ಬೆಂಗಳೂರು ರೌಂಡ್ಸ್: ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಲ್ಲಿ ಅವ್ಯವಸ್ಥೆ ಕಂಡು ದಂಗಾದ ಡಿ.ಕೆ.ಶಿ
ಬೆಂಗಳೂರು, ಜುಲೈ, 09: ಭಾನುವಾರ (ಜುಲೈ 09) ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಅವ್ಯವಸ್ಥೆಗಳನ್ನು ಕಂಡು ದಂಗಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್ ಅವರು, ಇಂದು ಅಧಿಕಾರಿಗಳಿಗೆ ಮಾಹಿತಿ ನೀಡದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಸಂಸ್ಕರಣ ಘಟಕಗಳಿಗೆ ಭೇಟಿ ನೀಡಿದ್ದೇನೆ. ಅಲ್ಲದೆ ಇಂದಿರಾ ಕ್ಯಾಂಟೀನ್, ಘನತ್ಯಾಜ್ಯ ಘಟಕಗಳಲ್ಲಿ ಕೆಲವು ವ್ಯವಸ್ಥೆಗಳನ್ನು ಪರಿಶೀಲನೆ ಮಾಡಿದ್ದೇನೆ. ಆದರೆ ಅಲ್ಲಿನ ಕಾರ್ಯವೈಖರಿಯೂ ತೃಪ್ತಿದಾಯಕವಾಗಿಲ್ಲ ಬೇಸರ ವ್ಯಕ್ತಪಡಿಸಿದರು.

ಇನ್ನು ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ನಿರೀಕ್ಷೆಗೆ ತಕ್ಕ ಅನುದಾನ ಸಿಗುತ್ತದೆಯೋ ಇಲ್ಲವೋ ಗೊತ್ತಿಲ್ಲ. ನಾನು ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಪನ್ಮೂಲ ಸೋರಿಕೆ ಆಗುತ್ತಿದೆ?, ತೆರಿಗೆ ವಂಚನೆ ಮಾಡಲಾಗುತ್ತಿದೆ, ಯಾವ ತೆರಿಗೆ ಹೆಚ್ಚಿಸಬೇಕು ಎಂಬುದರ ಬಗ್ಗೆ ಪರಿಶೀಲನೆ ಮಾಡುತ್ತೇನೆ ಎಂದು ತಿಳಿಸಿದರು.
ಇದಕ್ಕೂ ಮುನ್ನ ದಾಸರಹಳ್ಳಿ ವಲಯದ ಚೊಕ್ಕಸಂದ್ರ ವಾರ್ಡ್‌ನ ಇಂದಿರಾ ಕ್ಯಾಂಟೀನ್ ಬೆಳಗ್ಗೆ 9ರ ಸುಮಾರಿಗೆ ತೆರಳಿ ಡಿ.ಕೆ.ಶಿ ತಿಂಡಿ ನೀಡುವಂತೆ ಕೇಳಿದರು. ಈ ಆದರೆ ವೇಳೆ 200ಕ್ಕೂ ಹೆಚ್ಚು ಪ್ಲೇಟ್ ತಿಂಡಿ ಖಾಲಿ ಆಗಿತ್ತು. ಅಲ್ಲಿ 5 ರೂಪಾಯಿ ಬದಲು 10 ರೂಪಾಯಿ ಪಡೆಯಲಾಗಿದೆ. ಅಲ್ಲಿದ್ದ ಸಹಾಯವಾಣಿ ಸಂಖ್ಯೆ ದುರಸ್ಥಿಯಲ್ಲಿದ್ದು, ಆದಷ್ಟು ಬೇಗ ಈ ಲೋಪದೋಷವನ್ನು ಸರಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ಈ ಎಲ್ಲಾ ಸಂಸ್ಥೆಗಳ ಕಾರ್ಯವೈಖರಿಯನ್ನು ಸರಿಯಾದ ಹಳಿಗೆ ತರುವ ಕೆಲಸವನ್ನು ಮಾಡುತ್ತೇವೆ. ಹಾಗೆಯೆ ಕಸದಿಂದ ಇಂಧನ ಉತ್ಪಾದನೆ ಮಾಡುವುದಾಗಿ ಹೇಳಿ ಜವಾಬ್ದಾರಿ ವಹಿಸಿಕೊಂಡವರು ಇಂಧನ ಉತ್ಪಾದನೆ ಮಾಡುತ್ತಿಲ್ಲ. ಈ ಘಟಕಗಳ ಕಾರ್ಯವೈಖರಿ ಬಗ್ಗೆ ಜವಾಬ್ದಾರಿಯುತವಾಗಿ ಅಧಿಕಾರಿಗಳು ಪರಿಶೀಲನೆಯನ್ನೂ ಮಾಡುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಬೆಂಗಳೂರು ನಗರವನ್ನು ಸ್ವಚ್ಚವಾಗಿ ಇರುವಂತೆ ನೋಡಿಕೊಳ್ಳಬೇಕು. ಆದರೆ ರಸ್ತೆ ಮಧ್ಯದಲ್ಲಿ ಕಸದ ರಾಶಿ ಇದೆ. ಇದನ್ನು ಪರಿಶೀಲನೆ ಮಾಡಿದ್ದೀರಾ. ಇದರ ಹೊಣೆಗಾರಿಕೆಯನ್ನು ಯಾರು ಹೊರಬೇಕು ಎಂದು ಪ್ರಶ್ನಿಸುವ ಮೂಲಕ ಅಧಿಕಾರಿಗಳಿಗೆ ಚಳಿ ಬಿಡಿಸಿದರು. ಇನ್ನು ಈ ಮಧ್ಯೆ ಲಾರಿ ಮಾಲೀಕರ ಸಂಘದ ಜೊತೆ ಚರ್ಚೆ ಮಾಡುವಂತೆಯೂ ಆಯುಕ್ತರಿಗೆ ಸೂಚಿಸಿದ್ದೇನೆ ಎಂದರು.
ಕಸವನ್ನು ತಂದು ರಸ್ತೆಗೆ ಸುರಿಯುತ್ತಿರುವ ವಾಹನಗಳ ಬಗ್ಗೆ ಗಮನಹರಿಸಬೇಕು. ತ್ಯಾಜ್ಯ ಸಂಸ್ಕರಣ ಘಟಕಗಳ ಲೆಕ್ಕಾಚಾರದಲ್ಲಿ ಏರುಪೇರುಗಳಿವೆ. ಅದೆಲ್ಲವನ್ನೂ ಸರಿಪಡಿಸುತ್ತೇವೆ. ಆದ್ದರಿಂದ ಘಟಕಕ್ಕೆ ಬರುವ ಪ್ರತಿ ಕಸದ ವಾಹನಗಳ ವಿಡಿಯೋ ದಾಖಲೆ ಮಾಡಿಸಬೇಕು. ನಂತರ ಎಲ್ಲವೂ ಲೆಕ್ಕ ಸರಿಯಾಗಿ ಹೊಂದಾಣಿಕೆ ಆಗುತ್ತದೆಯೇ ಎಂಬುದನ್ನು ನೋಡಬೇಕು ಎಂದರು
ಇದುವರೆಗೂ ಅಧಿಕಾರಿಗಳು ಪರಿಶೀಲನೆ ಮಾಡದ ಕಾರಣ ಘಟಕಗಳು ದುರ್ವಾಸನೆಯಿಂದ ಕೂಡಿದ್ದು ಕಂಡುಬಂದಿದೆ. ಇದೇ ವೆಳೆ ಇಲ್ಲಿ ಏನೆಲ್ಲ ಆಗಿದೆ, ಯಾವ ರೀತಿ ಕೆಲಸಗಳು ನಡೆಯುತ್ತವೆ ಎನ್ನುವ ದಾಖಲೆಗಳನ್ನು ಪರಿಶೀಲನೆ ನಡೆಸಿದರು. ನಂತರ ಅವರು ಇಲ್ಲಿಂದ ನೇರವಾಗಿ ಕನ್ನಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿ ಅಲ್ಲಿನ ಮೇಲ್ವಿಚಾರಕರಿಂದ ಮಾಹಿತಿ ಪಡೆದರು.
ಪ್ರವೇಶ ದ್ವಾರದ ರಿಜಿಸ್ಟರ್ ಪುಸ್ತಕದಲ್ಲಿ ಆಗಿರುವ ದಾಖಲೆ ಮತ್ತು ಒಳಗೆ ಬಂದಿರುವ ಕಸದ ಲಾರಿಗಳ ಸಂಖ್ಯೆಯಲ್ಲಿ ವ್ಯತ್ಯಾಸವನ್ನು ಗಮನಿಸಿದರು. ಅಲ್ಲದೆ ಇಂಧನ ಉತ್ಪಾದನೆ ಆಗದಿರುವುದನ್ನು ಕೂಡ ಪರಿಶೀಲನೆ ನಡೆಸಿದರು. ಹಾಗೆಯೇ ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕಾರಣೆ, ಇಂಧನ ಉತ್ಪಾದನೆ ಘಟಕಕ್ಕೆ ಭೇಟಿ ನೀಡಿದರು.
ದಾರಿ ಮಧ್ಯದ ಸೀಗೆಹಳ್ಳಿ ರಸ್ತೆಯಲ್ಲಿ ಸಾಗುವಾಗ ರಸ್ತೆ ಬದಿಯಲ್ಲಿ ಕಸದ ರಾಶಿ ಕಂಡ ಡಿಸಿಎಂ ಪರಿಶೀಲನೆಗೆ ಮುಂದಾದರು. ಈ ಸಂದರ್ಭದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಸ ಬಿದ್ದಿರುವುದನ್ನು ಕಂಡು, ಬೆಂಗಳೂರು ನಗರದಲ್ಲೇ ರಸ್ತೆಯಲ್ಲಿ ಈ ರೀತಿ ಕಸ ಎಸೆದು ಹೋದರೆ ಅದಕ್ಕೆ ಹೊಣೆ ಯಾರು? ಎಂದು ಪಾಲಿಕೆ ಅಧಿಕಾರಿಗಳನ್ನು ಪ್ರಶ್ನೆ ಮಾಡುವ ಮೂಲಕ ತರಾಟೆಗೆ ತೆಗೆದುಕೊಂಡರು.
ಎಚ್.ಡಿ.ಕುಮಾರಸ್ವಾಮಿ ಅವರ ಪೆನ್‌ಡ್ರೈವ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಏನಾದರೂ ಮಾಡಿಕೊಳ್ಳಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಈ ವಿಚಾರವಾಗಿ ಮುಂದೆ ಮಾತನಾಡೋಣ ಎಂದು ತಿಳಿಸಿದರು. ನಂತರ ಡಿಕೆಶಿ ಅವರು ಯಶವಂತಪುರದ ಸೀಗೇಹಳ್ಳಿ ಘನ ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಘಟಕ ಕಾರ್ಯಾರಂಭ ಮಾಡದಿರುವುದನ್ನು ಕೂಡ ಗಮನಿಸಿದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications