವಾತಂತ್ರ್ಯ ಅಭಿಯಾನ

ನಗರದಾದ್ಯಂತ 'ತ್ಯಾಜ್ಯದಿಂದ ಸ್ವಾತಂತ್ರ್ಯ' ಅಭಿಯಾನದಡಿ ಇದುವರೆಗೆ 1.84 ಲಕ್ಷ ಮೆಟ್ರಿಕ್ ಟನ್ ಸಿ&ಡಿ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಇನ್ನೂ ಯಾವೆಲ್ಲೆಡೆ ತ್ಯಾಜ್ಯ ತೆರವುಗೊಳಿಸಬೇಕಿದೆ ಎಂಬುದನ್ನು ಪರಿಶೀಲಿಸಿ, ತೆರವು ಕಾರ್ಯವನ್ನು ಕೈಗೊಳ್ಳಬೇಕು. ತ್ಯಾಜ್ಯ ತೆರವುಗೊಳಿಸಿರುವ ಸ್ಥಳಗಳಲ್ಲಿ ಪಿಪಿಪಿ ಮಾದರಿಯಲ್ಲಿ ಸುಂದರೀಕರಣ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಸ್ವಚ್ಛತಾ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಬಹುತೇಕ ಕಡೆಗಳಲ್ಲಿ ನಾಗರಿಕರೇ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳುತ್ತಿದ್ದಾರೆ. ಸ್ವಚ್ಛತಾ ಕಾರ್ಯ ನಡೆಸದ ನಿವೇಶನಗಳ ಮಾಲೀಕರಿಗೆ ನೋಟಿಸ್ ನೀಡಿ, *7 ದಿನಗಳ ಕಾಲಾವಕಾಶ* ನೀಡಬೇಕು. ನಿಗದಿತ ಅವಧಿಯಲ್ಲಿ ಸ್ವಚ್ಛತೆ ಮಾಡಿಕೊಳ್ಳದಿದ್ದಲ್ಲಿ ಪಾಲಿಕೆಯಿಂದಲೇ ಸ್ವಚ್ಛತಾ ಕಾರ್ಯ ಕೈಗೊಂಡು, ಅದರ ವೆಚ್ಚವನ್ನು ಆಸ್ತಿ ತೆರಿಗೆಯಲ್ಲಿ ಸೇರ್ಪಡೆಗೊಳಿಸಿ ವಸೂಲಿ ಮಾಡುವಂತೆ ಸೂಚಿಸಿದರು.

ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ

ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆಯನ್ನು ಸಕ್ರಿಯವಾಗಿ ನಡೆಸಬೇಕು. ಇನ್ನೂ ಯಾವೆಲ್ಲೆಡೆ ಬಿಡಾಡಿ ವಾಹನಗಳಿವೆ ಎಂಬುದನ್ನು ಪರಿಶೀಲಿಸಿ, ನಿಯಮಾನುಸಾರ ನೋಟಿಸ್ ಅಂಟಿಸಿ, ಅವುಗಳನ್ನು ಡಂಪಿಂಗ್ ಯಾರ್ಡ್‌ಗೆ ಸ್ಥಳಾಂತರಿಸಬೇಕು. ವಾಹನಗಳ ಮಾಲೀಕರು ನಿಗದಿತ ಅವಧಿಯಲ್ಲಿ ಹಾಜರಾಗದಿದ್ದಲ್ಲಿ ನಿಯಮಾನುಸಾರ ಹರಾಜು ಪ್ರಕ್ರಿಯೆ ಕೈಗೊಳ್ಳುವಂತೆ ಸೂಚನೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+